ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Team Udayavani, May 20, 2022, 6:20 AM IST

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಮುನ್ನವೇ ರಾಜಕೀಯ ಜ್ವರ ಆರಂಭವಾಗಿದೆ.

ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಜಿಲ್ಲೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಜತೆಗೆ ಸಮಾಜಸೇವಕರು ಲಗ್ಗೆ ಇಟ್ಟಿದ್ದಾರೆ. ವಿವಿಧ ಪಕ್ಷಗಳ ಹಾಲಿ ಶಾಸಕರು ಮತ್ತೂಮ್ಮೆ ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ, ಸಮಾಜ ಸೇವೆ ನೆಪದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ರಾಜಕೀಯ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಸನ್ನದ್ಧರಾಗಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಪ್ರತಿನಿ ಧಿಸುತ್ತಿದ್ದು, ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಪಾಳಯದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಕೆಪಿಸಿಸಿ ಸದಸ್ಯ ವಿನಯ್‌ ಎನ್‌.ಶ್ಯಾಮ್‌ ಅವರು ವಿವಿಧ ಕಾರ್ಯಕ್ರಮಗಳ ಮೂಲಕ ಆರೋಗ್ಯ ಸಚಿವರಿಗೆ ಸಡ್ಡು ಹೊಡೆಯಲು ಪ್ರಯತ್ನ ನಡೆಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್‌ನಲ್ಲಿ ಮತ್ತೂಂದು ಗುಂಪು ಹೊಸ ಮುಖವನ್ನು ಪರಿಚಯಿಸಲು ತೆರೆಮರೆ ಕಸರತ್ತು ನಡೆಸುತ್ತಿದೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಸಚಿವ ಡಾ| ಕೆ.ಸುಧಾಕರ್‌ ಪಾಲಿಗೆ ಮುಂಬರುವ ವಿಧಾನಸಭೆ ಚುನಾವಣೆ ಅಗ್ನಿ ಪರೀಕ್ಷೆ. ಜಿಲ್ಲೆಯಲ್ಲಿ ಕಮಲವನ್ನು ಅರಳಿಸುವ ಜವಾಬ್ದಾರಿ ಹೊತ್ತು ಈಗಾಗಲೇ ಹಲವು ತಂತ್ರಗಾರಿಕೆ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾ ಧಿಸಲು ಸಚಿವ ಡಾ| ಕೆ.ಸುಧಾಕರ್‌ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿ ಸಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಮುನ್ನವೇ ಸಮಾಜ ಸೇವಕರ ಪ್ರವೇಶ ಸ್ಥಳೀಯ ಶಾಸಕರಿಗೆ ಸವಾಲಾಗಿದೆ.

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‌ ಶಾಸಕ ವಿ.ಮುನಿಯಪ್ಪ ಈಗಾಗಲೇ ಹಲವು ಬಾರಿ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮುಂಬರುವ ಚುನಾವಣೆ ತಮ್ಮ ಕೊನೇ ಚುನಾವಣೆಯೆಂದು ಆಪ್ತರ ಬಳಿ ಹೇಳಿಕೊಂಡಿ ದ್ದಾರೆ. ಕಾಂಗ್ರೆಸ್‌ ಟಿಕೆಟ್‌ ಬಯಸಿ ಕ್ಷೇತ್ರಾದ್ಯಂತ ಸಂಚರಿಸುತ್ತಿದ್ದಾರೆ. ಚುನಾವಣೆ ಮುನ್ನವೇ ಅಭ್ಯರ್ಥಿಗಳ ಗೊಂದಲ ನಿವಾರಿಸುವ ಸಲುವಾಗಿ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶಿಡ್ಲ ಘಟ್ಟ ಪ್ರವಾಸದ ವೇಳೆ ಕಾಂಗ್ರೆಸ್‌ನಿಂದ ವಿ.ಮುನಿಯಪ್ಪ ಅವರೇ ಅಭ್ಯರ್ಥಿ, ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರ ನಿಲುವು ಬದಲಾವಣೆ ಆಗುತ್ತಾ, ಇಲ್ಲವೋ ಎಂಬುದು ಕುತೂಹಲ ಕೆರಳಿಸಿದೆ.

ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎನ್‌.ಎಚ್‌.ಶಿವಶಂಕರ ರೆಡ್ಡಿ ಶಾಸಕರಾಗಿದ್ದಾರೆ. ಮತ್ತೂಂದೆಡೆ ಸಮಾಜ ಸೇವೆ ಹೆಸರಿ ನಲ್ಲಿ ಎಂಟ್ರಿ ಕೊಟ್ಟಿರುವ ಕೆಹೆಚ್‌ಪಿ ಫೌಂಡೇಶನ್‌ನ ಪುಟ್ಟಸ್ವಾಮಿಗೌಡ ಮತ್ತು ಕೆಂಪರಾಜು ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಮತ್ತೂಂದೆಡೆ ಬಿಜೆಪಿಯಿಂದ ಒಂದು ಗುಂಪು ನಂದೀಶ್‌ ರೆಡ್ಡಿ ಅವರನ್ನು ಕರೆತರಲು ಪ್ರಯತ್ನ ಮಾಡುತ್ತಿದೆ.

ಚಿಂತಾಮಣಿ ವಿಧಾನಸಭಾ ಕ್ಷೇತ್ರ ದಲ್ಲಿ ಹಾಲಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರು ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇವರ ಎದುರಾಳಿ ಮಾಜಿ ಶಾಸಕ ಡಾ| ಎಂ.ಸಿ. ಸುಧಾಕರ್‌ ಅವರನ್ನು ಕಾಂಗ್ರೆಸ್‌ ಪಕ್ಷದತ್ತ ಸೆಳೆಯಲು ಅನೇಕ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರ ವಿರೋಧವಿದೆ ಎನ್ನಲಾಗಿದೆ. ಇನ್ನೊಂದಡೆ ಗೋಪಾಲಕೃಷ್ಣ ಎಂಬವರು ಸಮಾಜಸೇವಾ ಕಾರ್ಯಗಳ ಮೂಲಕ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾರೆ.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್‌.ಎಂ.ಸುಬ್ಟಾರೆಡ್ಡಿ ಅವರು ಚುನಾವಣೆಗೆ ಸಜ್ಜಾಗಿದ್ದು, ತಮ್ಮ ಅ ಧಿಕಾರದ ಅವ ಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಮೂಲಕ ಮತ್ತೂಮ್ಮೆ ಜನರ ವಿಶ್ವಾಸ ಗಿಟ್ಟಿಸಲು ಮುಂದಾಗಿದ್ದಾರೆ. ಮತ್ತೂಂದೆಡೆ ಜೆಡಿಎಸ್‌ನಿಂದ ನಾಗರಾಜ್‌ ರೆಡ್ಡಿ ಮತ್ತಿತರರು ತಮ್ಮ ಪ್ರಯತ್ನ ನಡೆಸಿದ್ದಾರೆ.

ಕಮಲ ಅರಳಿಸುವ ಪ್ರಯತ್ನ
ಜಿಲ್ಲೆಯಲ್ಲಿ ಸಚಿವ ಡಾ| ಕೆ.ಸುಧಾಕರ್‌ ಕಮಲ ಅರಳಿಸುವ ಪ್ರಯತ್ನ ಮಾಡುತ್ತಿದ್ದರೆ, ಕಾಂಗ್ರೆಸ್‌ನ ಹಾಲಿ ಶಾಸಕರು ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ವಿಶೇಷ ಗಮನ ಹರಿಸಿದ್ದಾರೆ. ಈ ಮಧ್ಯೆ ಹೊಸಬರ ರಾಜಕೀಯ ಪ್ರವೇಶದಿಂದ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದ್ದು, ಮುಂದಿನ ಚುನಾವಣೆಯಲ್ಲಿ ಅವರ ಸ್ಪರ್ಧೆಯಿಂದ ರಾಜಕೀಯ ಚಿತ್ರಣ ಬದಲಾಗುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

– ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.