![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 20, 2022, 8:40 PM IST
ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 2024ರ ಜನವರಿಯಲ್ಲಿ ಪ್ರತಿಷ್ಠಾ ಕಾರ್ಯ ನಡೆಯಲಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಮಂದಿರದ ಕೆಲಸ ಆರಂಭವಾಗಿದ್ದು, ಕರ್ನಾಟಕದಿಂದ ಕಳುಹಿಸಲಾದ ಶಿಲೆಗಳಿಂದ ಪ್ಲಾಟ್‌ಫಾರಂ ರಚನೆ ಕಾರ್ಯ ನಡೆಯುತ್ತಿದೆ. ಜೂ.1ರಂದು ಗರ್ಭಗುಡಿಯ ಶಿಲಾನ್ಯಾಸ ನಡೆಯಲಿದ್ದು, ನಾವು ಭಾಗವಹಿಸಲಿದ್ದೇವೆ ಎಂದರು.
ಇದನ್ನೂ ಓದಿ:ಆರೂವರೆ ವರ್ಷಗಳ ನಂತರ ಜೈಲಿನಿಂದ ಹೊರಬಂದ ಇಂದ್ರಾಣಿ ಮುಖರ್ಜಿ
ವಾರಾಣಸಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ವಿಚಾರ ಸಂತಸ ತಂದಿದೆ. ಇಲ್ಲಿಯ ತನಕ ಇರುವ ನಂಬಿಕೆ, ಪುರಾಣದಲ್ಲಿ ಇರುವ ಮಾಹಿತಿ ನಿಜವಾಗಿದೆ. ಇದು ಮಾತ್ರವಲ್ಲ; ಇಂತಹದು ಯಾವುದೇ ಇದ್ದರೂ ಬೆಳಕಿಗೆ ಬರಬೇಕಿದೆ. ಭಾರತೀಯ ಸನಾತನ ಸಂಸ್ಕೃತಿಗೆ ವಿಜಯ ದೊರಕಬೇಕಿದೆ ಎಂದು ಅವರು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.