ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
Team Udayavani, May 17, 2022, 12:02 AM IST
ಕಲಬುರಗಿ: ಪಿಎಸ್ಐ ಪರೀಕ್ಷಾ ಅಕ್ರಮದ ಕಿಂಗ್ಪಿನ್ ಮಂಜುನಾಥ ಮೇಳಕುಂದಿ ಆಸ್ತಿ ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಂಡಿರುವ ಸಿಐಡಿ ಅಧಿಕಾರಿಗಳು ಸೋಮವಾರ ಮೇಳಕುಂದಿ ಅಕ್ರಮ ನಡೆಸಲು ಬಳಸಿರುವ ಕಾರನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಇದೇ ವೇಳೆ ಹಲವು ಆರೋಪಿತರ ಮನೆಗಳಲ್ಲಿ ಮತ್ತು ಬ್ಯಾಂಕ್ ಲಾಕರ್ಗಳನ್ನು ಶೋಧ ಮಾಡಿದಾಗ ಚಿನ್ನ ಮತ್ತು ಜಮೀನು ದಾಖಲೆಗಳು ಪತ್ತೆಯಾಗಿವೆ. ಅಲ್ಲದೆ, ಅಕ್ರಮ ಹಣದಿಂದ ಖರೀದಿ ಮಾಡಿರುವ ಐಷಾರಾಮಿ ವಸ್ತುಗಳು ಕೂಡ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ 2ನೇ ಬಾರಿಗೆ ಸಿಐಡಿ ಅಧಿಕಾರಿಗಳ ವಶದಲ್ಲಿರುವ ಜ್ಞಾನಜ್ಯೋತಿ ಶಾಲೆ ಮುಖ್ಯ ಶಿಕ್ಷಕ ಕಾಶಿನಾಥ, ಎಂಎಸ್ಐ ಕಾಲೇಜಿನಲ್ಲಿ ನಡೆದ ಹಗರಣದಲ್ಲಿ ಪಾಲ್ಗೊಂಡಿರುವ ಹಿನ್ನಲೆಯಲ್ಲಿ ಅಲ್ಲಿನ ಅಕ್ರಮದಲ್ಲಿ ಇತರ ಪಾತ್ರದ ಕುರಿತು ವಿಚಾರಣೆ ಮಾಡಿದ್ದಾರೆ. ಕೆಲವು ಸ್ಫೋಟಕ ಮಾಹಿತಿ ನೀಡಿದ್ದು, ಅದರ ಆಧಾರದಲ್ಲಿ ಮಂಗಳವಾರ ಇನ್ನಷ್ಟು ಜನರ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.
ಪಾಟೀಲ್, ಹಾಗರಗಿ ವಿರುದ್ಧ ಸಾಕ್ಷ್ಯ ಲಭ್ಯ
ಈ ಎಲ್ಲ ಬೆಳವಣಿಗೆಯ ಮಧ್ಯೆ ಕಿಂಗ್ಪಿನ್ ಆರ್.ಡಿ. ಪಾಟೀಲ ಮತ್ತು ದಿವ್ಯಾ ಹಾಗರಗಿ ಪರೀಕ್ಷೆಯಲ್ಲಿ ಪಾಸ್ ಮಾಡಲು ಅಭ್ಯರ್ಥಿಗಳೊಂದಿಗೆ ಡೀಲ್ ಮಾಡಿದ ಕುರಿತು ಸಿಐಡಿ ಅಧಿಕಾರಿಗಳಿಗೆ ಸಾಕ್ಷ್ಯ ಲಭ್ಯವಾಗಿದೆ. ಒಟ್ಟು 9 ಅಭ್ಯರ್ಥಿಗಳ ಮಾಹಿತಿ ಈಗ ಸಿಐಡಿ ಬಳಿ ಇದೆ. ಈ ಮಧ್ಯೆ ಪಿಎಸ್ಐ ಪರೀಕ್ಷೆ ಬರೆದು ಹಣ ನೀಡಿ ಪಾಸಾಗಿರುವ ಕೆಲವು ಅಭ್ಯರ್ಥಿಗಳು ಊರು ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.