‘ಕಟ್ಟಿಂಗ್ ಶಾಪ್’ನಲ್ಲಿ ರ್ಯಾಪ್ ಸಾಂಗ್!
Team Udayavani, May 16, 2022, 4:31 PM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ಕಟ್ಟಿಂಗ್ ಶಾಪ್’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೀಗ “ಅಯ್ಯೋ.. ಅಯ್ಯಯ್ಯೋ… ಹಲ್ಲಿದ್ದವ್ನಿಗೆ ಕಡ್ಲೆ ಇಲ್ಲ…’ ಎಂಬ ರ್ಯಾಪ್ ಸಾಂಗ್ ಅನ್ನು ಬಿಡುಗಡೆ ಮಾಡಿದೆ. ಆಲ್ ಓ.ಕೆ ಹಾಡಿರುವ ಈ ಹಾಡಿಗೆ ಕೆ. ಬಿ ಪ್ರವೀಣ್ ಸಂಗೀತ ಸಂಯೋಜಿಸಿದ್ದು, ಈ ಹಾಡು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಅಂದಹಾಗೆ, ಸಿನಿಮಾ ಎಡಿಟರ್‌ಗಳ ಕುರಿತಾದ ಕಥೆ ಈ ಸಿನಿಮಾದಲ್ಲಿರುವುದರಿಂದ, ಸಿನಿಮಾಕ್ಕೆ “ಕಟಿಂಗ್ ಶಾಪ್’ ಎಂದು ಹೆಸರಿಡಲಾಗಿದೆ. ಈ ಹಿಂದೆ “ಆಪರೇಶನ್ ಅಲಮೇಲಮ್ಮ’, “ಮಾಯಾಬಜಾರ್’, “ಅಳಿದು ಉಳಿದವರು’, “ರಾಂಚಿ’ ಮೊದಲಾದ ಸಿನಿಮಾಗಳಿಗೆ ಸ್ಕ್ರಿಪ್ಟ್ ರೈಟರ್ ಮತ್ತು ಗೀತ ಸಾಹಿತಿಯಾಗಿ ಕೆಲಸ ಮಾಡಿದ ಅನುಭವವಿರುವ ಪವನ್ ಭಟ್, “ಕಟ್ಟಿಂಗ್ ಶಾಪ್’ ಸಿನಿಮಾಕ್ಕೆ ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಬರೆದು ಮೊದಲ ಬಾರಿಗೆ ನಿರ್ದೇಶನವನ್ನೂ ಮಾಡಿದ್ದಾರೆ.
ಯು-ಟ್ಯೂಬ್ ಚಾನೆಲ್‌ನಲ್ಲಿ ಒಂದಷ್ಟು ಕಿರುಚಿತ್ರಗಳ ಮೂಲಕ ಗುರುತಿಸಿಕೊಂಡಿರುವ, “ಆಪರೇಷನ್ ಅಲಮೇಲಮ್ಮ’, “ಮಯಾ ಬಜಾರ್’ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಪ್ರವೀಣ್ ಈ ಸಿನಿಮಾಕ್ಕೆ ಕಥೆ ಬರೆದು, ಸಂಗೀತ ನೀಡಿ ಜೊತೆಗೆ ತೆರೆಮೇಲೆ ನಾಯಕ ನಟನಾಗಿ ಅಭಿನಯಿಸಿದ್ದಾರೆ.
ಅರ್ಚನಾ ಕೊಟ್ಟಿಗೆ, ದೀಪಕ್ ಭಟ್, ಅಭಿಷೇಕ್ ಸಾವಳಗಿ, ನವೀನ್ ಕೃಷ್ಣ, ಭಗವಾನ್, ಓಂ ಪ್ರಕಾಶ್ ರಾವ್, ವತ್ಸಲಾ ಮೋಹನ್, ಕೆ. ಉಮೇಶ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸದ್ಯ ಟೈಟಲ್, ಟ್ರೇಲರ್, ರ್ಯಾಪ್ ಸಾಂಗ್ ಮೂಲಕ ಸೌಂಡ್ ಮಾಡುತ್ತಿರುವ “ಕಟ್ಟಿಂಗ್ ಶಾಪ್’ ಹೇಗಿರಲಿದೆ ಅನ್ನೋದು ಇದೇ ಮೇ. 20ಕ್ಕೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.