ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ
Team Udayavani, May 17, 2022, 7:00 PM IST
ಬೆಂಗಳೂರು ; ಮದ್ಯಮಾರಾಟಗಾರರ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಅಬಕಾರಿ ಆಯುಕ್ತರ ಕಚೇರಿಯಲ್ಲಿಂದು ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಕೋರಿಕೆ ಹಿನ್ನೆಲೆಯಲ್ಲಿ ನಡೆದ ಇ-ಇಂಡೆಂಟಿಂಗ್ ನಿಂದ ಉಂಟಾಗಿರುವ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದ್ಯ ಮಾರಾಟಗಾರರು ಕಳೆದ ಒಂದೆರಡು ತಿಂಗಳಿನಿಂದ ಎದುರಿಸುತ್ತಿರುವ ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ಇ-ಇಂಡೆಂಟಿಂಗ್ ಸಮಸ್ಯೆ ಕುರಿತು ಮದ್ಯ ಮಾರಾಟಗಾರರು ನನ್ನ ಗಮನಕ್ಕೆ ತಂದಾಗ ತಕ್ಷಣವೇ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಾಗಿದೆ. ಇಲಾಖಾ ಸಚಿವನಾಗಿ ಸಮಸ್ಯೆಯ ಗಂಭೀರತೆಯನ್ನು ಅರಿತಿದ್ದೇನೆ. ಇದಾದ ನಂತರ ನಡೆದ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಅಧ್ಯಕ್ಷ ಗೋವಿಂದರಾಜ್ ಹೆಗಡೆ ಮಾತನಾಡಿ, ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪಾನೀಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಾಫರ್,ಇಡಿಒ ರಾಜೇಂದ್ರ ಪ್ರಸಾದ್,ಡಾ.ರವಿಶಂಕರ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಲಾರಿ ಪಲ್ಟಿ :ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 15ಕ್ಕೂ ಅಧಿಕ ಎಮ್ಮೆಗಳು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.