ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ
Team Udayavani, May 16, 2022, 3:14 PM IST
ಇತ್ತೀಚೆಗಷ್ಟೇ ನಟಿ ಐಂದ್ರಿತಾ ರೇ ಅಭಿನಯದ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರ ತೆರೆಗೆ ಬಂದಿತ್ತು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಸುಮಾರು ಮೂರು ವರ್ಷಗಳ ನಂತರ ಐಂದ್ರಿತಾ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದರು. ಇದರ ಬೆನ್ನಲ್ಲೇ ಈ ವಾರ ಐಂದ್ರಿತಾ ನಾಯಕಿಯಾಗಿ ಅಭಿನಯಿಸಿರುವ ಮತ್ತೂಂದು ಚಿತ್ರ “ಗರುಡ’ ತೆರೆಗೆ ಬರುತ್ತಿದೆ.
ಈ ಹಿಂದೆ “ಸಿಪಾಯಿ’ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದ ಸಿದ್ಧಾರ್ಥ್ ಮಹೇಶ್ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ಐಂದ್ರಿತಾ ರೇ ಮತ್ತು ಅಶಿಕಾ ರಂಗನಾಥ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ನಟ ಶ್ರೀನಗರ ಕಿಟ್ಟಿ ಚಿತ್ರದಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕಾಮ್ನಾ ಜೇಠ್ಮಲಾನಿ, ರಮೇಶ್ ಭಟ್, ರಂಗಾಯಣ ರಘು, ಆದಿ ಲೊಕೇಶ್, ರಾಜೇಶ್ ನಟರಂಗ, ರವಿಶಂಕರ್ ಗೌಡ, ಗಿರಿ, ಸುಜಯ್ ಶಾಸ್ತ್ರೀ, ಸುನೇತ್ರಾ ಪಂಡಿತ್, ಮೈಕೋ ನಾಗರಾಜ್, ಜಹಾಂಗೀರ್ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇನ್ನು “ಗರುಡ’ ಔಟ್ ಆ್ಯಂಡ್ ಔಟ್ ಫ್ಯಾಮಿಲಿ ಸಬೆjಕ್ಟ್ ಸಿನಿಮಾ ಎಂಬುದು ಚಿತ್ರತಂಡ ಮಾತು. ಒಂದು ಆ್ಯಕ್ಷನ್, ಲವ್, ಎಮೋಷನ್ಸ್, ಕಾಮಿಡಿ ಎಲ್ಲವೂ ಸಿನಿಮಾದಲ್ಲಿದೆ. ಈಗಾಗಲೇ ಬಿಡುಗಡೆಗೊಂಡಿರುವ “ಗರುಡ’ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸಿನಿಮಾ ಥಿಯೇಟರ್‌ನಲ್ಲಿ ಪ್ರೇಕ್ಷಕರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಐಂದ್ರಿತಾ ಅವರದ್ದು.
ಇದನ್ನೂ ಓದಿ:ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?
ಬಿ.ಕೆ. ರಾಜಾ ರೆಡ್ಡಿ, ಕಿಶೋರ್ “ಗರುಡ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ನೂರಾರು ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿ ಸೈ ಎನಿಸಿಕೊಂಡಿರುವ ಧನಕುಮಾರ್.ಕೆ ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಚಿತ್ರದ ಹಾಡುಗಳಿಗೆ ರಘು ದೀಕ್ಷಿತ್ ಸಂಗೀತ ಸಂಯೋಜಿಸಿದ್ದು, ಜೈ ಆನಂದ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.
ಒಟ್ಟಾರೆ ಒಂದೇ ತಿಂಗಳ ಅಂತರದಲ್ಲಿ ಎರಡನೇ ಬಾರಿಗೆ ಹೊಸ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿರುವ ಐಂದ್ರಿತಾ ತೆರೆಮೇಲೆ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗುತ್ತಾರೆ ಅನ್ನೋದು ಇದೇ ವಾರಾಂತ್ಯಕ್ಕೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal; ಶಿವಣ್ಣ ಡ್ರೀಮ್ ಪ್ರಾಜೆಕ್ಟ್ ಭೈರತಿ ಮೈಲುಗಲ್!
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
Darshan; ಭರ್ಜರಿ ಓಪನಿಂಗ್ ನಿರೀಕ್ಷೆಯಲ್ಲಿ ನವಗ್ರಹ: ರೀರಿಲೀಸ್ ಚಿತ್ರದಲ್ಲಿ ದರ್ಶನ್ ಹವಾ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.