ಎಪಿಎಂಸಿ ಚುನಾವಣೆಗೆ ಜಿಲ್ಲಾದ್ಯಂತ ಭಾರೀ ಸಿದ್ಧತೆ

ಚುನಾವಣ ಅಧಿಸೂಚನೆ ಶೀಘ್ರ ಪ್ರಕಟ

Team Udayavani, May 16, 2022, 10:41 AM IST

apmc

ಸುರತ್ಕಲ್‌: ಕೃಷಿ ಉತ್ಪನ್ನ ಸಹಕಾರ ಸಮಿತಿಗಳು ಮತ್ತೂಂದು ಚುನಾವಣೆ ಸಮರಕ್ಕೆ ಸಜ್ಜಾಗಿದ್ದು, ಚುನಾವಣ ಸಂಬಂಧಿತ ಅಧಿಸೂಚನೆ ಶೀಘ್ರವೇ ಪ್ರಕಟವಾಗಲಿದೆ. ಅಧಿಕಾರಕ್ಕಾಗಿ ಪೈಪೋಟಿ ಏರ್ಪಡುವ ಸಾಧ್ಯತೆಗಳು ಕಂಡುಬರುತ್ತಿವೆ.

ಜಿಲ್ಲಾಧಿಕಾರಿಗಳು ಮೀಸಲು ನಿಗದಿಪಡಿಸಿ ಸರಕಾರಕ್ಕೆ ಕಳುಹಿಸಿದ ಬಳಿಕವೇ ಅಧಿಸೂಚನೆ ಹೊರಬಿದ್ದು ಚುನಾವಣೆ ಘೋಷಣೆಯಾಗುತ್ತದೆ. ಬಹುತೇಕ ಜಿಲ್ಲೆಗಳ ಚುನಾವಣೆ ಪೂರ್ವ ತಯಾರಿ ಮುಗಿದಿದ್ದು, ಘೋಷಣೆಯಾಗುವುದೊಂದೇ ಬಾಕಿಯಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲೆಯೂ ಚುನಾವಣೆಗೆ ಸಜ್ಜಾಗುತ್ತಿದೆ.

ಎಪಿಎಂಸಿಗಳ ಅಧಿಕಾರಾವಧಿ ಫೆಬ್ರವರಿ ತಿಂಗಳಲ್ಲಿ ಕೊನೆಗೊಂಡಿತ್ತು. ಆದರೆ ಸರಕಾರವು ಅವರ ಚಟುವಟಿಕೆಗಳ ಮೇಲ್ವಿಚಾರಣೆಗೆ ಆಡಳಿತಾಧಿಕಾರಿಗಳನ್ನು ನೇಮಿಸಿತ್ತು. ಮುಂದಿನ ವರ್ಷ ರಾಜ್ಯ ವಿಧಾನ ಸಭೆಗೆ ಚುನಾವಣೆ ನಡೆಯ ಲಿರುವುದರಿಂದ ಹಿಡಿತ ಸಾಧಿಸಲು ಎಪಿಎಂಸಿ ಚುನಾವಣೆ ಪೂರಕವಾಗಲಿದೆ.

ಅಭ್ಯರ್ಥಿಗಳು ಪಕ್ಷದ ಚಿಹ್ನೆಗಳ ಮೇಲೆ ಚುನಾವಣೆಗೆ ನಿಲ್ಲದಿದ್ದರೂ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುವುದು ಇತ್ತೀಚಿನ ವರ್ಷಗಳಲ್ಲಿ ಚುನಾವಣೆ ಕಣವನ್ನು ರಂಗೇರಿಸುತ್ತಿದೆ. ಕೋಟಿಗಟ್ಟಲೆ ವಹಿವಾಟು ನಡೆಸುವ, ರೈತರೊಂದಿಗೆ ನೇರ ಸಂಪರ್ಕ ಹೊಂದಿರುವ ಎಪಿಎಂಸಿಗಳನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವಂತೆ ಸ್ಥಳೀಯ ಶಾಸಕರು ಹಾಗೂ ಪಕ್ಷದ ಮುಖಂಡರು ಪ್ರಚಾರ ನಡೆಸುವುದು ಸಾಮಾನ್ಯ. ಈ ಎಲ್ಲ ವರ್ಷಗಳಲ್ಲಿ ರಾಜ್ಯಾದ್ಯಂತ ಬಹುತೇಕ ಎಪಿಎಂಸಿಗಳಲ್ಲಿ ಈ ಹಿಂದೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳ ಪ್ರಾಬಲ್ಯವಿತ್ತು. ಬಿಜೆಪಿಯ ಪ್ರಭಾವ ಶಿವಮೊಗ್ಗ, ಉಡುಪಿ, ದ.ಕ. ಜಿಲ್ಲೆಗಳ ಕೆಲವು ತಾಲೂಕುಗಳಿಗೆ ಸೀಮಿತವಾಗಿತ್ತು. ಇದೀಗ ಬದಲಾದ ಸಂದರ್ಭದಲ್ಲಿ ಬಿಜೆಪಿ ಪ್ರಭಾವ ಹೆಚ್ಚುವಂತಾಗಿದೆ.

ಎಎಂಪಿಸಿ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಮತ್ತು ರಾಜ್ಯಗಳೆರಡೂ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ, ಬೆಳೆ ವಿಮಾ ಯೋಜನೆ ಮತ್ತು ಸಾಲದ ಕವರೇಜ್‌ ಹೆಚ್ಚಳದೊಂದಿಗೆ ಪ್ರಧಾನ ಮಂತ್ರಿ ಫಸಲ್‌ ವಿಮಾ ಯೋಜನೆಯನ್ನು ಪರಿಚಯಿಸಿದೆ. ಅಭಿವೃದ್ಧಿಯ ಮಂತ್ರದೊಂದಿಗೆ ಈ ಬಾರಿ ಬಿಜೆಪಿ ಎಲ್ಲೆಡೆ ಸ್ಪರ್ಧಿಸುವ ಹುಮ್ಮಸ್ಸು ತೋರಿಸುತ್ತಿದೆ. ಎಪಿಎಂಸಿಗಳಿಗೆ ನಡೆಯುವ ಚುನಾವಣೆಯಲ್ಲಿ ರಾಜ್ಯದಲ್ಲಿ ಸುಮಾರು 33 ಲಕ್ಷ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಹಲವು ಸ್ಥಳೀಯ ಮುಖಂಡರು ತಮ್ಮ ಬೆಂಬಲಕ್ಕಾಗಿ ಶಾಸಕರ, ಸಹಕಾರಿ ಸಂಘಗಳ ಬಾಗಿಲು ತಟ್ಟುತ್ತಿದ್ದಾರೆ.

ಸರಕಾರ ತಿದ್ದುಪಡಿ ಮೂಲಕ ಎಪಿಎಂಸಿಗಳನ್ನು ಬಲಪಡಿಸಿದೆ. ಖಾಸಗಿ ಸಂಸ್ಥೆಗಳಿಗೆ ಸಮಾನಾಂತರ ವ್ಯವಸ್ಥೆಗೆ ಉತ್ತೇಜನ ನೀಡಿರುವುದರಿಂದ ರೈತರಿಗೆ ಲಾಭವಾಗುತ್ತಿದೆ. ಚುನಾವಣೆ ಪ್ರತಿಷ್ಠೆಯ ಹೋರಾಟ ವಾಗುವುದಿಲ್ಲ ಎಂಬುದು ಮಂಗಳೂರು ಉತ್ತರ ವಿಧಾನ ಸಭೆ ಕ್ಷೇತ್ರದ ಶಾಸಕ ಡಾ| ಭರತ್‌ ಶೆಟ್ಟಿ ವೈ. ಅಭಿಪ್ರಾಯ.

ರಾಜ್ಯದಲ್ಲಿ ಸುಮಾರು 160 ಎಪಿಎಂಸಿಗಳಿದ್ದು, ಕೋವಿಡ್‌-19 ನಿರ್ಬಂಧಗಳನ್ನು ಸಡಿಲಿಸಿರುವುದರಿಂದ ಚುನಾವಣೆ ನಡೆಯಲಿದೆ. ಆಯಾ ಜಿಲ್ಲೆಯ ಜಿಲ್ಲಾ ಧಿಕಾರಿಗಳು ಚುನಾವಣೆಗೆ ಮೀಸಲಾತಿ ನಿಗದಿಪಡಿ ಸಲಿದ್ದಾರೆ ಎಂದು ಎಪಿಎಂಸಿ ನಿರ್ದೇಶಕರು ತಿಳಿಸಿದ್ದಾರೆ.

ಒಟ್ಟು 18 ಸದಸ್ಯರು

ಸರಕಾರವು ರೈತರಿಂದ ಚುನಾಯಿತರಾಗಲು 11 ಸದಸ್ಯರಿಗೆ ಮೀಸಲಾತಿ ಘೋಷಿಸಲಿದ್ದು, ತೋಟಗಾರಿಕೆ, ವ್ಯಾಪಾರಿಗಳು ಮತ್ತು ತಾಲೂಕು ಕೃಷಿ ಉತ್ಪನ್ನ ಸಹಕಾರ ಸಂಘಗಳಿಂದ ತಲಾ ಒಬ್ಬರು ಆಯ್ಕೆಯಾಗಲಿದ್ದಾರೆ. ಸರಕಾರವು ಪ್ರತಿ ಎಪಿಎಂಸಿಗೆ ಮೂರು ಸದಸ್ಯರನ್ನು ನಾಮನಿರ್ದೇಶನ ಮಾಡಬಹುದು, ಅವರು ಮತದಾನದ ಅಧಿಕಾರವನ್ನು ಸಹ ಚಲಾಯಿಸಬಹುದಾಗಿದೆ. ಹೀಗೆ ಒಟ್ಟು 18 ಸದಸ್ಯರು ಇರುತ್ತಾರೆ.

ಪೂರಕ ಕ್ರಮ ಪೂರ್ಣ

ಮಂಗಳೂರು ತಾಲೂಕು ಎಪಿಎಂಸಿ ಸದಸ್ಯರ ಚುನಾವಣೆಗೆ ಪೂರ್ವತಯಾರಿ ಮುಗಿದಿದೆ. ಸರಕಾರಕ್ಕೆ ಬೇಕಾದ ಮಾಹಿತಿ ಕಳಿಸಲಾಗಿದೆ. ಸರಕಾರದಿಂದ ಸೂಚನೆ ಬಂದ ಕೂಡಲೇ ಜಿಲ್ಲಾಧಿಕಾರಿಗಳು ಚುನಾವಣೆಗೆ ಪೂರಕ ಕ್ರಮಕೈಗೊಳ್ಳಲಿದ್ದಾರೆ. -ಪುರಂದರ ಹೆಗ್ಡೆ, ತಹಶೀಲ್ದಾರ್‌

ಟಾಪ್ ನ್ಯೂಸ್

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.