ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಎಐಎಂಎಸ್‌ಎಸ್ ಮನವಿ
Team Udayavani, May 17, 2022, 3:38 PM IST
ವಿಜಯಪುರ: ನಗರದಲ್ಲಿರುವ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಬಾಣಂತಿಯರ ಶಸ್ತ್ರಚಿಕಿತ್ಸೆ ಮಾಡಿದ ಲೋಪ ಪ್ರಕರಣ ಅತ್ಯಂತ ಆತಂಕಕಾರಿ ಸಂಗತಿ. ಕೂಡಲೇ ಈ ಪ್ರಕರಣದ ತನಿಖೆ ನಡೆಸುವಂತೆ ಆಗ್ರಹಿಸಿ ಎಐಎಂಎಸ್‌ಎಸ್ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ಸೋಮವಾರ ಸಂಘಟನೆಯ ಜಿಲ್ಲಾ ಸಂಚಾಲಕಿ ಶಿವಬಾಳಮ್ಮ ಕೊಂಡಗೂಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ| ವಿ.ಬಿ. ದಾನಮ್ಮವರ ಅವರಿಗೆ ಮನವಿ ಸಲ್ಲಿಸಿದ ಮಹಿಳಾ ಸಂಘಟನೆ ಕಾರ್ಯಕರ್ತರು, ಮಾಧ್ಯಮದಲ್ಲಿ ವರದಿಯಾದಂತೆ ವಿಜಯಪುರ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಶಸ್ತ್ರಚಿಕತ್ಸೆಯ ಬಳಿಕ ಹೊಲಿಗೆ ಬಿಚ್ಚಿಕೊಂಡು ಸಮಸ್ಯೆಯಾಗಿ ಬಾಣಂತಿಯರು ನರಳುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ ದೇಹದ ಭಾಗದಲ್ಲಿ ಸೋಂಕು ತಗುಲಿ ಬಾಣಂತಿಯರು ನೋವಿನಿಂದ ನರಳುತ್ತಿರುವ ಘಟನೆ ಆಘಾತಕಾರಿ ವಿಷಯ ಎಂದು ಜಿಲ್ಲಾಡಳಿತಕ್ಕೆ ವಿವರಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರೇ ಹೆಚ್ಚಾಗಿ ಚಿಕಿತ್ಸೆ ಪಡೆಯುತ್ತಾರೆ. ಕೆಳ ಮಧ್ಯಮ ಹಾಗೂ ಕಡುಬಡವರು ಮಹಿಳೆಯರು ಹೆರಿಗೆ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮೊರೆ ಹೋಗುತ್ತಾರೆ. ಇಂಥ ಸಂದರ್ಭದಲ್ಲಿ ಬಾಣಂತಿಯರಿಗೆ ಸರಿಯಾದ ಆರೈಕೆ, ಚಿಕಿತ್ಸೆ ಸಿಗದೆ ನೋವಿನಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಸದರಿ ಸಮಸ್ಯೆಗೆ ಶಸ್ತ್ರ ಚಿಕಿತ್ಸಾ ಘಟಕ ಒಂದೇ ಇರುವುದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಕೂಡಲೇ ಇದನ್ನು ಸರಿಪಡಿಸಿ, ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಗರ್ಭಿಣಿಯರ ಆರೋಗ್ಯ ಸೇವೆಯಲ್ಲಿ ಬೇಜವಾಬ್ದಾರಿ ತೋರಿದವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ತರಿಗೆ ಶಿಕ್ಷೆಯಾಗಬೇಕು. ಸೋಂಕಿಗೊಳಗಾದ ಬಾಣಂತಿಯರ ಹೆಚ್ಚಿನ ವಿಶ್ರಾಂತಿ ಹಾಗೂ ಆರೈಕೆಗಾಗಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಮಹಿಳಾ ಸಂಘಟನೆ ಸಹ ಸಂಚಾಲಕಿ ಎಚ್. ಗೀತಾ, ಎಸ್ .ಬಿ. ಶಿವರಂಜನಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.