ಸ್ವಾಮೀಜಿಗಳ ವಿರೋಧಕ್ಕೆ ಸರ್ಕಾರ ಮಣಿಯದಿರಲಿ
Team Udayavani, May 16, 2022, 5:28 PM IST
ಕೊಪ್ಪಳ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಗೆ ವಿರೋಧ ವ್ಯಕ್ತಪಡಿಸುವ ಸ್ವಾಮಿಗಳ ನಡೆಗೆ ಎಸ್‌ಎಫ್‌ಐ ತೀವ್ರ ವಿರೋಧ ವ್ಯಕ್ತಪಡಿಸಿ ತಮ್ಮ ಅಸಮಾಧಾನ ಹೊರ ಹಾಕಿದ್ದಲ್ಲದೇ, ಮೊಟ್ಟೆ ವಿತರಣೆ ಮುಂದುವರಿಯಲಿ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂದು ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿ ಹಿನ್ನೆಲೆಯಲ್ಲಿ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ 3 ದಿನ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುತ್ತಿದೆ. ಆದರೆ ಕೆಲ ಸ್ವಾಮಿಗಳು ಜಾತಿ ಮತ್ತು ಧಾರ್ಮಿಕತೆ, ನಂಬಿಕೆ ಹೆಸರಿನಲ್ಲಿ ಮೊಟ್ಟೆ ವಿತರಣೆ ವಿರೊಧೀಧಿಸಿ, ಸಿಎಂ ಮೂಲಕ ಮೊಟ್ಟೆ ವಿತರಣೆ ತಡೆಯಬೇಕೆಂದು ಒತ್ತಡ ಹೇರುತ್ತಿದ್ದಾರೆ.
ಸರ್ಕಾರದ ಆದೇಶವನ್ನು ವಾಪಸ್ ಪಡೆಯಬೇಕೆಂದು ಸಿಎಂ ಮೇಲೆ ಒತ್ತಡ ಹಾಕುತ್ತಿರುವುದು ಸರಿಯಲ್ಲ. ಮೊಟ್ಟೆ ತಿನ್ನುವುದು ಹಾಗೂ ತಿನ್ನದಿರುವುದು ಮಕ್ಕಳ ಆಯ್ಕೆಯಾಗಿರುತ್ತದೆ. ಇದನ್ನೇ ತಿನ್ನಬೇಕು, ಇದನ್ನೇ ತಿನ್ನಬಾರದೆಂದು ಆಹಾರದ ಹಕ್ಕಿನ ಮೇಲೆ ಸ್ವಾಮಿಗಳು ದಾಳಿ ಮಾಡುವುದನ್ನು ಎಸ್‌ಎಫ್‌ಐ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಯಾದಗಿರಿ-ಶೇ.74, ಕಲಬುರಗಿ-ಶೇ.72.4, ಬಳ್ಳಾರಿ-ಶೇ. 72.3, ಕೊಪ್ಪಳ-ಶೇ.70.7, ರಾಯಚೂರು-ಶೇ.70.6, ಬಿದರ್-ಶೇ.69.1, ವಿಜಯಪುರ-ಶೇ.68ರಷ್ಟು ಇದೆ. ಈ ಸಮಸ್ಯೆ ನಿವಾರಣೆಗೆ ಸ್ವಾಮಿಗಳು ಶ್ರಮ ವಹಿಸಲಿ.
ಅದನ್ನು ಬಿಟ್ಟು ಜಾತಿ, ಧರ್ಮದ ಹೆಸರಿನಲ್ಲಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಇವರ ಕ್ಷುಲ್ಲಕ ಮನಸ್ಥಿತಿಯನ್ನು ಎಸ್‌ಎಫ್‌ಐ ಸಂಘಟನೆ ವಿರೋ ಧಿಸುತ್ತದೆ. ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ನಂತರ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಶೇ. 10ರಿಂದ 12ರಷ್ಟು ಏರಿಕೆ ಕಂಡು ಬಂದಿದೆ. 80ರಷ್ಟು ಮಕ್ಕಳು ಮೊಟ್ಟೆ ಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸುಮಾರು 14,44,000 ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮೊಟ್ಟೆ ಸಹಾಯವಾಗಲಿದೆ. ಇದನ್ನು ಸ್ವಾಮಿಗಳು ಅರಿಯಬೇಕೆಂದು ಒತ್ತಾಯಿಸಿದರು.
ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ವಿವಿಧ ಜಾತಿ-ಧರ್ಮದ ತುಳಿತಕ್ಕೆ ಒಳಗಾದ ಸಮುದಾಯದ, ಬಡವರ, ಹಿಂದುಳಿದ ವರ್ಗ ಸಮುದಾಯದ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ರಾಜ್ಯದ ಎಲ್ಲ ಶಾಲೆಗಳಿಗೂ ಅಪೌಷ್ಟಿಕತೆ ನಿವಾರಣೆಗಾಗಿ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡಲು ಸರ್ಕಾರ ಮುಂದಾಗಬೇಕೆಂದು ಎಸ್‌ಎಫ್‌ಐ ಸಂಘಟನೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಅಮರೇಶ ಕಡಗದ, ನಾಗರಾಜ ಉತ್ತನೂರು, ರಾಜಬಕ್ಷಿ, ಅಮರೇಶ ಪೂಜಾರ, ಭೀಮೇಶ, ಶಂಕರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.