ವರ್ಷಗಳ ಬಳಿಕ ಶಾಲೆಗಳಲ್ಲಿ ಮಕ್ಕಳ ಕಲರವ

ವಿದ್ಯಾಮಂದಿರಗಳಲ್ಲಿ ಮನೆ ಮಾಡಿದ ಹಬ್ಬದ ಸಂಭ್ರಮ

Team Udayavani, May 17, 2022, 2:41 PM IST

17

ಹಾವೇರಿ: ಜಿಲ್ಲಾದ್ಯಂತ ಸೋಮವಾರ 1ರಿಂದ 10ನೇ ತರಗತಿಯ ಶಾಲೆಗಳು ಆರಂಭಗೊಂಡಿದ್ದು, ತಳಿರು ತೋರಣ, ರಂಗೋಲಿಗಳಿಂದ ಸಿಂಗರಿಸಿದ್ದ ಶಾಲೆಗಳತ್ತ ಮಕ್ಕಳು ಸಂಭ್ರಮದಿಂದ ಹೆಜ್ಜೆಹಾಕಿದರು.

ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಶೈಕ್ಷಣಿಕ ವಾತಾವರಣ ಕಳೆಕುಂದಿತ್ತು. ಈ ಬಾರಿ ಕೊರೊನಾ ನೇಪಥ್ಯಕ್ಕೆ ಸರಿದಿದ್ದು, ಶಾಲಾ ಆವರಣ ಲವಲವಿಕೆಯಿಂದ ಕೂಡಿತ್ತು. ಕೆಲವು ಶಾಲೆಗಳಲ್ಲಿ ಶಿಕ್ಷಕರು ಸಿಹಿ ವಿತರಣೆ, ಪುಷ್ಪಗುಚ್ಛ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದು, ಒಟ್ಟು 1160 ಪ್ರಾಥಮಿಕ ಹಾಗೂ 141 ಪ್ರೌಢಶಾಲೆಗಳು ಸೇರಿದಂತೆ 1301 ಶಾಲೆಗಳಿವೆ. ಮೊದಲ ದಿನ ಜಿಲ್ಲೆಯಲ್ಲಿ ಶೇ.25-30 ಮಕ್ಕಳು ಶಾಲೆಗೆ ಹಾಜರಾಗಿದ್ದು, ಮಳೆಬಿಲ್ಲು ಕಾರ್ಯಕ್ರಮದಡಿ ಚಟುವಟಿಕೆಗಳೊಂದಿಗೆ ಶಿಕ್ಷಕರು ಬೋಧನೆ ಆರಂಭಿಸಿದ್ದಾರೆ ಎಂದು ಡಿಡಿಪಿಐ ಬಿ.ಎಸ್‌. ಜಗದೀಶ್ವರ ತಿಳಿಸಿದರು.

ಹಬ್ಬದ ಸಂಭ್ರಮ: ಸರ್ಕಾರಿ ಶಾಲೆಗಳು ಸೇರಿದಂತೆ ಖಾಸಗಿ ಶಾಲೆಗಳಲ್ಲಿ ಮಕ್ಕಳ ಕಲರವ ಮರುಕಳಿಸಿದೆ. ಹಂದಿಗನೂರ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು. ಶಿಕ್ಷಕರು ಶಾಲೆಯನ್ನು ಬಣ್ಣ ಬಣ್ಣದ ರಂಗೋಲಿ, ತಳಿರು ತೋರಣಗಳಿಂದ ಶೃಂಗರಿಸಿದ್ದರು. ವಿದ್ಯಾರ್ಥಿಗಳಿಗೆ ಪೆನ್ನು ವಿತರಿಸುವ ಮೂಲಕ ಸ್ವಾಗತ ಕೋರಲಾಯಿತು. ಹೊಸರಿತ್ತಿಯ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಅಕ್ಷರ ಮಾಲೆಯನ್ನು ಹಾಕಿ ಸ್ವಾಗತಿಸಿದರು.

ನಗರ ಕೆಲವು ಶಾಲೆಗಳಲ್ಲಿ ಸರಸ್ವತಿ-ಗಣೇಶ ಭಾವಚಿತ್ರಗಳಿಗೆ ಪೂಜೆ ಮಾಡಿ ಶಾಲೆ ಆರಂಭಕ್ಕೆ ಮುನ್ನುಡಿ ಹಾಡಿದರು. ಹೂ ನೀಡಿ ಸ್ವಾಗತ-ಬಿಸಿಯೂಟದಲ್ಲಿ ಸಿಹಿ: ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಹಿ, ಗುಲಾಬಿ ಹೂ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಎಸ್‌ಡಿಎಂಸಿ ಎಲ್ಲ ಸದಸ್ಯರು ಹಾಗೂ ಪೋಷಕರು ಪಾಲ್ಗೊಂಡು ಮಕ್ಕಳಿಗೆ ಶುಭ ಕೋರಿದರು. ಶಾಲಾ ಆರಂಭೋತ್ಸವದ ದಿನದಿಂದಲೇ ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಣೆಗೆ ಕ್ರಮ ಕೈಗೊಳ್ಳಲಾಗಿತ್ತು.

ಮೊದಲ ದಿನ ವಿದ್ಯಾರ್ಥಿಗಳಿಗೆ ಬಿಸಿಯೂಟದಲ್ಲಿ ಸಿಹಿ ವಿತರಿಸುವಂತೆ ಎಲ್ಲ ಶಾಲೆಗಳ ಮುಖ್ಯೊಪಾಧ್ಯಾಯರಿಗೆ ಸೂಚನೆ ನೀಡಿದ್ದರಿಂದ ಹೋಳಿಗೆ, ಕಡ್ಲಿಬೆಳೆ ಪಾಯಸ, ಜಿಲೇಬಿ, ಗೋದಿ ಹುಗ್ಗಿ ಸೇರಿದಂತೆ ವಿವಿಧ ಸಿಹಿ ಪದಾರ್ಥಗಳನ್ನು ಉಣ ಬಡಿಸಲಾಯಿತು. ಈಗಾಗಲೇ ಬಿಸಿಯೂಟಕ್ಕೆ ಬೇಕಾದ ಅಕ್ಕಿ, ಬೆಳೆ, ಬೆಲ್ಲ, ಎಣ್ಣೆ ಸೇರಿದಂತೆ ಎಲ್ಲ ಸಾಮಗ್ರಿಗಳನ್ನು ಶಾಲೆಗಳಿಗೆ ವಿತರಿಸಲಾಗಿದ್ದು, ಯಾವುದೇ ಸಾಮಗ್ರಿಗಳು ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.