10 ಕೋ. ರೂ. ವೆಚ್ಚದಲ್ಲಿ ನೂತನ ಆಸ್ಪತ್ರೆ
ಪುಂಜಾಲಕಟ್ಟೆ ಪ್ರಾ.ಆ. ಕೇಂದ್ರಕ್ಕೆ ಭೇಟಿ ನೀಡಿದ ರಾಜೇಶ್ ನಾೖಕ್
Team Udayavani, May 23, 2022, 12:57 PM IST
ಪುಂಜಾಲಕಟ್ಟೆ: ಪುಂಜಾಲ ಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಅಂದಾಜು 10 ಕೋಟಿ ರೂಪಾಯಿ ವೆಚ್ಚದಲ್ಲಿ 18 ಸಾವಿರ ಚದರಡಿ ವಿಸ್ತೀರ್ಣದಲ್ಲಿ ಆಸ್ಪತ್ರೆ ನಿರ್ಮಾಣ ವಾಗಲಿದೆ ಎಂದು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ನೀಲನಕಾಶೆಯನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದು, ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ಮಾಡುತ್ತಿದೆ ಎಂದರು. ನೂತನ ಆಸ್ಪತ್ರೆಯಲ್ಲಿ 30 ಹಾಸಿಗೆಗಳು ಹಾಗೂ ಸರ್ವ ರೀತಿಯ ಸೌಲಭ್ಯಗಳಿರಲಿದೆ ಎಂದರು.
ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪ್ರಮುಖರಾದ ಹರೀಶ್ ಪ್ರಭು, ದಯಾನಂದ ನಾಯಕ್, ಯೋಗೇಂದ್ರ ಕುಮಂಗಿಲ, ಶಂಕರ ಶೆಟ್ಟಿ ಬೆದ್ರಮಾರ್, ಶುಭಕರ ಶೆಟ್ಟಿ, ಸುದರ್ಶನ ಬಜ, ರಮಾನಾಥ ರಾಯಿ, ಯಶೋಧರ ಕರ್ಬೆಟ್ಟು, ದಿನೇಶ್ ಶೆಟ್ಟಿ ದಂಬೆದಾರ್, ಚಿದಾ ನಂದ ರೈ ಕಕ್ಯ, ಪ್ರಶಾಂತ್ ಪುಂಜಾಲಕಟ್ಟೆ, ರಮೆಶ್ ಶೆಟ್ಟಿ ಮಜಲೋಡಿ, ತಾರಾನಾಥ, ಎಂಜಿನಿಯರ್ ರಾಜೇಶ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ರಶ್ಮಿ ಎಸ್. ಆರ್, ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ. ಯಮನಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್!
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.