ದೆಹಲಿಯಲ್ಲಿ ಭಾರೀ ಗಾಳಿ, ಮಳೆ; ರಸ್ತೆಗೆ ಉರುಳಿ ಬಿದ್ದ ಮರಗಳು- ಜನಜೀವನ ಅಸ್ತವ್ಯಸ್ತ
ತಾಪಮಾನ 29 ಡಿಗ್ರಿ ಸೆಲ್ಸಿಯಸ್ ನಿಂದ 18 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
Team Udayavani, May 23, 2022, 12:17 PM IST
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸೋಮವಾರ (ಮೇ 23) ಬೆಳಗ್ಗೆ ಭಾರೀ ಗುಡುಗು ಸಹಿತ ಗಾಳಿ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದ್ದು, ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಲಾನ ನಿಲ್ದಾಣದಿಂದ ಕಾರ್ಯಾಚರಿಸುವ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು
ದೆಹಲಿಯ ವಿವಿಧ ಭಾಗಗಳಲ್ಲಿ ಇಂದು ಸುರಿದ ಭಾರೀ ಗಾಳಿ, ಮಳೆಯಿಂದಾಗಿ ರಾಷ್ಟ್ರರಾಜಧಾನಿಯಲ್ಲಿ ತಾಪಮಾನ ತೀವ್ರ ಇಳಿಕೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಮಳೆಯಿಂದಾಗಿ ಇಂದು ಬೆಳಗ್ಗೆ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ನಿಂದ 18 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ವಿಮಾನ ಸಂಚಾರದ ಮಾಹಿತಿಗಾಗಿ ಸಂಬಂಧಪಟ್ಟ ಏರ್ ಲೈನ್ ಅನ್ನು ಸಂಪರ್ಕಿಸುವಂತೆ ಪ್ರಯಾಣಿಕರಲ್ಲಿ ವಿಮಾನ ನಿಲ್ದಾಣ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
#WATCH | Strong winds and rainfall lash Delhi-NCR. Visuals from Noida in Uttar Pradesh. Trees uprooted in the strong winds. pic.twitter.com/cC4rsBslBr
— ANI UP/Uttarakhand (@ANINewsUP) May 23, 2022
ನಗರದ ಹಲವು ಪ್ರದೇಶಗಳಲ್ಲಿ ನೀರು ತುಂಬಿದ್ದು, ಭಾರೀ ಗಾಳಿಗೆ ಮರಗಳು ಉರುಳಿ ಬಿದ್ದಿವೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ದೆಹಲಿ ಎನ್ ಸಿಆರ್ ಪ್ರದೇಶದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.