ಎಲ್ಲ ಪ್ರಾದೇಶಿಕ ಭಾಷೆಗಳೂ ಪೂಜನೀಯ: ಪ್ರಧಾನಿ ಮೋದಿ
ಭಾಷೆಯ ಹೆಸರಲ್ಲಿ ಜಗಳ ಬೇಡ, ಅಭಿವೃದ್ಧಿಯೇ ಆದ್ಯತೆಯಾಗಲಿ: ಕಿವಿಮಾತು
Team Udayavani, May 20, 2022, 10:39 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾಷೆಯ ಹೆಸರಿನಲ್ಲಿ ವಿವಾದಗಳನ್ನು ಹುಟ್ಟಿಸುವ ವ್ಯಕ್ತಿಗಳಿಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ನಾವು ಭಾರತದ ಎಲ್ಲ ಸ್ಥಳೀಯ ಭಾಷೆಗಳನ್ನು ಗೌರವಿಸುತ್ತೇವೆ, ಆ ಭಾಷೆಗಳಲ್ಲಿ ದೇಶದ ಸಂಸ್ಕೃತಿ ಪ್ರತಿಫಲನಗೊಳ್ಳುತ್ತದೆ. ಅವುಗಳನ್ನೆಲ್ಲ ಬಿಜೆಪಿ ಪೂಜನೀಯವಾಗಿ ಕಾಣುತ್ತದೆ. ಅಷ್ಟು ಮಾತ್ರವಲ್ಲ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಎಲ್ಲ ಸ್ಥಳೀಯ ಭಾಷೆಗಳಿಗೂ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.
ನರೇಂದ್ರ ಮೋದಿಯವರ ಈ ಹೇಳಿಕೆಯ ಹಿಂದೆ ಕೆಲವು ದಿನಗಳ ಹಿಂದೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್-ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ನಡೆದ ಟ್ವಿಟರ್ ವಾಗ್ವಾದ ಉಂಟಾದ ಬೆನ್ನಲ್ಲೇ ಮೋದಿಯವರಿಂದ ಇಂಥದ್ದೊಂದು ಕಿವಿಮಾತು ಕೇಳಿಬಂದಿದೆ.
ಮನೆಮನೆಗೆ ತೆರಳಿ:
ಈ ವರ್ಷಾಂತ್ಯ ಮತ್ತು ಮುಂದಿನ ವರ್ಷ ಕರ್ನಾಟಕ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಮೋದಿ, ಬಿಜೆಪಿ ಕಾರ್ಯಕರ್ತರು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಅಭಿಯಾನ ಆರಂಭಿಸಬೇಕು. ಯಾವುದೇ ಬಡವ್ಯಕ್ತಿ, ಅರ್ಹ ಫಲಾನುಭವಿ ಸರ್ಕಾರದ ಕಲ್ಯಾಣ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳದಂತೆ ನೋಡಿ ಎಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.