ಸಿದ್ಧು-ಡಿಕೆಶಿಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್‌ ನಾಶ: ಶೆಟ್ಟರ

Team Udayavani, May 24, 2022, 11:40 AM IST

8

ಗೋಕಾಕ: ಕಾಂಗ್ರೆಸ್‌ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷವನ್ನು ಅದರ ನಾಯಕರೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೆಸ್‌ ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಸೋಮವಾರ ಜರುಗಿದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಗೊತ್ತು-ಗುರಿಗಳಿಲ್ಲ. ಕೇವಲ ಸುಳ್ಳು ಪ್ರಚಾರ ಡಂಭಾಚಾರ ನಡೆಸುವುದೇ ಅದರ ಗುರಿಯಾಗಿದೆ ಎಂದು ಟೀಕಿಸಿದರು.

ಇದುವರೆಗೂ ವಿಧಾನ ಪರಿಷತ್‌ ಅಭ್ಯರ್ಥಿಗಳ ಆಯ್ಕೆ ಮಾಡಲಿಕ್ಕೆ ಆ ಪಕ್ಷಕ್ಕೆ ಸಾಧ್ಯವಾಗಿಲ್ಲ. ಸಿದ್ಧು-ಡಿಕೆಶಿ ಸೇರಿಕೊಂಡು ಪಕ್ಷವನ್ನು ನಿರ್ನಾಮ ಮಾಡುತ್ತಾರೆ. ಈಗಾಗಲೇ ಪಂಜಾಬ್‌ನ ಸಿದ್ಧು ಜೈಲು ಸೇರಿದ್ದಾರೆ. ಇಲ್ಲಿ ಸಿದ್ಧು ಕಾಂಗ್ರೆಸ್‌ನ್ನು ಸಂಪೂರ್ಣ ನೆಲಕ್ಕುರುಳಿಸುತ್ತಾರೆಂದು ಅವರು ಹೇಳಿದರು.

ಮುಂಬರುವ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಸುಮಾರು 150 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎಂದರು. ಜೂನ್‌ 13 ರಂದು ನಡೆಯುವ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಜಯಶಾಲಿಯಾಗಲಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿಲ್ಲ. ಈ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಶಿಕ್ಷಕರ ಕ್ಷೇತ್ರದಿಂದ ಅರುಣ ಶಹಾಪೂರ ಹಾಗೂ ಪದವೀಧರ ಮತಕ್ಷೇತ್ರದಿಂದ ಹಣಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮೂಲಕ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕೋರಿಕೆಯ ಮೇರೆಗೆ ಗೋಕಾಕದಿಂದ ಪ್ರಚಾರ ಸಭೆಯನ್ನು ಆರಂಭಿಸಿರುವುದಾಗಿ ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ತಲಾ 10 ಮತಗಳನ್ನು ಅಭ್ಯರ್ಥಿಗಳಿಗೆ ಹಾಕಿಸಬೇಕು ಎಂದರು.

ಅರಣ್ಯ ಹಾಗೂ ಆಹಾರ ಸಚಿವ ಉಮೇಶ ಕತ್ತಿ ಮಾತನಾಡಿ, ಪ್ರಕಾಶ ಹುಕ್ಕೇರಿ ಶಿಕ್ಷಕರೂ ಅಲ್ಲ. ಪದವೀಧರರೂ ಅಲ್ಲ. ಕೇವಲ ಅಧಿಕಾರದ ದಾಹಕ್ಕಾಗಿ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ನಾನು, ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ವೈಮನಸ್ಸುಗಳಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಎಲ್ಲ ಬಿಜೆಪಿ ನಾಯಕರುಗಳು ಒಂದಾಗಿ ದುಡಿಯುತ್ತೇವೆ ಎಂದು ಅವರು ಹೇಳಿದರು.

ಕೆಎಂಎಫ್‌ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ವಿಧಾನ ಪರಿಷತ್‌ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹಣಮಂತ ನಿರಾಣಿ ಅವರಿಗೆ ಅತ್ಯ ಧಿಕ ಮತಗಳಿಂದ ಗೆಲ್ಲಿಸುತ್ತೇವೆ. ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರ ಪಡೆಯನ್ನು ರಚಿಸಲಾಗುವುದು. ಎಲ್ಲರೂ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸುತ್ತೇವೆ ಎಂದು ನುಡಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಪ ಸದಸ್ಯ ರವಿಕುಮಾರ ಮಾತನಾಡಿದರು. ವಾಯವ್ಯ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ, ವಾಯವ್ಯ ಪದವೀಧರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಮತಯಾಚಿಸಿದರು.

ವೇದಿಕೆಯಲ್ಲಿ ಸಂಸದರಾದ ಮಂಗಲ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಗೋಕಾಕ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ನಗರ ಘಟಕ ಬಿಜೆಪಿ ಅಧ್ಯಕ್ಷ ಭೀಮಶಿ ಭರಮನ್ನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಸ್ವಾಗತಿಸಿದರು. ಪರಸಪ್ಪ ಬಬಲಿ ನಿರೂಪಿಸಿದರು.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.