ಪಿಎಸ್ಐ ನೇಮಕಾತಿ ಅಕ್ರಮ: ವಿಚಾರಣೆ ಮುಂದಕ್ಕೆ
Team Udayavani, May 19, 2022, 1:42 AM IST
ಬೆಂಗಳೂರು: ಪಿಎಸ್ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿರುವ ಆದೇಶ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ ಮೇ 24ರ ವರೆಗೆ ಕಾಲಾವಕಾಶ ನೀಡಿದೆ.
ಈ ವಿಚಾರವಾಗಿ ಎಲ್.ಎನ್. ಪವಿತ್ರಾ ಸೇರಿ 28 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು.
ಸರಕಾರಕ್ಕೆ ಕಾಲಾವಕಾಶ
ಸರಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮತ್ತು ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್. ರವಿಶಂಕರ್, ಮರು ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿ ಸದಂತೆ ಸರಕಾರವನ್ನು ನಿರ್ಬಂಧಿಸಿ ಮಧ್ಯಾಂತರ ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡರು. ಅದಕ್ಕೆ ಸರಕಾರದ ಪರ ವಕೀಲರು, ಮರು ಪರೀಕ್ಷೆ ನಡೆಸಲು ಇನ್ನೂ ಸಾಕಷ್ಟು ಕಾಲಾವಕಾಶ ಬೇಕಿದೆ. ಆದ್ದರಿಂದ, ಸದ್ಯಕ್ಕೆ ಮಧ್ಯಾಂತರ ಆದೇಶದ ಅಗತ್ಯವಿಲ್ಲ ಎಂದು ತಿಳಿಸಿದರು.
ಅದನ್ನು ಪರಿಗಣಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಿತು.
ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ
ಪಿಎಸ್ಐ ನೇಮಕಾತಿಗೆ ನಡೆಸ ಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಎಪ್ರಿಲ್ 29ರಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಕಾರ್ಯದರ್ಶಿಗೆ ನಿರ್ದೇಶಿಸಿ
ಅಂತಿಮ ಪಟ್ಟಿಯು ಈ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ನಿರ್ಧಾ ರಕ್ಕೆ ಒಳಪಟ್ಟಿರುವಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕು ಎಂದು ಮಧ್ಯಾಂತರ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.