3 ಹೊಸ ತಾಲೂಕು.. ನೂರಾರು ಕೊರತೆ

ಘೋಷಣೆಗಷ್ಟೇ ಸೀಮಿತವಾದ ಕೊಟ್ಟೂರು, ಕುರುಗೋಡು, ಕಂಪ್ಲಿ ನೂತನ ತಾಲೂಕು

Team Udayavani, May 19, 2022, 2:00 PM IST

ballary

ಬಳ್ಳಾರಿ: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ‘ಕೊಟ್ಟೂರು, ಕಂಪ್ಲಿ, ಕುರುಗೋಡು’ ಗಳನ್ನು ಹೊಸ ತಾಲೂಕುಗಳನ್ನಾಗಿ ರಚಿಸಿ ಅರ್ಧದಶಕವೇ ಉರುಳಿದರೂ, ನಿರೀಕ್ಷಿತ ಫಲ ಸಿಗುತ್ತಿಲ್ಲ. ತಹಶೀಲ್ದಾರ್‌, ತಾಪಂ ಕಚೇರಿಗಷ್ಟೇ ಸೀಮಿತವಾಗಿರುವ ಈ ನೂತನ ತಾಲೂಕುಗಳಲ್ಲಿ ಬಹುತೇಕ ಕಚೇರಿಗಳನ್ನು ಇನ್ನೂ ತೆರೆದಿಲ್ಲ. ವಿಶೇಷವೆಂದರೆ ವಿಜಯನಗರ ಜಿಲ್ಲೆ ಪ್ರತ್ಯೇಕವಾದರೂ, ಬಳ್ಳಾರಿ ಜಿಲ್ಲೆಯ ನೂತನ ಕಂಪ್ಲಿ ತಾಲೂಕಿನ ಕೆಲ ಇಲಾಖೆಗಳಿಗೆ ಹೊಸಪೇಟೆ ತಾಲೂಕು ಅಧಿಕಾರಿಗಳೇ ನಿಭಾಯಿಸಿದ್ದು ಅನುದಾನದ ಕೊರತೆ ಕಾಡುತ್ತಿದೆ.

ಅವಿಭಜಿತ ಬಳ್ಳಾರಿ ಜಿಲ್ಲೆಯ ಕೊಟ್ಟೂರು, ಕಂಪ್ಲಿ, ಕುರುಗೋಡು’ಗಳಲ್ಲಿ 2018 ಜನವರಿ ತಿಂಗಳಲ್ಲಿ ತಾಲೂಕು ಕಚೇರಿಗಳನ್ನು ತೆರೆದು ಕಾರ್ಯಾರಂಭ ಮಾಡುವ ಮೂಲಕ ಅಧಿಕೃತವಾಗಿ ನೂತನ ತಾಲೂಕುಗಳಾಗಿ ಮೇಲ್ದರ್ಜೆಗೆ ಏರಿದವು. ಆದರೆ, ಆರಂಭದಲ್ಲಿ ತಹಶೀಲ್ದಾರ್‌ ಕಚೇರಿಯನ್ನು ತೆರೆದು ಕಂದಾಯ ಇಲಾಖೆ, ಕೆಲ ದಿನಗಳ ಬಳಿಕ ತಾಪಂ ಕಚೇರಿಯನ್ನು ತೆರೆದಿದ್ದನ್ನು ಬಿಟ್ಟರೆ, ಬಹುತೇಕ ಇಲಾಖೆಗಳು ಅಧಿಕೃತವಾಗಿ ಆರಂಭವಾಗಿಲ್ಲ. ಕೇವಲ ಕಂದಾಯ ಇಲಾಖೆಯ ವ್ಯವಹಾರಗಳು ಮಾತ್ರ ನಡೆಯುತ್ತಿದ್ದು, ಇನ್ನಿತರೆ ತಾಲೂಕು ಆರೋಗ್ಯ ಅಧಿ ಕಾರಿ, 100 ಹಾಸಿಗೆಯುಳ್ಳ ಸಾರ್ವಜನಿಕ ಆಸ್ಪತ್ರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಲೋಕೋಪಯೋಗಿ, ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಗ್ರಾಮೀಣ ಕುಡಿವ ನೀರು ಸೇರಿ ವಿವಿಧ ಇಲಾಖೆಗಳ ಕಾರ್ಯ ಚಟುವಟಿಕೆಗಾಗಿ ಸಾರ್ವಜನಿಕರು ಇಂದಿಗೂ ಇನ್ನೂ ಮೂಲ ತಾಲೂಕುಗಳಿಗೆ ಅಲೆದಾಡುವ ಪರಿಸ್ಥಿತಿ ಮುಂದುವರೆದಿದೆ.

ಮೂಲಸೌಕರ್ಯಗಳ ಕೊರತೆ

ಬಳ್ಳಾರಿ ತಾಲೂಕಿನಲ್ಲಿದ್ದ ಕುರುಗೋಡು ನೂತನ ತಾಲೂಕಾಗಿ ರಚನೆಯಾಗಿದ್ದು, ಗ್ರಾಮ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆಯಾದರೂ ತಾಲೂಕುಗಳಲ್ಲಿ ಇರಬೇಕಾದ ಸೌಲಭ್ಯಗಳನ್ನು ಇಂದಿಗೂ ಈಡೇರಿಸಲಾಗಿಲ್ಲ. ಕುರುಗೋಡಿನಲ್ಲಿ ಈ ಹಿಂದೆ ಇದ್ದ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳುಳ್ಳ ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿಲ್ಲ. ತಾಲೂಕು ಆರೋಗ್ಯ ಅಧಿಕಾರಿಗಳನ್ನೂ ನಿಯೋಜಿಸಿಲ್ಲ. ಇನ್ನು ಕಂಪ್ಲಿ, ಕೊಟ್ಟೂರು ತಾಲೂಕುಗಳ ಪರಿಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ನೂತನ ಮೂರು ತಾಲೂಕುಗಳಲ್ಲೂ ಇದೇ ಪರಿಸ್ಥಿತಿ ಇದ್ದು, ರೈತರಿಗೆ ಪ್ರಮುಖವಾಗಿ ಬೇಕಿದ್ದ ಕೃಷಿ, ತೋಟಗಾರಿಕೆ ಇಲಾಖೆಗಳನ್ನು ಸಹ ತೆರೆಯದೆ, ಹಿಂದಿನ ರೈತ ಸಂಪರ್ಕ ಕೇಂದ್ರಗಳು, ಕೃಷಿ ಸಹಾಯಕ ನಿರ್ದೇಶಕರೇ ಮುಂದುವರೆದಿದ್ದು, ಕೃಷಿ, ಆರೋಗ್ಯ ಸಂಬಂಧ ಏನೇ ಕಾರ್ಯಚಟುವಟಿಕೆಗಳಿದ್ದರೂ ಸಾರ್ವಜನಿಕರು ಮೂಲ ತಾಲೂಕುಗಳಿಗೆ ಅಲೆದಾಡುತ್ತಿದ್ದಾರೆ.

ಜಾಗದ ಕೊರತೆ

ಆಡಳಿತಾತ್ಮಕ ದೃಷ್ಟಿಯಿಂದ ರಚನೆಯಾಗಿರುವ ನೂತನ ಕಂಪ್ಲಿ, ಕೊಟ್ಟೂರು, ಕುರುಗೋಡು ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಿಸಲು ರಾಜ್ಯ ಸರ್ಕಾರ ತಲಾ 10 ಲಕ್ಷ ರೂ. ಜಿಲ್ಲಾ ಖನಿಜ ನಿಧಿ (ಡಿಎಂಎಫ್‌)ಯಿಂದ ತಲಾ 5 ಲಕ್ಷ ಸೇರಿ ಒಟ್ಟು 15 ಲಕ್ಷ ರೂ. ಅನುದಾನ ಘೋಷಣೆ ಮಾಡಿದೆ. ಕುರುಗೋಡು ಪಟ್ಟಣದಲ್ಲಿ ಬಳ್ಳಾರಿ ರಸ್ತೆಯಲ್ಲಿ, ಕಂಪ್ಲಿ ಪಟ್ಟಣದಲ್ಲಿ ಹೊಸಪೇಟೆ ರಸ್ತೆಯಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳವನ್ನು ಗುರುತಿಸಲಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಕೊಟ್ಟೂರು ತಾಲೂಕಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಈವರೆಗೂ ಯಾವುದೇ ಪ್ರಕ್ರಿಯೆಗಳು ಕಾರ್ಯರೂಪಕ್ಕೆ ಬಂದಿಲ್ಲ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಆಸ್ಥೆವಹಿಸದೆ ಉದಾಸೀನ ತೋರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ರಚನೆಯಾಗಿರುವ ನೂತನ ಕೊಟ್ಟೂರು, ಕುರುಗೋಡು, ಕಂಪ್ಲಿ ತಾಲೂಕುಗಳು ಕೇವಲ ತಾಲೂಕು ಎಂಬ ಹಣೆಪಟ್ಟಿಗಷ್ಟೇ ಸೀಮಿತವಾಗಿವೆ. ಅರ್ಧ ದಶಕ ಕಳೆದರೂ, ಇನ್ನುಳಿದ ಕಚೇರಿಗಳನ್ನು ತೆರೆದು, ಸಿಬ್ಬಂದಿ ನಿಯೋಜಿಸುವಲ್ಲಿ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹೆಣಗಾಡುತ್ತಿದ್ದು, ಸೂಕ್ತ ವೈದ್ಯಕೀಯ ಸೌಲಭ್ಯ ಸೇರಿ ಇನ್ನಿತರೆ ಮೂಲಸೌಲಭ್ಯಗಳು ಇಲ್ಲದೆ, ಅನ್ಯಕಾರ್ಯ ನಿಮಿತ್ತ ನಿತ್ಯ ಮೂಲ ತಾಲೂಕು ಕೇಂದ್ರಕ್ಕೆ ಪರದಾಟದಿಂದ ಸಾರ್ವಜನಿಕರು ಮುಕ್ತಗೊಳ್ಳದಂತಾಗಿದೆ.

ವಿಭಜನೆಯಾದರೂ ಕಂಪ್ಲಿ ನಿರ್ವಹಣೆ

ಅವಿಭಜಿತ ಬಳ್ಳಾರಿ ಜಿಲ್ಲೆಯಿದ್ದಾಗ ಘೋಷಣೆಯಾಗಿದ್ದ ಕೊಟ್ಟೂರು, ಕುರುಗೋಡು, ಕಂಪ್ಲಿ ನೂತನ ತಾಲೂಕುಗಳು, ಪ್ರತ್ಯೇಕ ವಿಜಯನಗರ ಜಿಲ್ಲೆಯಾದ ಬಳಿಕ ಕೊಟ್ಟೂರು ವಿಜಯನಗರ ಜಿಲ್ಲೆಯಲ್ಲಿ, ಕಂಪ್ಲಿ, ಕುರುಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಸೇರಿವೆ. ಜಿಲ್ಲೆ ವಿಭಜನೆಗೂ ಮುನ್ನ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆ ತಾಲೂಕಿನಲ್ಲಿದ್ದ ಕಂಪ್ಲಿಯು ನೂತನ ತಾಲೂಕಾಗಿ ರಚನೆಯಾದ ಬಳಿಕ ಭೌಗೋಳಿಕವಾಗಿ ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಸೇರಿದೆ ಹೊರತು, ತಹಶೀಲ್ದಾರ್‌, ತಾಪಂ ಕಚೇರಿಗಳನ್ನು ಬಿಟ್ಟು, ಉಳಿದೆಲ್ಲ ಇಲಾಖೆಗಳು, ಹೊಸಪೇಟೆ ತಾಲೂಕು ಅಧಿಕಾರಿಗಳೇ ಉಸ್ತುವಾರಿ ವಹಿಸಿಕೊಂಡಿದ್ದು ಇದರಿಂದ ಅನ್ಯ ಕೆಲಸ ಕಾರ್ಯಗಳ ನಿಮಿತ್ತ ಸಾರ್ವಜನಿಕರು ಪ್ರತಿನಿತ್ಯ ಹೊಸಪೇಟೆಗೆ ಅಲೆಯುವುದು ತಪ್ಪುತ್ತಿಲ್ಲ.

ಯಾತ್ರಿ ನಿವಾಸದಲ್ಲಿ ತಾಲೂಕು ಕಚೇರಿ

ನೂತನ ಕೊಟ್ಟೂರು, ಕುರುಗೋಡು, ಕಂಪ್ಲಿ ತಾಲೂಕುಗಳು ರಚನೆಯಾಗಿ ವರ್ಷಗಳುರುಳಿದರೂ ತೆರೆಯಲಾಗಿರುವ ತಹಶೀಲ್ದಾರ್‌, ತಾಪಂ ಕಚೇರಿಗಳಿಗೂ ಸಹ ಸ್ವಂತ ಕಟ್ಟಡಗಳನ್ನು ನಿರ್ಮಿಸಲಾಗಿಲ್ಲ. ಕೊಟ್ಟೂರು, ಕುರುಗೋಡು ತಾಲೂಕುಗಳಲ್ಲಿ ದೇವಸ್ಥಾನಕ್ಕೆ ಸೇರಿದ್ದ ಯಾತ್ರಿ ನಿವಾಸದ ಕಟ್ಟಡದಲ್ಲಿ ತಹಶೀಲ್ದಾರ್‌ ಕಚೇರಿಗಳು ನಡೆದರೆ, ತಾಪಂ ಕಚೇರಿಗಳು ಕೊಟ್ಟೂರಿನಲ್ಲಿ ಶಾಲಾ ಕಟ್ಟಡ, ಕುರುಗೋಡಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೇರಿದ್ದ ಸಮುದಾಯ ಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಂಪ್ಲಿಯಲ್ಲಿ ತಹಸೀಲ್ದಾರ್‌ ಕಚೇರಿಯನ್ನು ಎಪಿಎಂಸಿಗೆ ಸೇರಿದ್ದ ಕಟ್ಟಡದಲ್ಲಿ, ತಾಪಂ ಕಚೇರಿಯನ್ನು ನೀರಾವರಿ ಇಲಾಖೆಗೆ ಸೇರಿದ್ದ ಕಟ್ಟಡದಲ್ಲಿ ಬಾಡಿಗೆ ನಡೆಸಲಾಗುತ್ತಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.