ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, May 22, 2022, 7:08 AM IST
ಮೇಷ:
ಆರೋಗ್ಯ ಗಮನಿಸಿ. ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು, ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ.
ವೃಷಭ:
ಅನ್ಯರ ಮಾತನ್ನು ಅವಲಂಬಿಸು ವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಆರೋಗ್ಯದ ಬಗ್ಗೆ ಗಮನವಿರಲಿ.
ಮಿಥುನ:
ಮಕ್ಕಳಿಂದ ಸುಖ. ಬಂಧುಜನ ರೊಂದಿಗೆ ವಿಲಾಸ. ಸ್ಥಾನ ಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ.
ಕರ್ಕ:
ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.
ಸಿಂಹ:
ಆರೋಗ್ಯ ಗಮನಿಸಿ. ಸ್ತ್ರೀ ಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ.
ಕನ್ಯಾ:
ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಗೆ. ವಾಕ್ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ತುಲಾ:
ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆದರಾದಿ ಸುಖ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನ ಲಾಭ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಎಚ್ಚರಿಕೆ.
ವೃಶ್ಚಿಕ:
ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.
ಧನು:
ದೈಹಿಕವಾಗಿಯೂ ಮಾನಸಿಕ ವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಾಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ವಿಚಾರಗಳಲ್ಲಿ ಮುನ್ನಡೆ.
ಮಕರ:
ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಅನ್ಯರ ಮೇಲೆ ಅವಲಂಬಿಸದಿರಿ.
ಕುಂಭ:
ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿ ದಂತೆ ಉತ್ತಮ ಪ್ರತಿಫಲ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು ಬಂಧುಮಿತ್ರರಿಂದ ಜವಾಬ್ದಾರಿಯುತ ಸಹಕಾರ. ದೂರ ಸಂಚಾರ ಸಂಭವ. ಗುರುಹಿರಿಯರ ಅರೋಗ್ಯ ಸುದೃಢ.
ಮೀನ:
ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲಬಾದೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧ್ಯಯನ ನಿರತರಿಗೆ ಅತ್ಯಧಿಕ ಪರಿಶ್ರಮ ಸಂಭವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ
Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ
Horoscope: ದುಡಿಮೆಗೆ ತಕ್ಕ ಪ್ರತಿಫಲದ ಭರವಸೆ ನಿಮ್ಮದಾಗಲಿದೆ
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.