ಸಿಎಂ ಭೇಟಿ: ಕಾನೂನು ಸುವ್ಯವಸ್ಥೆ ಪಾಲನೆಗೆ ಸೂಚನೆ
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ
Team Udayavani, May 17, 2022, 12:49 PM IST
ಚಿಕ್ಕಮಗಳೂರು: ಮೇ 18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಭದ್ರತೆ, ರಕ್ಷಣಾ ವ್ಯವಸ್ಥೆ ಹಾಗೂ ಪ್ರವಾಸ ಕಾಲದಲ್ಲಿ ಸೂಕ್ತ ಕಾನೂನು ಸುವ್ಯವಸ್ಥೆ ಮತ್ತು ಶಿಸ್ತುಪಾಲನಾ ಕ್ರಮಗಳನ್ನು ಪಾಲಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೂಚಿಸಿದರು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ 18 ರಂದು ಬೆಳಗ್ಗೆ 11:30 ಕ್ಕೆ ಚಿಕ್ಕಮಗಳೂರಿಗೆ ಆಗಮಿಸುವ ಮುಖ್ಯಮಂತ್ರಿಗಳು, ಮಧ್ಯಾಹ್ನ 12:30ಕ್ಕೆ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಅವರು ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಹಾಗೂ ಬಸವ ತತ್ವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು,ಈ ಸಂಬಂಧ ಎಲ್ಲಾ ಇಲಾಖೆಗಳು ತಮ್ಮ ಯೋಜನೆಗಳ ವರದಿ, ಹಿನ್ನೆಲೆ, ಅನುದಾನ, ವೆಚ್ಚ, ಫಲಾನುಭವಿಗಳು, ಸಮಸ್ಯೆಗಳು ಮುಂತಾದ ಸಂಪೂರ್ಣ ಮಾಹಿತಿಗಳನ್ನು ಒಟ್ಟುಗೂಡಿಸಿ ಸಂಕ್ಷಿಪ್ತವಾಗಿ ವರದಿ ಸಲ್ಲಿಸಲು ಅವರು ಸೂಚಿಸಿದರು.
ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮಗಳ ಸ್ಥಳಗಳಲ್ಲಿ ನಿರಂತರ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಆಗದಂತೆ ನಿಗಾ ವಹಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಮೆಸ್ಕಾಂ ಅಧಿಕಾರಿಗಳಿಗೆ ಎಸ್ಪಿ ಎಂ.ಎಚ್.ಅಕ್ಷಯ್ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯಿಂದ 9.8 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅರಣ್ಯ ಭವನದ ಶಂಕುಸ್ಥಾಪನೆ, 30 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕಚೇರಿ ಸಂಕೀರ್ಣದ ಶಂಕುಸ್ಥಾಪನೆ, ನೂತನ ಪ್ರವಾಸಿ ಮಂದಿರ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಗಳನ್ನು ಅವರು ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಖರಾಯಪಟ್ಟಣದಲ್ಲಿ ನಿರ್ಮಿಸಲಾಗಿರುವ ಐಟಿಐ ಕಾಲೇಜನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿಗಳು, ಕಲ್ಯಾಣನಗರ ಬಳಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹಿಳಾ ಕ್ರೀಡಾ ವಿದ್ಯಾರ್ಥಿನಿಲಯ, 3.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಫುಟ್‌ಬಾಲ್ ಅಂಕಣ, ಶೃಂಗೇರಿಯಲ್ಲಿ 24.22 ಕೋಟಿ ರೂ. ಹಾಗೂ ಕಳಸದಲ್ಲಿ 22.67 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳನ್ನು ಉದ್ಘಾ ಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ. 4.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಉದ್ಘಾಟನೆ, ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಗ್ರಾಮದಲ್ಲಿ ಒಟ್ಟು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಮುದಾಯ ಭವನಗಳಿಗೆ ವರ್ಚುವಲ್ ಆಗಿ ಚಾಲನೆ ನೀಡಲಿರುವ ಅವರು ಸರ್ಕಾರದಿಂದ ಮಂಜೂರಾಗಿರುವ ಒಟ್ಟು 14.5ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 4 ಸೇತುವೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ತಿಳಿಸಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 16 ರಸ್ತೆಗಳಿಗೆ ಶಂಕುಸ್ಥಾಪನೆ, ನರೇಗಾ ಯೋಜನೆಯಡಿ 170 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲೆ, ಅಂಗನವಾಡಿ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳಿಗೆ ಅವರು ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ ಎಂದು ಜಿಪಂ ಸಿಇಒ ಜಿ.ಪ್ರಭು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಹಿರಿಯ ಉಪವಿಭಾಗಾಧಿಕಾರಿ ಡಾ| ಎಚ್.ಎಲ್. ನಾಗರಾಜ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಇದ್ದರು.
ನಾಳೆ ಸಿಎಂ ಭೇಟಿ
ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಜಿಲ್ಲೆಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬುಧವಾರ ಸಂಜೆ 4.30ಕ್ಕೆ ಮುಖ್ಯಮಂತ್ರಿಗಳು ಚಿಕ್ಕಮಗಳೂರು ಜಿಪಂ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಸ್ವೀಕರಿಸುವರು. ಮುಖ್ಯಮಂತ್ರಿಗಳಿಗೆ ಅಹವಾಲುಗಳನ್ನು ಸಲ್ಲಿಸಲು ಇಚ್ಛಿಸುವ ಸಾರ್ವಜನಿಕರು ಮುಂಚಿತವಾಗಿ ತಮ್ಮ ವಿವರಗಳನ್ನು ನೋಂದಣಿ ಮಾಡಲು ಜಿಪಂ ಕಚೇರಿಯಲ್ಲಿ ಅಥವಾ ಡಿ.ಸಿ. ಕಚೇರಿ ಆವರಣದಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.