ಜ್ಞಾನ ವ್ಯಾಪಿ ಮಸೀದಿ ವಿರುದ್ಧ ಷಡ್ಯಂತ್ರ-ಪ್ರತಿಭಟನೆ
Team Udayavani, May 18, 2022, 3:32 PM IST
ಶಿವಮೊಗ್ಗ: ಜ್ಞಾನವ್ಯಾಪಿ ಮಸೀದಿ ವಿರುದ್ಧದ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಿ ಎಸ್ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ) ಕಾರ್ಯಕರ್ತರು ಜಿಲ್ಲಾಧಿ ಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜ್ಞಾನವ್ಯಾಪಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದು ಕಾರಂಜಿ. ಅದು ಮುಸ್ಲಿಮರು ಪ್ರಾರ್ಥನೆಗೂ ಮೊದಲು ಕೈಕಾಲು ತೊಳೆದುಕೊಳ್ಳುವ ಜಾಗವಾಗಿದೆ. ಈಗ ಅದನ್ನೇ ಶಿವಲಿಂಗ ಎಂದು ಬಿಂಬಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
1991ರ ಭಾರತದ ಆರಾಧನಾ ಕಾಯ್ದೆ ಪ್ರಕಾರ 1947ರಿಂದ ಯಾವ ಸ್ಥಳದಲ್ಲಿ ಮಸೀದಿಗಳು, ಚರ್ಚ್ಗಳು, ದೇವಾಲಯಗಳು ಇರುತ್ತವೆಯೋ ಅವುಗಳನ್ನು ಇದ್ದ ಸ್ಥಿತಿಯ ಬಿಡಬೇಕು. ಮತ್ತು ಅವುಗಳಿಗೆ ರಕ್ಷಣೆ ಮಾಡಬೇಕು ಎಂದಿದೆ. ಆದರೆ, ಈ ಕಾಯ್ದೆಯನ್ನು ಮೀರಿ ಕೋಮುವಾದಿ ಶಕ್ತಿಗಳು ದೇಶದಲ್ಲಿ ವಿಷಬೀಜ ಬಿತ್ತಿ, ಕೋಮು ಸೌಹಾರ್ದತೆಯನ್ನು ಹಾಳುಗೆಡವಿ, ಮುಸ್ಲಿಮರ ಪವಿತ್ರ ಸ್ಥಳಗಳಾದ ಮಸೀದಿಗಳನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ದೂರಿದರು.
ನ್ಯಾಯಾಲಯ ಕೂಡ 1991ರ ಆರಾಧನಾ ಕಾಯ್ದೆಯನ್ನು ಪರಿಶೀಲಿಸಲಿಲ್ಲ. ಕೇವಲ 5 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಎಂಬ ಕಾರಣಕ್ಕೆ ಆ ಜಾಗವನ್ನು ಚಿತ್ರೀಕರಣ ಮಾಡಲು ಅನುಮತಿ ನೀಡಿದೆ. ಇದು ಸರಿಯಲ್ಲ. ಬಿಜೆಪಿ ಸರ್ಕಾರ ಮುಸ್ಲಿಂ ವಿರೋ ಧಿಯಾಗಿದ್ದು, ಈ ದೇಶದ ಕಾನೂನನ್ನು ಗೌರವಿಸುತ್ತಿಲ್ಲ ಎಂದು ದೂರಿದರು. ಪ್ರತಿಭಟನೆಯಲ್ಲಿ ಮುಜೀಬ್ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.