ದಿನ ಬೆಳಗಾದರೆ ಸಿದ್ದು ಮನೆ ಬಾಗಿಲಲ್ಲಿ ಕುಳಿತುಕೊಳ್ಳಬೇಕಾ?
Team Udayavani, May 21, 2022, 2:35 PM IST
ಚಿತ್ರದುರ್ಗ: ದಿನ ಬೆಳಗಾದರೆ ಸಿದ್ದರಾಮಯ್ಯನ ಮನೆ ಬಾಗಿಲಲ್ಲಿ ಕುಳಿತುಕೊಳ್ಳಬೇಕಾ? ನಮಗೂ ಜವಾಬ್ದಾರಿಯಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬರೇ ಭಾರೀ ಜವಾಬ್ದಾರಿಯಿಂದ ಕೆಲಸ ಮಾಡಿದ್ದಾರಾ, ಅವರು ಹೇಳಿದ್ದಕ್ಕೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ದಾವಣಗೆರೆಯಲ್ಲಿ ಒಂದೂವರೆ ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಅಲ್ಲಿಗೆ ಪರಿಶೀಲನೆಗಾಗಿ ಹೋಗುತ್ತಿದ್ದೇವೆ. ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ. ಕೋಮು ಸಂಘಟನೆಗಳನ್ನು ನಿಷೇಧಿಸಬೇಕು ಎನ್ನುವ ಎಂ.ಬಿ. ಪಾಟೀಲ್, ಮೊದಲು ಮುಸ್ಲಿಂ ಸಂಘಟನೆಗಳನ್ನೆಲ್ಲಾ ಬ್ಯಾನ್ ಮಾಡಲಿ, ಅವರಿದ್ದಾಗ ಬ್ಯಾನ್ ಮಾಡಿದ್ರಾ? ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲಾ ಹಳದಿಯಾಗಿಯೇ ಕಾಣುತ್ತದೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ಕಾಂಗ್ರೆಸ್, ಜೆಡಿಎಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಹಾಗಾಗಿ ಮಾಧ್ಯಮಗಳ ಮುಂದೆ ಟೀಕೆ ಮಾಡುತ್ತಾರೆ ಎಂದರು.
ರಾಜ್ಯದಲ್ಲಿ ಎಲ್ಲಿಯೂ ರಸಗೊಬ್ಬರದ ಸಮಸ್ಯೆ ಇಲ್ಲ. 11,18,519 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸಂಗ್ರಹ ಇದೆ. ಏ.1ಕ್ಕೆ ಆರಂಭಿಕ ಶಿಲ್ಕು 5,94,773 ಲಕ್ಷ ಮೆಟ್ರಿಕ್ ಟನ್ ಇತ್ತು. ನಂತರ 5,23,746 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಬಂದಿದೆ. ಎಲ್ಲಿಯೂ ಕೊರತೆ ಇಲ್ಲ ಎಂದರು.
ಅಕಾಲಿಕ ಮಳೆಯಿಂದಾಗಿ ನಷ್ಟವಾಗಿರುವುದು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ. ಮುಂಗಾರು ಆರಂಭವಾಗಿರುವುದರಿಂದ ಬೀಜ, ಗೊಬ್ಬರದ ಅಭಾವ ಆಗದಂತೆ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾರಾದರೂ ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳು 240 ಹೆಕ್ಟೇರ್, 40 ಹೆಕ್ಟೇರ್ ಖುಷ್ಕಿ ಬೆಳೆಗಳು ನಷ್ಟವಾಗಿವೆ. ಒಟ್ಟಾರೆ 37 ಲಕ್ಷ ರೂ. ಹಾನಿ ಸಂಭವಿಸಿದ್ದು, ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.