ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
Team Udayavani, May 19, 2022, 12:40 AM IST
ತಿರುವನಂತಪುರ/ಶಿಲ್ಲಾಂಗ್: ಪ್ರಸಕ್ತ ಸಾಲಿನ ಮುಂಗಾರು ಬಲು ಬಿರುಸಾಗಿ ಇರುವಂತೆ ತೋರು ತ್ತಿದೆ. ಅದಕ್ಕೆ ಪೂರಕವಾಗಿಯೇ ಕೇರಳದ ಎಲ್ಲ ಜಿಲ್ಲೆಗಳಲ್ಲಿಯೂ ಕೂಡ ಬುಧವಾರ ಮಳೆಯ ಪ್ರಕೋಪ ಮುಂದುವರಿದಿದೆ. ಗುರುವಾರ ಕೂಡ ಕಾಸರಗೋಡು, ಕಲ್ಲಿಕೋಟೆ, ವಯನಾಡ್, ಕಣ್ಣೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮತ್ತು ರೆಡ್ ಅಲರ್ಟ್ ಘೋಷಿಸಿದೆ. ಅದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಅಧಿಕಾರಿಗಳ ಜತೆಗೆ ಸಭೆ ನಡೆಸಿ, ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಜತೆಗೆ ವಿವಿಧ ನಗರ ಪ್ರದೇಶಗಳಲ್ಲಿ ಚರಂಡಿಗಳನ್ನು ಶುಚಿಗೊಳಿಸಿ ಸರಾಗವಾಗಿ ನೀರು ಹರಿಯುಂತೆ ಮಾಡುವ ಬಗ್ಗೆಯೂ ಅವರು ಸೂಚನೆ ನೀಡಿದ್ದಾರೆ.
ಬುಧವಾರ ಬೆಳಗ್ಗೆ ಭಾರತೀಯ ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆ ಪ್ರಕಾರ ತೃಶ್ಶೂರ್, ಪಾಲಕ್ಕಾಡ್, ಮಲಪ್ಪುರಂ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಅನ್ನು ಪ್ರಕಟಿಸಲಾಗಿತ್ತು. ಕೊಟ್ಟಾಯಂ ಜಿಲ್ಲೆಯಲ್ಲಿ ಧಾರಾ ಕಾರವಾಗಿ ಮಳೆ ಸುರಿದ ಪರಿಣಾಮ ವಿವಿಧ ಪ್ರದೇಶಗಳು ಜಲಾವೃತವಾಗಿದ್ದವು. ಜತೆಗೆ ನಗರದ ವಿವಿಧ ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ಅನನುಕೂಲ ಉಂಟಾಯಿತು.
ಐದು ತಂಡಗಳು: ಮಳೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣ ದಳ ಕೇರಳಕ್ಕಾಗಿ ಐದು ತಂಡಗಳನ್ನು ನಿಯೋಜನೆ ಮಾಡಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ ರಾಜ್ಯದ ಜನರಿಗೆ ಮನವಿ ಮಾಡಿ ಉಕ್ಕಿ ಹರಿಯುತ್ತಿರುವ ನದಿ, ತೊರೆಗಳ ಸಮೀಪಕ್ಕೆ ತೆರಳಬಾರದು. ಮಳೆಯ ಪ್ರಕೋಪ ತಗ್ಗುವವರೆಗೆ ಗುಡ್ಡಗಾಡು ಪ್ರದೇಶಗಳಿಗೆ ಪ್ರಯಾಣ ಮಾಡಬಾರದು ಎಂದು ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದೂ ಅದು ಸೂಚನೆ ನೀಡಿದೆ. ಐಎಂಡಿ ಈಗಾಗಲೇ ನೀಡಿದ ಮುನ್ಸೂಚನೆ ಪ್ರಕಾರ ಮೇ 27ರ ಒಳಗಾಗಿ ಕೇರಳಕ್ಕೆ ಮುಂಗಾರು ಪ್ರವೇಶ ಮಾಡಲಿದೆ.
ಅಸ್ಸಾಂ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ವಿವಿಧ ಜಿಲ್ಲೆ ಗಳಲ್ಲಿ ಭೂಕುಸಿತ ಉಂಟಾಗಿದೆ. ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಗಡಿ ಪ್ರದೇಶದಲ್ಲಿರುವ ಮೈಬಾಂಗ್ ಟನೆಲ್ ಪ್ರದೇಶದಲ್ಲಿ ಭಾರೀ ಪ್ರಮಾ ಣದಲ್ಲಿ ಪ್ರವಾಹ ಬಂದು ಹೂಳು ತುಂಬಿಕೊಂಡಿದೆ. ಇದರಿಂದಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಭೂಕುಸಿತ, ಪ್ರವಾಹ ಸಂಬಂಧಿತ ದುರಂತಗಳಲ್ಲಿ ಜೀವ ಕಳೆದುಕೊಂಡವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ರಕ್ಷಣೆಗೆ ಕ್ರಮ: ಪ್ರವಾಹದಿಂದ ಅಭಯಾರಣ್ಯಗಳು ಮುಳುಗಡೆಯಾಗಿ ಪ್ರಾಣಿ ಪಕ್ಷಿಗಳು ಅಸುನೀಗುವುದನ್ನು ತಪ್ಪಿಸಲು 40 ಅತ್ಯಂತ ಎತ್ತರದ ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲಿ ವಿಶೇಷ ಕೇಂದ್ರಗಳನ್ನು ನಿರ್ಮಿಸಿ ಪ್ರಾಣಿಗಳನ್ನು ಕರೆತರಲಾಗುತ್ತಿದೆ ಎಂದು ಅಸ್ಸಾಂ ಅರಣ್ಯ ಸಚಿವ ಪರಿಮಳ ಶುಕ್ಲವಿದ್ಯಾ ಹೇಳಿದ್ದಾರೆ. ಇದೇ ವೇಳೆ ಅಸ್ಸಾಂನಲ್ಲಿ ಧಾರಾಕಾರ ಮಳೆಯಿಂದಾಗಿ 11ನೇ ತರಗತಿಯ ಪರೀಕ್ಷೆಗಳು ಸೇರಿದಂತೆ ಹಲವು ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ಮೇಘಾಲಯದಲ್ಲೂ ಮಳೆ
ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇದರಿಂದಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪರ್ಕಕ್ಕೆ ವ್ಯತ್ಯಯ ಉಂಟಾಗಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿರುವುದರಿಂದ ಜನರ ಸಂಚಾರಕ್ಕೆ ಕೂಡ ಅಡಚಣೆ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.