ಸರ್ಕಾರದಿಂದ ರೈತರ ನಿರ್ಲಕ್ಷ್ಯ: ಆಕ್ರೋಶ
ರೈತರಿಗೆ ನೀಡಬೇಕಾದ ಬೆಳೆನಷ್ಟ ಪರಿಹಾರ-ಬೆಳೆವಿಮೆ ಹಣ ತಕ್ಷ ಣ ಪಾವತಿಸಲು ಒತ್ತಾಯ
Team Udayavani, May 18, 2022, 2:01 PM IST
ಚಳ್ಳಕೆರೆ: ರೈತರಿಗೆ ಬೆಳೆನಷ್ಟ ಮತ್ತು ಬೆಳೆವಿಮೆ ಹಣ ಪಾವತಿ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಕಚೇರಿ ಮುಂದೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ನೇತೃತ್ವದಲ್ಲಿ ಅನಿರ್ದಿಷ್ಟಕಾಲ ಮುಷ್ಕರ ಹಮ್ಮಿಕೊಂಡಿದ್ದು ಕೃಷಿ ಇಲಾಖೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸ್ಥಳಕ್ಕೆ ಆಗಮಿಸಿ ಭರವಸೆ ನೀಡಿದ ನಂತರ ಮುಷ್ಕರ ವಾಪಸ್ ಪಡೆದರು.
ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ವರ್ಷದ 12 ತಿಂಗಳು ರೈತ ಜಮೀನಿನಲ್ಲೇ ಹಗಲಿರುಳಿ ಬೆವರು ಸುರಿಸಿ ದುಡಿಯುತ್ತಾನೆ. ಆದರೆ, ಕಷ್ಟಪಟ್ಟು ಬೆಳೆದ ಬೆಳೆಗೆ ಎಲ್ಲೂ ಮಾರುಕಟ್ಟೆ ವ್ಯವಸ್ಥೆ ಇಲ್ಲ. ನಾನಾ ಕಾರಣಗಳಿಂದಾಗಿ ಗುಣಮಟ್ಟದ ಬೆಳೆ ಬರುತ್ತಿಲ್ಲ. ಬೆಳೆದ ಅಲ್ಪ ಬೆಳೆಗೂ ಸೂಕ್ತ ಬೆಲೆ ಇಲ್ಲ. ರಾಜ್ಯ ಸರ್ಕಾರವೂ ಬೆಂಬಲ ಬೆಲೆ ನಿಗದಿ ಮಾಡದೆ ನಿರ್ಲಕ್ಷ್ಯ ವಹಿಸಿದೆ. ದಲ್ಲಾಳಿಗಳ ಕೈಗೆ ಸಿಕ್ಕಿ ರೈತರು ಪರಿತಪಿಸುತ್ತಿದ್ದಾರೆ. ಇದರ ಜೊತೆಯಲ್ಲಿ ಸರ್ಕಾರವೂ ಸಹ ಬೆಳೆ ನಷ್ಟ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ರೈತರು ಪಾವತಿಸಿದ ಬೆಳೆವಿಮೆ ಇದುವರೆಗೂ ರೈತನ ಖಾತೆಗೆ ಜಮಾವಾಗಿಲ್ಲ.
ಇದಕ್ಕೆ ಯಾರು ಹೊಣೆ?
ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಧರಣಿ ನಿರತ ಸ್ಥಳಕ್ಕೆ ಆಗಮಿಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್‌ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ರೈತರ ಬೆಳೆ ನಷ್ಟ ಪರಿಹಾರವನ್ನು ದ್ವಿಗುಣಗೊಳಿಸಿ ಅವರವರ ಖಾತೆಗೆ ಜಮಾ ಮಾಡುತ್ತಿದೆ. ಇದುವರೆಗೂ ಜಿಲ್ಲೆಗೆ ಬೆಳೆನಷ್ಟ ಪರಿಹಾರ ರೂಪದಲ್ಲಿ ಸುಮಾರು 80 ಕೋಟಿ ರೂ. ಬಂದಿದ್ದು, ಅದರಲ್ಲಿ 32.50 ಕೋಟಿ ಹಣ ಚಳ್ಳಕೆರೆ ತಾಲೂಕಿನ ರೈತರ ಖಾತೆಗೆ ಜಮಾವಾಗಿದೆ. ಕೆಲವು ರೈತರ ಖಾತೆಯಲ್ಲಿ ಲೋಪದೋಷಗಳಿದ್ದು ಅವರಿಗೆ ಹಣ ಸಂದಾಯವಾಗಿಲ್ಲ. ತಾವು ತಮ್ಮ ಮಾಹಿತಿಯನ್ನು ಸರಿಯಾಗಿ ನೀಡಿದರೆ ನಿಮ್ಮ ಖಾತೆಗೆ ಹಣ ಜಮಾವಾಗಲಿದೆ ಎಂದು ಭರವಸೆ ನೀಡಿದರು.
ಬೆಳೆವಿಮೆ ಕುರಿತಂತೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಒಟ್ಟು ರೈತರಿಗೆ 85 ಕೋಟಿ ಬೆಳೆ ವಿಮೆ ಹಣ ಪಾವತಿಯಾಗದೆ ಬಾಕಿ ಉಳಿದಿದೆ. ಅದರಲ್ಲಿ ಚಳ್ಳಕೆರೆ ತಾಲೂಕಿನ 40 ಗ್ರಾಪಂ ವ್ಯಾಪ್ತಿಯಲ್ಲಿ 45 ಕೋಟಿ ಹಣ ಸಂದಾಯವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಖಾಸಗಿ ವಿಮಾ ಕಂಪನಿಯೊಂದಿಗೆ ಚರ್ಚೆ ನಡೆಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಹಣ ರೈತರ ಖಾತೆಗೆ ಜಮಾ ಆಗಲಿದೆ ಎಂದರು.
ರೈತರಿಂದ ಮನವಿ ಸ್ವೀಕರಿಸಿದ ತಹಶೀಲ್ದಾರ್-2 ಸಂಧ್ಯಾ ಮಾತನಾಡಿ, ರೈತರು ಹಲವಾರು ಬೇಡಿಕೆಗಳ ಬಗ್ಗೆ ಮುಷ್ಕರ ನಡೆಸಿದ್ದು ತಮಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮನವಿ ಮಾಡಿದ್ದೀರಿ. ತಮ್ಮ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡುವ ಭರವಸೆ ನೀಡಿದರು.
ಉಪಕೃಷಿ ನಿರ್ದೇಶಕ ಶಿವಕುಮಾರ್, ಸಹಾಯಕ ಕೃಷಿ ನಿರ್ದೇಶಕ ಆರ್.ಅಶೋಕ್, ಹಿರಿಯ ತೋಟಗಾರಿಕೆ ನಿರ್ದೇಶಕ ವಿರೂಪಾಕ್ಷಪ್ಪ, ಖಾಸಗಿ ವಿಮಾ ಕಂಪನಿ ಪ್ರತಿನಿಧಿಗಳು ಉಪಸ್ಥಿತರಿದ್ದರು.
ದೊಡ್ಡ ಉಳ್ಳಾರ್ತಿ ಕರಿಯಣ್ಣ, ತಿಪ್ಪೇಸ್ವಾಮಿ, ಹಿರೇಹಳ್ಳಿ ಯರ್ರಿಸ್ವಾಮಿ, ಅಧ್ಯಕ್ಷ ಕೆ.ಸಿ. ಶ್ರೀಕಂಠಮೂರ್ತಿ, ಜಿ.ಒ. ಹನುಮಂತಪ್ಪ, ತಿಪ್ಪೇಸ್ವಾಮಿ, ಬಸವರಾಜು, ರಾಜಣ್ಣ, ಟಿ.ತಿಪ್ಪೇಸ್ವಾಮಿ, ಜಯಣ್ಣ, ರತ್ನಮ್ಮ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.