ಕಾಂಗ್ರೆಸ್ ಮುಳುಗುವ ಹಡಗು: ರವಿಕುಮಾರ
ವಿಧಾನಸಭೆ ಚುನಾವಣೆಗೆ ದಿಕ್ಸೂಚಿ
Team Udayavani, May 24, 2022, 10:41 AM IST
ಮುಧೋಳ: ಮುಳುಗುವ ಹಡಗಿನಂತಿರುವ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಎದ್ದು ಕಾಣುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಸೂಕ್ತ ಅಭ್ಯರ್ಥಿಗಳೆ ದೊರೆಯುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಲೇವಡಿ ಮಾಡಿದರು. ವಿಧಾನ ಪರಿಷತ್‌ನ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಗರದ ದತ್ತ ಮಂದಿರದಲ್ಲಿ ನಡದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತನಾಡಿದ ಅವರು, ಈ ಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಬಿಜೆಪಿ ಗೆಲ್ಲಿಸಲು ಎಲ್ಲ ಕಾರ್ಯಕರ್ತರು ಶ್ರಮಿಸಬೇಕು. ಚುನಾವಣೆಯನ್ನು ಹಗುರವಾಗಿ ಪರಿಗಣಿಸಬಾರದು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಮುಧೋಳ ಮತಕ್ಷೇತ್ರದಲ್ಲಿ ಲೋಕಾಪುರ, ಹಲಗಲಿ ಹಾಗೂ ಮುಧೋಳ ಬೂತ್‌ಗಳ ವ್ಯಾಪ್ತಿಯಲ್ಲಿ ಒಟ್ಟು 5 ಸಾವಿರ ಮತದಾರರಿದ್ದಾರೆ. ಪಕ್ಷದ ಕಾರ್ಯಕರ್ತರು ಮತದಾರರಿಗೆ ಬಿಜೆಪಿ ಸಾಧನೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮನವರಿಕೆ ಮಾಡಿಕೊಟ್ಟು ಮತ ಕೇಳಬೇಕು ಎಂದು ತಿಳಿಸಿದರು.
ಕಳೆದ ಅವಧಿಯಲ್ಲಿ ಪದವೀಧರ ಕ್ಷೇತ್ರದಿಂದ ಸ್ಪರ್ದಿಸಿದ್ದ ಹನಮಂತ ನಿರಾಣಿ 25 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧುಸಿದ್ದರು. ಈ ಬಾರಿ ಆ ದಾಖಲೆ ಮರಿದು ಇನ್ನು ಹೆಚ್ಚಿನ ಮತಗಳ ಅಂತರದಿಂದ ಜಯಶಾಲಿಯಾಗುವಂತೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಕಾರ್ಯಕರ್ತರು ಮನೆ ಮನೆಗೆ ತರಳಿ ಮತದಾರರನ್ನು ಒಲಿಸುವ ಕಾರ್ಯ ಮಾಡಿ ಮತಗಳನ್ನು ಪಡೆಯಲು ಮುಂದಾಗಬೇಕು. ಪಕ್ಷದ ಅಭಿವೃದ್ಧಿಪರ ಕಾರ್ಯ ಬಿಂಬಿಸುವ ಕರಪತ್ರ ನೀಡಿ ಮತದಾರರ ಓಲೈಕೆ ಮಾಡಬೇಕು ಎಂದರು.
ಬಿಜೆಪಿ ಸರ್ಕಾರ ಶಿಕ್ಷಕರ ಹಾಗೂ ಪದವೀಧರರ ಅನೇಕ ಅಶೋತ್ತರಗಳನ್ನು ಈಡೇರಿಸಿದೆ. ಶಿಕ್ಷಕರ ಸಂಬಳ, ಪ್ರಾಧ್ಯಾಪಕರ ಸಂಬಳ ಹೆಚ್ಚಳ, ಯೂನಿವರ್ಸಿಟಿ, ಕಾಲೇಜು, ಪ್ರೌಢಶಾಲೆ, ಹೆಚ್ಚು ಶಾಲೆಗಳನ್ನು ಅನುದಾನಕ್ಕೊಳಪಡಿಸಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿ ಸರ್ವಶಿಕ್ಷಣ ಅಭಿಯಾನದಡಿ ಪ್ರತಿಯೊಂದು ಶಾಲೆ ಕಾಲೇಜಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಈ ಎಲ್ಲ ಅಭಿವೃದ್ಧಿ ಯೋಜನೆಗಳು ನಮ್ಮ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದಿನ ದಿನದಲ್ಲಿ ಪ್ರತಿಯೊಂದು ರಾಜ್ಯಕ್ಕೆ ಒಂದು ಐಐಟಿ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಅವರ ಕೈ ಬಲಪಡಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಮಾಜಿ ಪ್ರಧಾನ ಮಂತ್ರಿ ಅಟಲ್‌ಬಿಹಾರಿ ವಾಜಪೇಯಿ ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ತಾಲೂಕಿನ ಸಂಪೂರ್ಣ ಅಭಿವೃದ್ಧಿಯಾಗಿದೆ. ನಮ್ಮ ಸಾಧನೆ ಬಗ್ಗೆ ಮತದಾರರಿಗೆ ತಿಳಿಸಿ ಮತ ಕೇಳ್ಳೋಣ. ಶಿಕ್ಷಕರ ಹಾಗೂ ಪದವೀಧರರ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆದು ನಮ್ಮ ಪಕ್ಷದ ಅಭ್ಯರ್ಥಿಗಳಾದ ನಿರಾಣಿ ಹಾಗೂ ಅರುಣ ಶಹಾಪುರ ಅವರನ್ನು ಆಯ್ಕೆ ಮಾಡೋಣ ಎಂದರು.
ವಾಯವ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹನಮಂತ ನಿರಾಣಿ ಮಾತನಾಡಿ, ಕಳೆದ ಬಾರಿ ಆಯ್ಕೆಯಾದ ನಾನು ಪ್ರಾಮಾಣಿಕವಾಗಿ ನಿಮ್ಮ ಸೇವೆಯನ್ನು ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸೇವೆ ಮಾಡಲು ಮತ್ತೂಮ್ಮೆ ನನಗೆ ಅವಕಾಶ ಕಲ್ಪಿಸಿ ಕೊಡಬೇಕು. ಅದಕ್ಕೆ ಎಲ್ಲರ ಸಹಕಾರ ಅವಶ್ಯ ಎಂದು ಹೇಳಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಮಣ್ಣ ತಳೇವಾಡ, ಬಿಜೆಪಿ ಮುಖಂಡರಾದ ಕೆ.ಆರ್. ಮಾಚಪ್ಪನವರ, ಅರುಣ ಕಾರಜೋಳ, ನಗರಸಭೆ ಅಧ್ಯಕ್ಷ ಗುರುಪಾದ ಕುಳಲಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಡಾ| ರವಿ ನಂದಗಾವಿ, ಗ್ರಾಮೀಣ ಘಟಕ ಅಧ್ಯಕ್ಷ ಹನಮಂತ ತುಳಸಿಗೇರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ವಸ್ತ್ರದ, ಬಿಜೆಪಿ ಯುವ ಮೋರ್ಚಾ ಘಟಕ ಅಧ್ಯಕ್ಷ ಪ್ರದೀಪ ನಿಂಬಾಳ್ಕರ, ತುಷಾರ ಭೋಪಳೆ, ಸೇರಿದಂತೆ ಇತರರು ಇದ್ದರು.
ಕೊರೊನಾ ವೇಳೆ ದೇಶದಲ್ಲಿ 6 ಕೋಟಿ 25 ಲಕ್ಷ ಡೋಸ್ ವ್ಯಾಕ್ಸಿನ್‌ಉತ್ಪನ್ನವಾಗುತ್ತಿತ್ತು. ದೇಶದ ಪ್ರತಿಯೋರ್ವ ನಾಗರಿಕರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಿದ್ದು ನಮ್ಮ ಸರ್ಕಾರ. ಒಂದು ವೇಳೆ ಕೊರೊನಾ ಅವಧಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದಿದ್ದರೆ ಜನರು ಇರುವೆ ರೀತಿಯಲ್ಲಿ ಮೃತಪಡುತ್ತಿದ್ದರು. ಕಾಂಗ್ರೆಸ್‌ನ ಇಂದಿರಾಗಾಂಧಿ ಅವರು ಹೇಳಿದ ಹಾಗೆ ಗರೀಬಿ ಹಠವೋ ಆಗಲಿಲ್ಲ, ಬದಲಿಗೆ ಕೇವಲ ಕಾಂಗ್ರೆಸ್ ಪಕ್ಷದ ಮುಖಂಡರ ಗರೀಬಿ ಹಠಾವೋ ಆಯಿತು. –ಗೋವಿಂದ ಕಾರಜೋಳ, ಜಲಸಂಪನ್ಮೂಲ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.