ವೈಮನಸ್ಸು ಮರೆತು ಪಕ್ಷಕ್ಕಾಗಿ ಶ್ರಮಿಸಿ
Team Udayavani, May 23, 2022, 4:49 PM IST
ಕೋಲಾರ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರ ಪ್ರತ್ಯೇಕ ಬಣಗಳಿದ್ದು, ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ ಇವರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.
ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರುಕೇಂದ್ರದ ಮೋದಿ ಮತ್ತು ರಾಜ್ಯದ ಬಸವರಾಜ್ ಬೊಮ್ಮಯಿಸರ್ಕಾರಗಳ ಜನಪರವಾದ ಯೋಜನೆಗಳ ಬಗ್ಗೆ ಜನಕ್ಕೆ ಮುಟ್ಟಿಸಿದರೆ ಸಾಕು ಓಟು ಹಾಕುತ್ತಾರೆ ಅ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.
ಬಿಜೆಪಿ ಕಾರ್ಯಕ್ರಮಗಳಲ್ಲಿ ನಮ್ಮ ಪೋಟೋ ಹಾಕಿಲ್ಲ, ನಮ್ಮ ಹೆಸರು ಹಾಕಿಲ್ಲ, ನಮ್ಮನ್ನು ಕಾರ್ಯಕ್ರಮಕ್ಕೆ ಕರೆದಿಲ್ಲ ಎಂಬುದನ್ನು ಬಿಟ್ಟು ಪಕ್ಷಕ್ಕಾಗಿ ಒಂದೇ ಮನಸ್ಸಿನಿಂದ ಕೆಲಸ ಮಾಡಿ. ನಮ್ಮಲ್ಲಿನ ವೈಮನಸ್ಯ ಮರೆತು ಪಕ್ಷ ನಮ್ಮ ತಾಯಿ ಇದ್ದಂತೆ ಪಕ್ಷ ಕಟ್ಟುವ ಕೆಲಸ ಮಾಡೋಣವೆಂದು ಜಿಲ್ಲೆಯಲ್ಲಿ ಪಕ್ಷದ ಹಿತದೃಷ್ಟಿಯಿಂದಪಕ್ಷದ ಸಂಘಟನೆಯ ಉದ್ದೇಶಗಳಿಂದ ಗೊತ್ತಿದ್ದೊ ಗೊತ್ತಲ್ಲದೋಕಾರ್ಯಕ್ರಮಗಳನ್ನು ಮಾಡಿರಬಹುದು ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡೋಣ ಯಾವುದನ್ನು ಮನಸ್ಸಿನಲ್ಲಿ ಇಟ್ಟಿಕೊಳ್ಳದೇ ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟುವ ಕೆಲಸ ಮಾಡೋಣ ಎಂದರು.
ದೇಶದಲ್ಲಿ ದಲಿತರು ಅಂಬೇಡ್ಕರ್ ಅವರಿಗೆ ಗೌರವ ಕೊಡುವುದಾದರೆ ಯಾರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಓಟು ಹಾಕಬಾರದು. ಏಕೆಂದರೆ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವಮಾನ ಅಗೌರವ ತೋರಿದ್ದಾರೆ.ಪ್ರತಿಯೊಂದು ಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಓಡಾಡಿಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ನೀಡಿದ ಅವಮಾನದ ಬಗ್ಗೆ ಪ್ರಚಾರ ಮಾಡಬೇಕಿದೆ ಎಂದರು.
ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ ನಾರಾಯಣಸ್ವಾಮಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳನ್ನು ಮುಚ್ಚಿಹಾಕಲು ವಿನಾಕಾರಣ ಗಲಭೆ ಗದ್ದಲಗಳನ್ನು ಮಾಡಲು ಹೊರಟಿದ್ದಾರೆ 2013 ರಲ್ಲಿ ಸೂಪರ್ ಗೃಹ ಸಚಿವ ಕೆಂಪಯ್ಯ ನೇತೃತ್ವದಲ್ಲಿ ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿದ್ದು, ಸಮಾಜವಾದಿ ನೆಲೆಯಲ್ಲಿ ಬಂದವರು ಎಂದು ಹೇಳಿಕೊಂಡ ಲೋಕಾಯುಕ್ತಸಂಸ್ಥೆಯನ್ನು ಮುಚ್ಚಿ ಎಸಿಬಿ ಸಂಸ್ಥೆಯ ಪ್ರಾರಂಭದ ಹಿಂದಿನಉದ್ದೇಶವೇನು 2013ರಿಂದ ಇಲ್ಲಿ ತನಕ ನಡೆದಿರುವ ನೇಮಕಾತಿಬಗ್ಗೆ ಸಮಗ್ರ ತನಿಖೆಗೆ ಮುಖ್ಯಮಂತ್ರಿ ಬೊಮ್ಮಯಿಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಎತ್ತಿನಹೊಳೆ ಯೋಜನೆಯನ್ನು ಪ್ರಾರಂಭ ಮಾಡಲು ಅನುಮೋದನೆ ಮಾಡಿದ್ದು, ಸದಾನಂದಗೌಡ ಸಿಎಂ ಆಗಿದ್ದ ಸಂದರ್ಭದಲ್ಲಿ ನಂತರ ಜಗದೀಶ್ ಶೆಟ್ಟರ್ ಸಿಎಂ ಆದನಂತರ ಹಣ ಬಿಡುಗಡೆ ಮಾಡಿದ್ದರು. ಆದರೆ ಕಾಂಗ್ರೆಸ್‌ನವರುನಾವು ಮಾಡಿದ್ದು ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಈಯೋಜನೆಯಿಂದ ನಮ್ಮ ಜಿಲ್ಲೆಯ ಪ್ರಭಾವಿಗಳಿಗೆ ಕಮಿಷನ್‌ಹಣ ಹೋಗಿದೆ ಅಂತ ಸದನದಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ. ಇದರ ಬಗ್ಗೆ ತನಿಖೆಯಾಗಬೇಕು ಎಂದರು.
ಮಾಜಿ ಶಾಸಕ ವರ್ತೂರು ಪ್ರಕಾಶ್ ಮಾತನಾಡಿ, ನಾನುಸೇರಿದಂತೆ ನಮ್ಮ ತಂಡ ಯಾವುದೇ ಆಸೆ ಅಕ್ಷಾಂಶೆಗಳನ್ನು ಕಟ್ಟಿಕೊಂಡು ಬಿಜೆಪಿ ಪಕ್ಷಕ್ಕೆ ಬಂದಿಲ್ಲ ಒಬ್ಬ ಸಾಮಾನ್ಯಕಾರ್ಯಕರ್ತನಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ ಪಕ್ಷ ಕಟ್ಟುವ ಸಂದರ್ಭದಲ್ಲಿ ಕುತಂತ್ರ ಮಾಡಬೇಡಿ ಎಂದರು.
ಮಾಜಿ ಶಾಸಕರಾದ ವೈ ಸಂಪಂಗಿ, ಬಿ.ಪಿ ವೆಂಕಟಮುನಿಯಪ್ಪ, ಮಾಲೂರು ಮಂಜುನಾಥ್ ಗೌಡ, ಜಿಲ್ಲಾ ಅಧ್ಯಕ್ಷ. ವೇಣುಗೋಪಾಲ್, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಪಕ್ಷದ ಜಿಲ್ಲಾ ಉಸ್ತುವಾರಿ ಕಾಂತರಾಜ್, ನರೇಂದ್ರ ರಂಗಪ್ಪ ಇದ್ದರು.
ಸಿದ್ದು-ಡಿಕೆಶಿ ಮಧ್ಯೆ ವಾರ್ :
ಕಾಂಗ್ರೆಸ್ ಅಧಿ ಕಾರಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಮಧ್ಯೆ ದೊಡ್ಡ ವಾರ್ ನಡೆಯುತ್ತಿದೆ. ಯಾವು ದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ ಡಿ.ಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿ ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಿಂದ ಲೋಕಸಭೆವರೆಗೆನಡೆಯುವ ಪ್ರತಿಯೊಂದು ಚುನಾವಣೆಯಲ್ಲಿ ಬಿಜೆಪಿಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಿ ಜಿಲ್ಲೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಕ್ಕೆಬಿಜೆಪಿ ಗೆಲ್ಲಿಸೋಣ ಉಳಿದ ಐದು ಕಡೆ ಬಿಜೆಪಿ ಗೆಲುವುಸಾಧಿಸುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.