ನೌಕಾ ನಿಗ್ರಹ ಕ್ಷಿಪಣಿಯ ಚೊಚ್ಚಲ ಪರೀಕ್ಷೆ ಯಶಸ್ವಿ: ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಕ್ಷಿಪಣಿ


Team Udayavani, May 18, 2022, 11:49 PM IST

ನೌಕಾ ನಿಗ್ರಹ ಕ್ಷಿಪಣಿಯ ಚೊಚ್ಚಲ ಪರೀಕ್ಷೆ ಯಶಸ್ವಿ: ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಕ್ಷಿಪಣಿ

ಹೊಸದಿಲ್ಲಿ: ದೇಶೀಯವಾಗಿ ಅಭಿವೃದ್ಧಿಪಡಿ­ಸ­ಲಾದ ನೌಕೆ ನಿಗ್ರಹ ಕ್ಷಿಪಣಿಯ ಚೊಚ್ಚಲ ಪ್ರಾಯೋಗಿಕ ಪರೀಕ್ಷೆ ಬುಧವಾರ ಯಶಸ್ವಿಯಾಗಿ ನೆರವೇರಿದೆ. ಒಡಿಶಾದ ಬಾಲಸೋರ್‌ನಲ್ಲಿ ಭಾರ­ತೀಯ ನೌಕಾಪಡೆಯು ತನ್ನ ಸೀಕಿಂಗ್‌ ಹೆಲಿಕಾ­ಪ್ಟರ್‌ ಮೂಲಕ ಇದರ ಪರೀಕ್ಷೆಯನ್ನು ನಡೆಸಿದೆ.

ಸ್ಥಾಪಿತ ಕ್ಷಿಪಣಿ ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಈ ಫೈರಿಂಗ್‌ ಅತ್ಯಂತ ಮಹತ್ವವಾದದ್ದು. ಅಲ್ಲದೆ ಇದು ಸ್ವದೇಶೀಕರಣ­ದಲ್ಲಿ ಭಾರತೀಯ ನೌಕಾಪಡೆಯ ಬದ್ಧತೆಯನ್ನು ತೋರಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಸಹಭಾಗಿ­ತ್ವದಲ್ಲಿ ನೌಕಾಪಡೆಯು ಈ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದೆ. ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ರೂಸ್‌ ಕ್ಷಿಪಣಿಯ ನೌಕಾ ನಿಗ್ರಹ ಆವೃತ್ತಿಯ ಪರೀಕ್ಷೆ ನಡೆದ ಒಂದು ತಿಂಗಳಲ್ಲೇ ಈ ಪರೀಕ್ಷೆಯೂ ನಡೆದಿದೆ.

ನಿಖರ ಗುರಿ ತಲುಪಿತು: ಸೀಕಿಂಗ್‌ 42ಬಿ ಹೆಲಿಕಾಪ್ಟರ್‌ ಈ ಕ್ಷಿಪಣಿಯನ್ನು ಉಡಾಯಿಸು­ತ್ತಿ­ರುವ ಸಣ್ಣ ವೀಡಿಯೋವನ್ನು ನೌಕಾಪಡೆಯು ಟ್ವಿಟ­ರ್‌ನಲ್ಲಿ ಹಂಚಿಕೊಂಡಿದೆ. ಕ್ಷಿಪಣಿಯು ಮೊದಲೇ ನಿಯೋಜಿಸಿದಂಥ ಪಥದಲ್ಲೇ ಸಾಗಿ, ಕರಾರು­ವಾಕ್ಕಾಗಿ ನಿಖರ ಗುರಿಯನ್ನು ತಲುಪಿದೆ. ಎಲ್ಲ ವ್ಯವಸ್ಥೆಗಳೂ ತೃಪ್ತಿದಾಯಕವಾಗಿ ಕಾರ್ಯ­ನಿರ್ವಹಿ­ಸಿದೆ ಎಂದು ಡಿಆರ್‌ಡಿಒ ಹೇಳಿದೆ. ಈ ಕ್ಷಿಪಣಿಯಲ್ಲಿ ಸ್ವದೇಶಿ ನಿರ್ಮಿತ ಲಾಂಚರ್‌ ಸೇರಿದಂತೆ ಹಲವಾರು ಹೊಸ ತಂತ್ರಜ್ಞಾನಗಳನ್ನು ಬಳಸಲಾಗಿದೆ. ಯಶಸ್ವಿಯಾಗಿ ಈ ಪರೀಕ್ಷೆ ಪೂರ್ಣಗೊಳಿಸಿದ ನೌಕಾಪಡೆ ಮತ್ತು ಡಿಆರ್‌ಡಿಒ ಸಂಸ್ಥೆಯನ್ನು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಅಭಿನಂದಿಸಿದ್ದಾರೆ.

ಇದನ್ನೂ ಓದಿ : ಯು.ಕೆ. ಹಣದುಬ್ಬರ ಪ್ರಮಾಣ ಶೇ.9ಕ್ಕೇರಿಕೆ! 40 ವರ್ಷಗಳಲ್ಲಿ ಕಾಣದಂಥ ಏರಿಕೆ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.