ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ


Team Udayavani, May 17, 2022, 2:57 PM IST

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಮಾಗಡಿ: ಸುಂದರ ಪ್ರಕೃತಿಯ ಮಡಿಲಲ್ಲಿರುವ ಇತಿಹಾಸ ಪ್ರಸಿದ್ಧ ಸಾವನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಭಕ್ತಸಾಗರದನಡುವೆ ವಿಜೃಂಭಣೆಯಿಂದ ಜರುಗಿತು.

ಶಾಸಕ ಎ.ಮಂಜುನಾಥ್‌ ಹಾಗೂ ಮಾಜಿ ಸಚಿವ ಎಚ್‌.ಎಂ.ರೇವಣ್ಣ, ರೆವಿನ್ಯೂ ಅಧಿಕಾರಿ ವೆಂಕಟೇಶ್‌ಹಾಗೂ ಇತರರು ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದಪೂಜೆ ಸಲ್ಲಿಸಿ ಚಾಲನೆ ನೀಡಿ ಭಕ್ತ ಸಾಗರರೊಡಗೂಡಿ ರಥ ಎಳೆದರು.ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿದರು.

ರಥ ಎಳೆಯು ತ್ತಿದ್ದಂತೆ ಇತ್ತ ಭಕ್ತಸಮೂಹ ಮಜ್ಜಿಗೆಪಾನಕ, ಕೋಸಂ ಬರಿ ವಿತರಣೆ ಮಾಡುತ್ತಿದ್ದ ದೃಶ್ಯಸಾಮಾನ್ಯವಾಗಿತ್ತು. ರಥೋತ್ಸವದ ಪ್ರಯುಕ್ತ ವಿವಿಧಸಮಾಜದವರಿಂದ ಅನ್ನದಾಸೋಹ ಅರವಂಟಿಕೆ ಏರ್ಪಡಿಸಲಾಗಿತ್ತು. ಸಹಸ್ರಾರು ಭಕ್ತರು ದಾಸೋಹ ಸ್ವೀಕರಿಸಿದರು. ಸಂಜೆ ವಿವಿಧ ಉತ್ಸವಾದಿಗಳು ನಡೆಯಿತು.

ದೇವರ ಆರ್ಶೀವಾದ: ಈ ವೇಳೆ ಸುದ್ದಿಗಾರರೊಂದಿಗೆ ಶಾಸಕ ಎ.ಮಂಜುನಾಥ್‌ ಮಾತನಾಡಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿರಥಕ್ಕೆ ಚಾಲನೆ ನೀಡುತ್ತಿದ್ದಂತೆ ದೇವರ ಮೇಲಿದ್ದಹೂವು ಬಲಭಾಗದಿಂದ ಬಿದ್ದಿದೆ. ದೇವರ ಆರ್ಶೀವಾದ ಆಗಿದೆ. ದೇವರ ದಯೆಯಿಂದ ಈ ಬಾರಿ ಉತ್ತಮ ಮಳೆ ಬೀಳಲಿದೆ ಎಂಬ ನಂಬಿಕೆಯಿದೆ.ಸಮೃದ್ಧ ವಾಗಿ ಬೆಳೆ ಬರುತ್ತದೆ. ನಾಡಿನ ರೈತರು ಸಮೃದ್ಧಿ ಯಾಗಿ ಬದುಕು ನಡೆಸುವಂತಾಗಲಿ ಎಂದರು.

ಸಾಂಸ್ಕೃತಿಕ ಉತ್ಸವ: ಜಾತ್ರಾ ಮಹೋತ್ಸವದ ಅಂಗವಾಗಿ ದೇವರ ವಿವಿಧ ಉತ್ಸವಾದಿಗಳು ಹಾಗೂ ಜಾನ ಪದ ಕಲಾ ಸಾಂಸ್ಕೃತಿಕ ಉತ್ಸವಾದಿಗಳು ಅದ್ಧೂರಿಯಾಗಿ ನಡೆಯಿತು. ಅಂಕನಹಳ್ಳಿ ಶಿವಣ್ಣ ಅವರ ಪೂಜೆಕುಣಿತ ಭಕ್ತರನ್ನು ಆಕರ್ಷಿಸಿತ್ತು. ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಶಾಸಕ ಎ. ಮಂಜುನಾಥ್‌ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಜಾತ್ರಾ ಮಹೋತ್ಸವ ಎಂದ ಮೇಲೆ ಸಹಸ್ರಾರು ಭಕ್ತರುಭಾಗವಹಿಸುವುದು ಸಾಮಾನ್ಯ ವಾಗಿರುತ್ತದೆ. ಪೊಲೀಸರು ರಸ್ತೆ ಬದಿ ಇದ್ದ ವಾಹನ ಗಳನ್ನು ತೆಗೆಸಿ ಸುಗಮಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಪ್ರಾಣಿ, ಪಕ್ಷಿಗಳಿಲ್ಲದೇ ಬಣಗುಡುತ್ತಿರುವ ವನದಾಮ :

ಪ್ರಸಿದ್ಧ ಪ್ರವಾಸಿ ತಾಣದಲ್ಲಿ ಕೆಂಪೇಗೌಡ ವನದಾಮದಲ್ಲಿ ಯಾವುದೇ ಪ್ರಾಣಿ, ಪಕ್ಷಿಗಳಿಲ್ಲದ ವನದಾಮ ಬಣಗುಡುತ್ತಿತ್ತು. ಕೆಂಪೇಗೌಡ ವನದಾಮಕ್ಕೆ ನೂರಾರು ಭಕ್ತರು ತಮ್ಮ ಮಕ್ಕಳೊಂದಿಗೆ ತೆರಳಿದ್ದವರಿಗೆ ನಿರಾಸೆ ಉಂಟಾಗಿತ್ತು. ಸುಂದರವಾದ ಪ್ರಕೃತಿ ದತ್ತ ಸಾವನದುರ್ಗ ಪ್ರವಾಸಿಗರ ಸ್ವರ್ಗಾ ಎಂದೇ ಕರೆಯಲಾಗಿದೆ.ಇಲ್ಲಿನ ಕೆಂಪೇಗೌಡ ವನದಾಮದಲ್ಲಿ ಯಾವುದೇ ಪ್ರಾಣಿ ಪಕ್ಷಿಗಳು ಇಲ್ಲಿದರುವುದು ನಿಜಕ್ಕೂ ವಿಪರ್ಯಾಸ.ಸಂಬಂಧಪಟ್ಟ ಪ್ರವಾಸೋದ್ಯಮ ಸಚಿವರು ಇತ್ತ ಗಮನಹರಿಸಿ ಪ್ರವಾಸಿಗರ ಅನುಕೂಲಕ್ಕಾಗಿ ಮೂಲ ಸೌಕರ್ಯಗಳನ್ನು ಒದಗಿಸಬೇಕು. ವನದಾಮ ಅಭಿವೃದ್ಧಿ ಪಡಿಸುವಂತೆ ನಾಗರಿಕರು ಆಗ್ರಹಿಸಿದರು.

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.