ಟಿ.ಎ.ಶರವಣಗೆ ವಿಧಾನ ಪರಿಷತ್ ಟಿಕೆಟ್ ನೀಡಿದ ಜೆಡಿಎಸ್

Team Udayavani, May 24, 2022, 11:31 AM IST

T.A.Saravana gets JDS ticket for council election

ಬೆಂಗಳೂರು: ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ ಬೆನ್ನಲ್ಲೇ ಜೆಡಿಎಸ್ ಕೂಡಾ ಟಿಕೆಟ್ ಫೈನಲ್ ಮಾಡಿದೆ. ಟಿ.ಎ.ಶರವಣಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.

ಜೆಡಿಎಸ್ ನಲ್ಲಿ ಒಂದು ಕ್ಷೇತ್ರದ ಟಿಕೆಟ್ ಗಾಗಿ ಹತ್ತಕ್ಕೂ ಹೆಚ್ಚು ಮಂದಿ ಕಸರತ್ತು ನಡೆಸಿದ್ದರು. ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಟಿ.ಎ.ಶರವಣ ಮತ್ತು ವೀರೆಂದ್ರ ಪ್ರಬಲ ಅಭ್ಯರ್ಥಿಗಳಾಗಿದ್ದರು. ಆದರೆ ಟಿ.ಎ.ಶರವಣಗೆ ಟಿಕೆಟ್ ಅಂತಿಮಗೊಳಿಸಲಾಗಿದೆ.

ಇದನ್ನೂ ಓದಿ:ಬದಲಾಯ್ತು ಬಿಜೆಪಿ ಪಟ್ಟಿ: ಲಕ್ಷ್ಮಣ ಸವದಿ, ಹೇಮಲತಾ ನಾಯಕ್ ಗೆ ಪರಿಷತ್ ಟಿಕೆಟ್

ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾದರೂ ಸೋಮವಾರ ತಡರಾತ್ರಿವರೆಗೆ ಜೆಡಿಎಸ್‌ ಅಭ್ಯರ್ಥಿ ಅಂತಿಮಗೊಂಡಿರಲಿಲ್ಲ. ಒಂದು ಸ್ಥಾನಕ್ಕೆ ಹಲವು ಮಂದಿ ಆಕಾಂಕ್ಷಿಗಳು ಇರುವುದು ಪಕ್ಷದ ವರಿಷ್ಠರ ತಲೆಬಿಸಿಗೆ ಕಾರಣವಾಗಿತ್ತು. ಈ ವಿಚಾರವಾಗಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, “2-3 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.  ಮಂಗಳವಾರ ಬೆಳಗ್ಗೆ ಪಟ್ಟಿ ಬಿಡುಗಡೆ ಮಾಡುತ್ತೇವೆ. ಸಿ.ಎಂ.ಇಬ್ರಾಹಿಂ ಅವರೂ ಸಹ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಈ ಬಗ್ಗೆ ಅವರೂ ನಮ್ಮ ಬಳಿ ಚರ್ಚಿಸಿದರು. ಅವರೂ ಕೂಡ ದೇವೇಗೌಡರ ತೀರ್ಮಾನಕ್ಕೆ ಬದ್ಧ ಎಂದಿದ್ದಾರೆ. ಮುಖಂಡರಾದ ಟಿ.ಎ ಶರವಣ ಹಾಗೂ ವೀರೇಂದ್ರ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಹತ್ತು ಮಂದಿ ಟಿಕೆಟ್‌ ನೀಡಬೇಕು ಎಂದು ಒತ್ತಡ ಹೇರಿದ್ದರು’ ಎಂದು ವಿವರಿಸಿದ್ದರು.

ಬಿಜೆಪಿ ಟಿಕೆಟ್ ಫೈನಲ್: ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಕೇಶವ ಪ್ರಸಾದ್ ಮತ್ತು ಚಲವಾದಿ ನಾರಾಯಣ ಸ್ವಾಮಿಗೆ ಟಿಕೆಟ್ ಅಂತಿಮ ಮಾಡಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಸವರಾಜ ಹೊರಟ್ಟಿಯವರಿಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಟಿಕೆಟ್: ಪ್ರತಿಪಕ್ಷ ಕಾಂಗ್ರೆಸ್‌ ಹಿಂದುಳಿದ ವರ್ಗದ ಯಾದವ ಹಾಗೂ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ ಅಭ್ಯರ್ಥಿಗೆ ಮಣೆ ಹಾಕಿದೆ. ಪಕ್ಷದ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್‌ ಜಬ್ಟಾರ್‌ ಜತೆಗೆ ಅಚ್ಚರಿ ಅಭ್ಯರ್ಥಿಯಾಗಿ ಹಿಂದುಳಿದ ವರ್ಗದ ಎಂ. ನಾಗರಾಜ್‌ ಯಾದವ್‌ ಅವರಿಗೆ ಟಿಕೆಟ್‌ ನೀಡಿದೆ. ಜಬ್ಟಾರ್‌ ಈ ಹಿಂದೆ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ನಾಗರಾಜ್‌ ಯಾದವ್‌ ಬಿಎಂಟಿಸಿ ಅಧ್ಯಕ್ಷರಾಗಿ, ಕೆಪಿಸಿಸಿ ವಕ್ತಾರರಾಗಿ, ಪುಲಕೇಶಿನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಟಾಪ್ ನ್ಯೂಸ್

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.