ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

ಏಳು ಜನರಿಗೆ ಈ ವರ್ಷ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ನೀಡಲಾಗಿದೆ

Team Udayavani, May 20, 2022, 5:12 PM IST

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

ದೊಡ್ಡಬಳ್ಳಾಪುರ: ನೌಕರರು ಒತ್ತಡದಿಂದ ಕಾರ್ಯ ನಿರ್ವಹಿಸಬೇಕಾದರೆ ದೈಹಿಕ ಕ್ಷಮತೆ ಇರಬೇಕಿದೆ. ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂ.ಗ್ರಾ. ಜಿಪಂ ಸಿಇಒ ಕೆ.ರೇವಣಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022ರ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರು ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಹೇಳಿದರು.

ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಮೀಸಲಾತಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ನಾಲ್ಕು ತಾಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಹಬ್ಬದ ವಾತಾವರಣ ಮೂಡಿ, ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿ ಇದ್ದು, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದರೆ ಹೆಚ್ಚಿನ ಅನುಕೂಲಗಳಿವೆ ಎಂದು ಹೇಳಿದರು.

ಏಳು ಮಂದಿಗೆ ಸರ್ವೋತ್ತಮ ಪ್ರಶಸ್ತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಗಂಗಾಧರಪ್ಪ ಮಾತನಾಡಿ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರಿಗೆ ಪ್ರತಿ ವರ್ಷ ಸರ್ವೋತ್ತಮ ಪ್ರಶಸ್ತಿ ನೀಡಲಾಗುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಏಳು ಜನರಿಗೆ ಈ ವರ್ಷ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರು, ಕ್ರೀಡಾ ಸಾಧಕರು ಹಾಗೂ ಕಳೆದ ವರ್ಷ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದಲ್ಲಿ ವಿಜೇತರಾದವರನ್ನು ಅಭಿನಂದಿಸಲಾಯಿತು. ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾ ಯಣ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಉಪ ವಿಭಾಗಾಧಿಕಾರಿ ತೇಜಸ್‌ ಕುಮಾರ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ತಹಶೀಲ್ದಾರ್‌ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಹಬ್ಬದ ವಾತಾವರಣ ಮೂಡಿ, ಸಂತಸ ತಂದಿದೆ. ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿಯಿದ್ದು, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದರೆ ಹೆಚ್ಚಿನ ಅನುಕೂಲವಿದೆ.
● ಟಿ.ವೆಂಕಟರಮಣಯ್ಯ, ಶಾಸಕ

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.