ವಿಕಲಚೇತನರ ಸಮಸ್ಯೆ ಪರಿಹಾರ ಸಭೆ : ಜಿಲ್ಲಾಧಿಕಾರಿ ಸೂಚನೆ


Team Udayavani, May 16, 2022, 11:41 PM IST

ವಿಕಲಚೇತನರ ಸಮಸ್ಯೆ ಪರಿಹಾರ ಸಭೆ: ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಜಿಲ್ಲೆಯ ವಿಕಲಚೇತನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ 3ನೇ ಸೋಮವಾರ ಸಭೆಯನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅವರು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಅವರಿಗೆ ಸೂಚಿಸಿದ್ದಾರೆ.

ಮೇ 16ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಕುಂದುಕೊರತೆ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ವಿಕಲಚೇತನರ ಸಮಸ್ಯೆಗಳನ್ನು ಪರಿಹರಿಸುವ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಬೇಕು. ಸಭೆಯಲ್ಲಿ ಕುಂದು ಕೊರತೆ ಅಥವಾ ಅಹವಾಲುಗಳು ಇತ್ಯರ್ಥವಾಗಬೇಕು, ಜಿಲ್ಲೆಯ ಎಲ್ಲ ತಾಲೂಕುಗಳ ವಿ.ಆರ್‌.ಡಬ್ಲ್ಯು. ಮತ್ತು ಎಂ.ಆರ್‌.ಡಬ್ಲ್ಯು.ಗಳು ಆಯಾ ತಾಲೂಕಿನ ಸಿ.ಡಿ.ಪಿ.ಒ. ಕಚೇರಿಗಳಲ್ಲಿರುವ ಕಂಪ್ಯೂಟರ್‌ ಬಳಸಿ ಕೊಂಡು ಆನ್‌ಲೈನ್‌ ಮೂಲಕ ಭಾಗವಹಿಸಬೇಕು ಅಥವಾ ಜೂಮ್‌ ಆ್ಯಪ್‌ ಮೂಲಕ ಆನ್‌ಲೈನ್‌ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವಂತೆ ಲಿಂಕ್‌ಅನ್ನು ಸೃಷ್ಟಿಸಿ ಕೊಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ವಿಕಲಚೇತನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಭಾಗವಹಿಸಲು ತಿಳಿಸಬೇಕು. ಸರಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳು, ಅವರ ಸಮಸ್ಯೆಗಳು, ಇತ್ಯಾದಿಗಳನ್ನು 3ನೇ ಸೋಮವಾರದ ಸಭೆಯಲ್ಲಿ ಇತ್ಯರ್ಥಪಡಿಸಲಾಗುವುದು. ಈ ಸಭೆಯನ್ನು ನಿಯಮಿತವಾಗಿ ಆಯೋಜಿಸದಿದ್ದರೆ ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬುದ್ಧಿಮಾಂದ್ಯ ಮಕ್ಕಳ ಪಿಂಚಣಿಯನ್ನು 800 ರೂ.ನಿಂದ 1,400 ರೂ.ಗಳಿಗೆ ಹೆಚ್ಚಿಸಲಾಗಿದೆ. ಹಾಗೂ ಮಕ್ಕಳ ಪೋಷಣ ಭತ್ತೆಯನ್ನು 2,000 ರೂ.ಗಳಿಗೆ ಹೆಚ್ಚಿಸಲಾಗಿದ್ದು, ಈ ಮೊತ್ತ ಅರ್ಹರಿಗೆ ಸಂದಾಯವಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಮುರಳೀಧರ ನಾಯಕ್‌, ಸಾನ್ನಿಧ್ಯ ವಿದ್ಯಾ ಸಂಸ್ಥೆ, ಚೇತನ ವಿದ್ಯಾ ಸಂಸ್ಥೆ, ಸೈಂಟ್‌ ಆಗ್ನೆಸ್‌ ವಿಶೇಷ ಶಾಲೆಯ ಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.