ಎಲ್ಲಾ  ಸಮಸ್ಯೆ ಪರಿಹರಿಸುವ ಭರವಸೆ ನೀಡಲಾರೆ

Team Udayavani, May 22, 2022, 2:27 PM IST

ಎಲ್ಲಾ  ಸಮಸ್ಯೆ ಪರಿಹರಿಸುವ ಭರವಸೆ ನೀಡಲಾರೆ

ಹುಣಸೂರು: ಯೂನಿಫಾರಂ ಧರಿಸಿದ ಪೊಲೀಸರಿಗೆ ಜಾತಿ, ಧರ್ಮ ಮತ ಯಾವುದೂ ಇರುವುದಿಲ್ಲ. ನಿಷ್ಪಕ್ಷಪಾತ ಕರ್ತವ್ಯ ನಿರ್ವಹಣೆಯಷ್ಟೇ ಗುರಿ ಆಗಿರುತ್ತದೆ, ಸಾರ್ವಜನಿಕರು ಸಹ ಸಹಕಾರ ನೀಡಬೇಕು ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ-ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್‌ ಕುಮಾರ್‌ ಅಭಿಪ್ರಾಯಪಟ್ಟರು.

ಎಡಿಜಿಪಿ ಹುಣಸೂರು ಭೇಟಿ ವೇಳೆ ಇಲಾಖೆಯಿಂದ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ತಾಲೂಕಿನ ಹಲವು ಜ್ವಲಂತ ಸಮಸ್ಯೆಗಳ ಕುರಿತು ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟಿದ್ದೀರಿ, ಅನ್ಯಾಯಕ್ಕೆ ಒಳಗಾದವರು ಗುಂಪುಕಟ್ಟಿಕೊಂಡು ಬರುವ ಬದಲು, ನೊಂದವರು ನೇರವಾಗಿ ಬಂದು ದೂರು ನೀಡಲಿ. ಮನುಷ್ಯರ ಮನಸ್ಥಿತಿಯೂ ಬದಲಾಗಬೇಕು. ಈ ನಿಟ್ಟಿನಲ್ಲಿ ಮನಪರಿವರ್ತನೆ ಕಾರ್ಯ ಪೊಲೀಸರು ಮಾಡಬೇಕಿದೆ ಎಂದು ಹೇಳಿದರು.

ಲಂಚಮುಕ್ತ ಠಾಣೆಗಳಾಗಿಸಿ: ದಸಂಸ ಮುಖಂಡ ನಿಂಗರಾಜ ಮಲ್ಲಾಡಿ ಮಾತನಾಡಿ, ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ. ಕಟ್ಟೆಮಳಲವಾಡಿ ರತ್ನಪುರಿ ಗ್ರಾಮದಲ್ಲಿ ಮಾದಕ ವಸ್ತುಗಳು ಅವ್ಯಹತವಾಗಿ ಮಾರಾಟವಾಗುತ್ತಿವೆ, ಯುವಜನರು ಮಾದಕ ವ್ಯಸನಿಗಳಾಗುತ್ತಿದ್ದಾರೆ. ರಾಜಕಾರಣಿಗಳ, ಹಣವಂತರ ಉಪಟಳಗಳಿಂದ ಪೊಲೀಸ್‌ ಠಾಣೆಗಳು ಲಂಚಮುಕ್ತವಾಗಲು ಕ್ರಮವಾಗಬೇಕು ಎಂದು ಹೇಳಿದರು.

ಪುಂಡರ ಹಾವಳಿ ತಪ್ಪಿಸಿ: ತಾಲೂಕು ಆದಿಜಾಂಭವ ಸಂಘದ ಡಿ.ಕುಮಾರ್‌ ಮಾತನಾಡಿ, ತಾಲೂಕಿನಲ್ಲಿಬಾಲ್ಯವಿವಾಹ, ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ವ್ಯಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲಿ ಪ್ರೀತಿ-ಪ್ರೇಮದ ಹೆಸರಲ್ಲಿಯುವತಿಯರನ್ನು ಬಲೆಬೀಳಿಸಿಕೊಂಡು ಮೋಸ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಫೋಕ್ಸೋ ಕಾಯ್ದೆ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕ್ರಮಕೈಗೊಳ್ಳಬೇಕೆಂದು ಹೇಳಿದರು.

ಸಂಘದ ಅಧ್ಯಕ್ಷ ಶಿವಣ್ಣ, ರತ್ನಪುರಿ ಪುಟ್ಟಸ್ವಾಮಿ ಮಾತನಾಡಿ, ಬಿಳಿಕೆರೆ ಪೊಲೀಸ್‌ ಠಾಣೆಯ ರವಿಕುಮಾರ್‌ ದಲಿತರಿಗೆ ರಕ್ಷಣೆ ಕೊಡದೆ, ಉಳ್ಳವರ ಪರ ನಿಂತುಅನ್ಯಾಯ ಮಾಡುತ್ತಿದ್ದಾರೆ. ಕರಿಮುದ್ದನಹಳ್ಳಿ ಗ್ರಾಮದದಲಿತರ ಮೇಲೆ ದೌರ್ಜನ್ಯ ನಡೆದರೂ ರಕ್ಷಣೆ ಕೊಡಲಿಲ್ಲ ಎಂದು ದೂರಿದರು.

ಬಲ್ಲೇನಹಳ್ಳಿ ಕೆಂಪರಾಜು ಮಾತನಾಡಿ, ಲಂಚದ ಹಾವಳಿಯಿಂದ ಪೊಲೀಸರಿಂದ ನೊಂದವರಿಗೆ ರಕ್ಷಣೆಸಿಗದೆ ತೊಂದರೆ ಆಗಿದೆ ಎಂದರು. ವಕೀಲ ಪುಟ್ಟರಾಜು ಮಾತನಾಡಿ, ಹಳೇ ರೌಡಿ ಲಿಸ್ಟ್‌ಗಳನ್ನು ಪುನರ್‌ ಪರಿಶೀಲಿಸಲು ಮನವಿ ಮಾಡಿದರು.

ಸಭೆಯಲ್ಲಿ ಐಜಿಪಿ ಪ್ರವೀಣ್‌ ಮಧುಕರ್‌ ಪವಾರ್‌, ಎಸ್‌ಪಿ ಆರ್‌.ಚೇತನ್‌, ಅಡಿಷನಲ್‌ ಎಸ್‌ಪಿ ಶಿವಕುಮಾರ್‌, ಡಿವೈಎಸ್‌ಪಿ ರವಿಪ್ರಸಾದ್‌, ಮೂರು ಠಾಣೆಗಳ ಇನ್ಸ್‌ ಪೆಕ್ಟರ್‌ಗಳು, ಮುಖಂಡರಾದ ಕುಮಾರ್‌, ಫಜಲುಲ್ಲಾ, ಪುಟ್ಟರಾಜು, ಸತ್ಯಪ್ಪ, ಸಯ್ಯದ್‌ ಅಹಮದ್‌ ಷಾ, ರಮೇಶ್‌, ಶಿವರಾಜ್‌, ಎ.ಪಿ.ಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hun-PDO-GP

Hunasuru: ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ; ಚಪ್ಪಲಿಯಿಂದ ಬಡಿದುಕೊಂಡ ಪಿಡಿಒ!

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.