ಭಾರತದಲ್ಲಿ 24ಗಂಟೆಯಲ್ಲಿ 1,675 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಅಲ್ಪ ಏರಿಕೆ
ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,490ಕ್ಕೆ ಹೆಚ್ಚಳವಾಗಿದೆ.
Team Udayavani, May 24, 2022, 12:07 PM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,675 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,40,068ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಮೇ 24) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,841ಕ್ಕೆ ತಲುಪಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.75ರಷ್ಟಿದೆ ಎಂದು ಸಚಿವಾಲಯ ಹೇಳಿದೆ.
ಕೇರಳದಲ್ಲಿ ಕೋವಿಡ್ 19 ಸೋಂಕಿನಿಂದ 31 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,490ಕ್ಕೆ ಹೆಚ್ಚಳವಾಗಿದೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.0.41ರಷ್ಟಿದೆ, ವಾರದ ಪಾಸಿಟಿವಿಟಿ ದರ ಶೇ.0.49ರಷ್ಟಿದೆ. ದೇಶಾದ್ಯಂತ ಈವರೆಗೆ 84.74 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಭಾರತದಲ್ಲಿ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ 192.52 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.