ಪಾರದರ್ಶಕ ಚುನಾವಣೆಗೆ ಸಹಕರಿಸಿ: ಕಾತ್ಯಾಯಿನಿ ದೇವಿ
Team Udayavani, May 18, 2022, 2:47 PM IST
ಚಾಮರಾಜನಗರ: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯನ್ನು ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸುವ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡ ಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾ ಯಿನಿದೇವಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಚುನಾ ವಣೆ ಸಂಬಂಧ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ಮಾದರಿ ನೀತಿ ಸಂಹಿತೆಯು ಮೇ 12ರಿಂದ ಜೂನ್ 17 ರವರೆಗೆ ಜಿಲ್ಲಾದ್ಯಂತ ಜಾರಿಯ ಲ್ಲಿ ರುತ್ತದೆ. ಎಲ್ಲಾ ರಾಜಕೀಯ ಪಕ್ಷಗಳು ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡ ಬೇಕು. ಯಾವುದೇ ಉಲ್ಲಂಘನೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಅವರು ತಿಳಿಸಿದರು.
27ಕ್ಕೆ ನಾಮಪತ್ರ ಪರಿಶೀಲನೆ: ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮೇ 19 ರಂದು ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಅದೇ ದಿನ ದಂದು ನಾಮಪತ್ರ ಸ್ವೀಕೃತಿ ಪ್ರಕ್ರಿಯೆಯು ಪ್ರಾರಂ ಭವಾಗುತ್ತದೆ. ನಾಮಪತ್ರ ಸಲ್ಲಿಸಲು ಮೇ 26 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀ ಲನೆಯನ್ನು ಮೇ 27ರಂದು ನಡೆಸಲಾಗುತ್ತದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 30 ಕಡೆಯ ದಿನವಾಗಿದ್ದು, ಮತದಾನ ದಿನಾಂಕವು ಜೂನ್ 13 ರಂದು ನಿಗದಿಯಾಗಿದ್ದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಅವಧಿ ಇರಲಿದೆ. ಜೂನ್ 15ರಂದು ಮತಗಳ ಎಣಿಕೆ ಕಾರ್ಯವು ನಡೆಯಲಿದೆ ಎಂದರು.
ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರಕ್ಕೆ ಚಾಮ ರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಒಳಪಡುತ್ತವೆ. ಮೈಸೂರಿನ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ ಎಂದು ಹೆಚ್ಚು ವರಿ ಜಿಲ್ಲಾಧಿಕಾರಿಯವರು ತಿಳಿಸಿದರು.
7 ಮೂಲ ಮತಗಟ್ಟೆ: ಜಿಲ್ಲೆಯಲ್ಲಿ ಹಾಲಿ 7 ಮೂಲ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಹೆಚ್ಚಿನ ಮತದಾ ರರು ಇರುವ ಕಡೆ, ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸುವ ಸಂಬಂಧ 5 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ 12 ಮತ ಗಟ್ಟೆಗಳನ್ನು ಸ್ಥಾಪಿಸಿದಂತಾಗುತ್ತದೆ ಎಂದರು. ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ತಾಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆ ಗಳಿಗೆ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೊಠಡಿಗಳು ಲಭ್ಯವಿಲ್ಲದೇ ಇರುವುದರಿಂದ, ಸದರಿ ಮತಗಟ್ಟೆಗಳನ್ನು (ಮತಗಟ್ಟೆ ಸಂಖ್ಯೆ 59 ಮತ್ತು 60) ಕರಿನಂಜನಪುರ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದ ಹತ್ತಿರವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಒಂದೇ ಕಟ್ಟಡದಲ್ಲಿ) ಇಲ್ಲಿಗೆ ಹಾಗೂ ಹನೂರು ತಾಲೂಕಿಗೆ ಸಂಬಂಧಿಸಿದಂತೆ ಹನೂರು ತಾಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿ ರುವ ಮತಗಟ್ಟೆಗೆ ಹೆಚ್ಚುವರಿ ಮತಗಟ್ಟೆಯನ್ನು ಸ್ಥಾಪಿಸಲು ಕೊಠಡಿಗಳು ಲಭ್ಯವಿಲ್ಲದೇ ಇರುವುದ ರಿಂದ, ಸದರಿ ಮತಗಟ್ಟೆಯನ್ನು (ಮತಗಟ್ಟೆ ಸಂಖ್ಯೆ 64) ಹನೂರು ಸರ್ಕಾರಿ ಮಾದರಿ ಹಿರಿಯ ಪ್ರಾಥ ಮಿಕ ಪಾಠಶಾಲೆ (ಬಿಆರ್‌ಸಿ ಕೇಂದ್ರ)ಕ್ಕೆ ಸ್ಥಳಾಂತರಿಸ ಲಾಗಿರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ತಿಳಿಸಿದರು.
ಪಕ್ಷಗಳ ಪ್ರತಿನಿಧಿಗಳಾದ ಚಿಕ್ಕಮಹ ದೇವು, ಎಸ್. ಬಾಲಸುಬ್ರಹ್ಮಣ್ಯ, ಮಹೇಶ್‌ಗೌಡ, ಬ್ಯಾಡ ಮೂಡ್ಲು ಬಸವಣ್ಣ, ಸಯ್ಯದ್ ಅಕ್ರಂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hanur: ಮಾದಪ್ಪನ ಬೆಟ್ಟದಲ್ಲಿ ಉರುಳು ಸೇವೆ ವೇಳೆ ಹೃದಯಾಘಾತಕ್ಕೆ ಭಕ್ತ ಸಾವು
Chamarajanagara: ಹನೂರಲ್ಲಿ ಕಾಡಾನೆ ದಾಳಿಗೆ ಒಬ್ಬ ಸಾವು, ಮತ್ತೊಬ್ಬನಿಗೆ ಗಾಯ
Gundlupete: ಬೋನಿಗೆ ಬಿದ್ದ 3-4 ವರ್ಷದ ಗಂಡು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Eshwar Khandre: ಅರಣ್ಯದೊಳಗೆ ಏಕಬಳಕೆ ಪ್ಲಾಸ್ಟಿಕ್ ನಿಷೇಧ
Gundlupete: ಬಂಡೀಪುರದಲ್ಲಿ ವಾಹನಗಳ ಅಡ್ಡಗಟ್ಟಿದ ಕಾಡಾನೆ: ಆತಂಕ