ಇಂದು ಶಾಲಾರಂಭ; ಶಾಲೆಗಳು ತಳಿರು ತೋರಣಗಳಿಂದ ಸಿಂಗಾರ
ಮೊದಲ 2 ವಾರ "ಮಳೆಬಿಲ್ಲು' ಕಾರ್ಯಕ್ರಮ; "ಕಲಿಕಾ ಚೇತರಿಕೆ ವರ್ಷ' ಎಂದು ಘೋಷಣೆ
Team Udayavani, May 16, 2022, 7:20 AM IST
ಬೆಂಗಳೂರು: ಎರಡು ವರ್ಷ ಗಳ ಬಳಿಕ ಸೋಮವಾರದಿಂದ (ಮೇ 16) ರಾಜ್ಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಶಾಲೆ ಗಳು ಆರಂಭವಾಗುತ್ತಿದ್ದು, ಶಾಲಾವರಣ ವನ್ನು ತಳಿರು ತೋರಣಗಳಿಂದ ಸಿಂಗರಿಸಿ ಹಬ್ಬದ ವಾತಾವರಣ ಸೃಷ್ಟಿಸಲಾಗಿದೆ.
ಮೊದಲ ದಿನ ಮಕ್ಕಳಿಗೆ ಸಿಹಿ ವಿತರಿಸಿ ಬರಮಾಡಿಕೊಳ್ಳಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಖುಷಿಯಿಂದ ಶಾಲೆಗೆ ಬರುವಂಥ ವಾತಾವರಣ ನಿರ್ಮಿಸ ಬೇಕೆಂದು ಶಿಕ್ಷಣ ಇಲಾಖೆಯು ಶಿಕ್ಷಕರಿಗೆ ನಿರ್ದೇಶನ ನೀಡಿದೆ.
ಕಲಿಕಾ ಚೇತರಿಕೆ ವರ್ಷ
2022-23ನೇ ಶೈಕ್ಷಣಿಕ ವರ್ಷವನ್ನು ನಿಗದಿತ ಸಮಯಕ್ಕಿಂತ 15 ದಿನ ಮೊದಲೇ ಆರಂಭಿಸಲಾಗುತ್ತಿದೆ. ಈ ವರ್ಷವನ್ನು “ಕಲಿಕಾ ಚೇತರಿಕೆ ವರ್ಷ’ವೆಂದು ಘೋಷಿಸ ಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರಿನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಹಿಂದಿನ ವರ್ಷದ ಬಸ್ ಪಾಸ್‌ಗಳನ್ನು ತೋರಿಸಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ಎರಡು ವರ್ಷ ಮನೆಯಲ್ಲಿಯೇ ಇದ್ದ ಮಕ್ಕಳು ಶಾಲೆಗೆ ಬಂದ ತತ್‌ಕ್ಷಣ ಪಾಠಗಳಿಗೆ ಹೊಂದಿಕೊಳ್ಳುವುದು ಕಷ್ಟವಾಗಲಿದೆ ಎಂಬುದನ್ನು ಅರಿತಿರುವ ಶಿಕ್ಷಣ ಇಲಾಖೆ, ಪಠ್ಯೇತರ ಚಟುವಟಿಕೆಗಳ ಮೂಲಕ ಮಕ್ಕಳನ್ನು ಶಾಲೆಯತ್ತ ಆಕರ್ಷಿಸುವುದಕ್ಕಾಗಿ ಆರಂಭದ ಎರಡು ವಾರ “ಮಳೆಬಿಲ್ಲು’ ಕಾರ್ಯಕ್ರಮ ರೂಪಿಸಿದೆ.
ಶಾಲೆಗಳಲ್ಲಿ ಕುಡಿಯುವ ನೀರು, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ, ಹಾಜರಾತಿ, ದಾಖಲಾತಿ ಇವುಗಳನ್ನು ಪರಿಶೀಲಿಸಲು, ಅಕ್ಷರ ದಾಸೋಹ ಕಾರ್ಯಕ್ರಮ ಅನುಷ್ಠಾನ, ಮಕ್ಕಳ ದಾಖಲಾತಿ ಪ್ರಗತಿ ಸಹಿತ ಶಾಲಾ ಯೋಜನೆಗಳ ಕುರಿತು ಬಿಇಒ ಹಾಗೂ ಎಸ್‌ಡಿಎಂಸಿಗಳು ಸಭೆ ನಡೆಸುವಂತೆ ಸೂಚಿಸಲಾಗಿದೆ.
27 ಸಾವಿರ ಅತಿಥಿ ಶಿಕ್ಷಕರ ನೇಮಕ
ಆರಂಭದ ದಿನವೇ ಶಾಲೆಯಲ್ಲಿ ಶಿಕ್ಷಕರು ಇರುವಂತೆ ಇಲಾಖೆ ನೋಡಿಕೊಂಡಿದೆ. ಇದಕ್ಕಾಗಿ 27 ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಕಲಿಕೆಯಲ್ಲಿ ಉಂಟಾಗಿರುವ ಹಿನ್ನಡೆ ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸ ಲಾಗುತ್ತಿದೆ. ಈ ಸಂಬಂಧ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗಿದೆ. ಮಕ್ಕಳು ಖುಷಿಯಿಂದ ಶಾಲೆಗೆ ಆಗ ಮಿಸಿ ಕಲಿಕೆ ಮುಂದು ವರಿಸಬೇಕು.
-ಬಿ.ಸಿ. ನಾಗೇಶ್, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.