ಜಾಲಿರೈಡ್ ವೇಳೆ ರಸ್ತೆ ಅಪಘಾತ: ಅಪ್ರಾಪ್ತ ಚಾಲಕ ಸಾವು
Team Udayavani, May 16, 2022, 8:47 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಜಾಲಿರೈಡ್ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ತೀವ್ರವಾಗಿ ಗಾಯಗೊಂಡಿದ್ದ ಅಪ್ರಾಪ್ತ ಬೈಕ್ ಚಾಲಕ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾರಣ್ಯಪುರ ಸ್ವಾಗತ್ ಲೇಔಟ್ ನಿವಾಸಿ ಸಂತೋಷ್ ಕುಮಾರ್ (15) ಮೃತ ಸವಾರ. ನಗರದ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ಸಂತೋಷ್ ಪೋಷಕರು ಭಾನುವಾರ ಆಂಧ್ರಪ್ರದೇಶದ ದೇವಸ್ಥಾನಕ್ಕೆ ತೆರಳಿದ್ದರು.
ಸಹೋದರ ಬಿಇ ವ್ಯಾಸಂಗ ಮಾಡುತ್ತಿದ್ದು, ಹೊರಗೆ ಹೋಗಿದ್ದ. ಸಂಜೆ 4.30ರ ಸುಮಾರಿಗೆ ಸಹೋದರನ ದ್ವಿಚಕ್ರ ವಾಹನ ತೆಗೆದುಕೊಂಡು ಜಾಲಿ ರೈಡ್ ಮಾಡಲು ಹೋಗಿದ್ದಾನೆ. ಜಿಕೆವಿಕೆ ಡಬಲ್ ರಸ್ತೆಯಲ್ಲಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ್ದು, ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸಂತೋಷ್ ತಲೆಗೆ ಗಂಭೀರ ಪೆಟ್ಟು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾನೆ.
ಈ ವೇಳೆ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಆಟೋ ಚಾಲಕರೊಬ್ಬರು ಸಂತೋಷ್ ನೆರವಿಗೆ ಧಾವಿಸಿ ಕೂಡಲೇ ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಲ್ಮೆಟ್ ಧರಿಸದ ಪರಿಣಾಮ ಸಂತೋಷ್ ಕುಮಾರ್ ತೆಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು. ರಾತ್ರಿ 10.30ರ ಸುಮಾರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂತೋಷ್ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.