ಅಣವಾರ-ಮೋತಕಪಳ್ಳಿ ರಸ್ತೆ ಸುಧಾರಣೆಗೆ ಕ್ರಮ
Team Udayavani, May 16, 2022, 12:58 PM IST
ಚಿಂಚೋಳಿ: ತಾಲೂಕಿನ ಅಣವಾರ-ಮೋತಕಪಳ್ಳಿ ಗ್ರಾಮದ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣಕ್ಕಾಗಿ ಶಾಸಕ ಡಾ| ಅವಿನಾಶ ಜಾಧವ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಿಂದ ಪೋಲಕಪಳ್ಳಿ-ಅಣವಾರ ಗ್ರಾಮಕ್ಕೆ ಹೊಸ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಮಾಡುವುದಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ 95ಲಕ್ಷ ರೂ. ಮಂಜೂರಿ ಮಾಡಲಾಗಿದೆ. ಆದರೆ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಹತ್ತಿರದಿಂದ ಅಣವಾರ ಗ್ರಾಮಪಂಚಾಯಿತಿ ಕಚೇರಿ ವರೆಗೆ ಸುಮಾರು ಎರಡು ಕಿ.ಮೀ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ರಸ್ತೆ ಅತ್ಯಂತ ಕಿರಿದಾಗಿದೆ. ಇದರಿಂದ ಆಟೋ, ದ್ವಿಚಕ್ರ ವಾಹನಗಳು, ಎತ್ತಿನ ಬಂಡಿಗಳು ಓಡಾಡಲು ತೀವ್ರ ತೊಂದರೆಯಾಗಿದೆ ಎಂದು ಗ್ರಾಮಸ್ಥ ವಿಶ್ವನಾಥ ಪಾಟೀಲ ಶಾಸಕರ ಗಮನಕ್ಕೆ ತಂದರು.
ಪೋಲಕಪಳ್ಳಿ-ಅಣವಾರ ಗ್ರಾಮದ ರಸ್ತೆ ಅನೇಕ ವರ್ಷಗಳಿಂದ ಹದಗೆಟ್ಟಿದ್ದರಿಂದ ಹೊಸ ರಸ್ತೆ ನಿರ್ಮಾಣವಾಗುತ್ತಿದೆ. ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಎಇಇ ಮಹ್ಮದ್ ಅಹೆಮದ್ ಹುಸೇನ, ತಾಪಂ ಇಒ ಅನಿಲಕುಮಾರ ರಾಠೊಡ, ಎಇಇ ಆನಂದ ಕಟ್ಟಿ, ಎಇಇ ಪ್ರಕಾಶ ಕುಲಕರ್ಣಿ, ಸಿಪಿಐ ಮಹಾಂತೇಶ ಪಾಟೀಲ, ಗ್ರಾಪಂ ಅಧ್ಯಕ್ಷ ಜಾಕೀರ ಪಟೇಲ, ನಂದಕುಮಾರ ಪಾಟೀಲ, ಹಣಮಂತ ಭೋವಿ, ಬಕ್ಕಪ್ಪ ಪೂಜಾರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.