ಭೀಕರ ರಸ್ತೆ ಅಪಘಾತ: ಡೀಸೆಲ್ ಟ್ಯಾಂಕರ್-ಟ್ರಕ್ ಢಿಕ್ಕಿ: 9 ಮಂದಿ ಸಜೀವ ದಹನ
Team Udayavani, May 20, 2022, 6:32 PM IST
ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ನಗರದ ಹೊರವಲಯದಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.
ಚಂದ್ರಾಪುರ-ಮುಲ್ ರಸ್ತೆಯಲ್ಲಿ ಗುರುವಾರ ರಾತ್ರಿ ಗಂಟೆ 10.30ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಅಧಿಕೃತವಾಗಿ ತಿಳಿಸಿದ್ದಾರೆ.
ಚಂದ್ರಾಪುರ ನಗರದ ಸಮೀಪ ಅಜಯಪುರ ಸಮೀಪ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಡೀಸೆಲ್ ತುಂಬಿದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಟ್ಯಾಂಕರ್ ಢಿಕ್ಕಿ ಹೊಡೆಯುತ್ತಲೇ ಬೆಂಕಿ ಹತ್ತಿಕೊಂಡು 9 ಮಂದಿ ಸ್ಥಳದಲ್ಲಿಯೇ ಸಜೀವವಾಗಿ ದಹನಗೊಂಡರು ಎಂದು ಚಂದ್ರಾಪುರದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ನಂದನ್‌ವರ್ ತಿಳಿಸಿದರು.
ಘಟನೆ ನಡೆದ ಒಂದು ಗಂಟೆಯ ನಂತರ ಅಗ್ನಿಶಾಮಕ ವಾಹನಗಳು ಘಟನ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾದವು. ಅಗ್ನಿ ಶಾಮಕ ಸಿಬಂದಿ ತಾಸುಗಳ ಕಾಲ ಅವಿರತ ಶ್ರಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲರಾದರು.
ದುರಂತದಲ್ಲಿ ಸಾವನ್ನಪ್ಪಿದವರ ಶವಗಳನ್ನು ಚಂದ್ರಾಪುರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಸುಧೀರ್ ನಂದನ್‌ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.