‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ


Team Udayavani, May 17, 2022, 8:51 AM IST

777 charlie

ತನ್ನ ಟೈಟಲ್‌, ಫ‌ಸ್ಟ್‌ಲುಕ್‌ ಪೋಸ್ಟರ್‌ ಮತ್ತು ಟೀಸರ್‌ ಮೂಲಕ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದ “777 ಚಾರ್ಲಿ’ ಸಿನಿಮಾದ ಟ್ರೇಲರ್‌ ಸೋಶಿಯಲ್‌ ಮೀಡಿಯಾಗಳಲ್ಲಿ ಬಿಡುಗಡೆಯಾಗಿದೆ.

ಇನ್ನು ಮನುಷ್ಯ ಮತ್ತು ನಾಯಿಯ ನಡುವಿನ ಸಂಬಂಧವನ್ನು ನವಿರಾಗಿ ಟ್ರೇಲರ್‌ನಲ್ಲಿ ತರಲಾಗಿದ್ದು, ಸುಮಾರು 3 ನಿಮಿಷ 50 ಸೆಕೆಂಡ್‌ ಅವಧಿಯ ಟ್ರೇಲರ್‌ನಲ್ಲಿ ಧರ್ಮ ಎಂಬ ಪಾತ್ರದಲ್ಲಿ ನಟ ರಕ್ಷಿತ್‌ ಶೆಟ್ಟಿ, “ಚಾರ್ಲಿ’ ಎಂಬ ಪಾತ್ರದಲ್ಲಿ ನಾಯಿ ಕಾಣಿಸಿಕೊಂಡಿದೆ.

ಕೆಲಸ, ಸಿಗರೇಟ್‌, ಕುಡಿತ ಅಂತಿದ್ದ ಧರ್ಮನ ಜೀವನದಲ್ಲಿ “ಚಾರ್ಲಿ’ ಎಂಬ ನಾಯಿ ಎಂಟ್ರಿ ಕೊಟ್ಟ ಬಳಿಕ ಏನೆಲ್ಲ ನಡೆಯುತ್ತದೆ. ನೋಡು ನೋಡುತ್ತ ಧರ್ಮನ ಜೀವನ ಹೇಗೆ ಬದಲಾಗುತ್ತಾನೆ. ಧರ್ಮ ಮತ್ತು ಚಾರ್ಲಿಯ ನಡುವಿನ ಈ ಸಂಬಂಧವೇ ಸಿನಿಮಾ ಕಥೆ ಎನ್ನುವ ಸಣ್ಣ ಎಳೆಯೊಂದನ್ನು “777 ಚಾರ್ಲಿ’ ಟ್ರೇಲರ್‌ನಲ್ಲಿ ತೋರಿಸಲಾಗಿದೆ.

ಟ್ರೇಲರ್‌ನಲ್ಲಿ ಬರುವ ಧರ್ಮ ಮತ್ತು ಚಾರ್ಲಿ ಎರಡೂ ಪಾತ್ರಗಳು ಮತ್ತು ದೃಶ್ಯಗಳು ಆರಂಭದಲ್ಲಿ ನಗಿಸುತ್ತ, ನಡುವೆ ಗಂಭೀರವಾಗುತ್ತಾ, ಕೊನೆಯಲ್ಲಿ ನೋಡುಗರ ಕಣ್ಣಂಚಿನಲ್ಲಿ ನೀರು ತರುವಂತೆ ಮಾಡುತ್ತದೆ. ಟ್ರೇಲರ್‌ನಲ್ಲಿ ಕಾಣುವ ಕಲಾವಿದರು, ದೃಶ್ಯಗಳು, ಸಂಭಾಷಣೆ, ಹಿನ್ನೆಲೆ ಸಂಗೀತ, ಛಾಯಾಗ್ರಹಣ ಎಲ್ಲದರ ಸಣ್ಣ ಝಲಕ್‌ “777 ಚಾರ್ಲಿ’ಯ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ ಎನ್ನಲು ಅಡ್ಡಿಯಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಶ್ವಾನವನ್ನೇ ಪ್ರಮುಖ ಪಾತ್ರವನ್ನಾಗಿಟ್ಟುಕೊಂಡು ಕನ್ನಡದಲ್ಲಿ ಬಂದಿದ್ದು ಕೇವಲ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ. ಇಂಥ ತೀರಾ ವಿರಳ ಸಿನಿಮಾಗಳ ಸಾಲಿಗೆ, ಇದೀಗ “777 ಚಾರ್ಲಿ’ ಕೂಡ ಸೇರ್ಪಡೆಯಾಗುತ್ತಿದೆ. ಸದ್ಯ ಬಿಡುಗಡೆಯಾಗಿರುವ “777 ಚಾರ್ಲಿ’ ಟ್ರೇಲರ್‌ ಭಾವನಾತ್ಮಕವಾಗಿ ನೋಡುಗರಿಗೆ ಹತ್ತಿರವಾಗುವಂತಿದ್ದು, ಟ್ರೇಲರ್‌ ಬಿಡುಗಡೆಯಾದ ಎರಡೇ ಗಂಟೆಗಳಲ್ಲಿ ಬರೋಬ್ಬರಿ 1.3 ಮಿಲಿಯನ್‌ ಅಧಿಕ ವೀವ್ಸ್‌ ಪಡೆದುಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುಗರಿಂದ “777 ಚಾರ್ಲಿ’ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ “777 ಚಾರ್ಲಿ’ ಟ್ರೇಲರ್‌ಗೆ ಇದೇ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಪ್ರಿಯರ ಜೊತೆ ಅನೇಕ ಸ್ಟಾರ್‌ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Love Reddy Movie Review

Love Reddy Movie Review: ಕಾಡುವ ಪ್ರೀತಿ ಹೊಸ ರೀತಿ

Tenant Movie Review

Tenant Movie Review: ಅಕ್ರಮ-ಸಕ್ರಮದಲ್ಲೊಂದು ಸಂಗ್ರಾಮ!

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.