ಸ್ವ-ಸಹಾಯ ಸಂಘದಿಂದ ಸ್ವೋದ್ವೋಗ ಹೆಚ್ಚಬೇಕು: ಎಸ್. ಅಂಗಾರ

Team Udayavani, May 24, 2022, 12:54 PM IST

s-angara

ಉಡುಪಿ: ಸ್ವ-ಸಹಾಯ ಸಂಘಗಳು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಸ್ವೋದ್ಯೋಗಕ್ಕೆ ಇನ್ನಷ್ಟು ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ಹೇಳಿದರು.

ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಂಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿ ಯಾನ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಗೆ ಬೀಜಧನ ಚೆಕ್‌ ವಿತರಿಸಿ ಅವರು ಮಾತನಾಡಿದರು.

ಸ್ವೋದ್ಯೋಮಕ್ಕೆ ಪ್ರೋತ್ಸಾಹ ನೀಡುವ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಸ್ವ-ಸಹಾಯ ಸಂಘಗಳಿಗೆ ಇನ್ನಷ್ಟು ಹೆಚ್ಚು ಉತ್ತೇಜನ ನೀಡಲಾಗುತ್ತಿದೆ. ಅಭಿವೃದ್ಧಿಯ ಜತೆಗೆ ನಿರುದ್ಯೋಗವೂ ದೊಡ್ಡ ಸವಾಲಾಗಿದೆ. ಎಲ್ಲರಿಗೂ ಸರಕಾರಿ ಕೆಲಸ ನೀಡಲು ಸಾಧ್ಯವಿಲ್ಲ. ಹೀಗಾಗಿ ಸ್ವೋದ್ಯೋಗ ಹೆಚ್ಚಾಗಬೇಕು ಎಂದರು.

ಶಿಕ್ಷಣ, ಆರೋಗ್ಯದ ಜತೆಗೆ ಸ್ತ್ರೀಶಕ್ತಿ ಗುಂಪುಗಳಿಗೂ ಸರಕಾರ ಪ್ರೋತ್ಸಾಹ ನೀಡುತ್ತಿದೆ. ಸಣ್ಣ ಪ್ರಮಾಣದಲ್ಲಿ ಉದ್ದಿಮೆ ಆರಂಭಿಸಲು ಸರಕಾರ ಅನೇಕ ಯೋಜನೆಯಡಿ ಸೌಲಭ್ಯ ಈಗ ಒಂದು ಲಕ್ಷ ರೂ.ಗಳ ಚೆಕ್‌ ನೀಡು ತ್ತಿದ್ದೇವೆ. ಇದರಲ್ಲಿಯೇ ಇನ್ನಷ್ಟು ಸ್ವೋದ್ಯೋಗ ಸೃಷ್ಟಿಯ ಕಾರ್ಯ ಆಗಬೇಕು. ಸಹಾಯಧನ ಹೆಚ್ಚಿಸುವಂತ ಬೇಡಿಕೆ ಕಡಿಮೆಯಾಗಬೇಕು ಎಂದು ಅಂಗಾರ ಹೇಳಿದರು.

ಸ್ವ-ಸಹಾಯ ಸಂಘಗಳು ಬ್ಯಾಂಕ್‌ನಿಂದ ಅಗತ್ಯ ಸೌಲಭ್ಯ ಪಡೆದು ಅಭಿವೃದ್ಧಿ ಪಥದಲ್ಲಿ ಸಾಗಬೇಕು. ಸುಸ್ತಿದಾರರಾಗಬಾರದು. ನಿರಂತರ ವ್ಯವಹಾರ ಮಾಡುವಂತೆ ಇರಬೇಕು. ಕರಾವಳಿಯಲ್ಲಿ ಮೀನುಗಾರಿಕೆ ಉತ್ತೇಜಿಸುವ ದೃಷ್ಟಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಕೋಲ್ಡ್‌ ಸ್ಟೋರೇಜ್‌ ಜತೆಗೆ ಸಾರಿಗೆ ವಾಹನ ವ್ಯವಸ್ಥೆ ಮಾಡುತ್ತಿದ್ದೇವೆ. ಮೀನು ಉತ್ಪಾದನೆ ದ್ವಿಗುಣಗೊಳಿಸಲು ಬೇಕಾದ ಕ್ರಮ ಆಗುತ್ತಿದೆ ಎಂದರು.

ಫ‌ಲಾನುಭವಿಗಳು

ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಬೈಂದೂರಿನ 21 ಗುಂಪು ಗಳ 306 ಸದಸ್ಯರು, ಕುಂದಾಪುರ 6 ಗುಂಪಿನ 88 ಸದಸ್ಯರು, ಉಡುಪಿಯ 1 ಗುಂಪಿನ 17 ಹಾಗೂ ಕಾಪುವಿನ 24 ಗುಂಪಿನ 208 ಸದಸ್ಯರು ಮತ್ತು ಕಾರ್ಕಳದ 1,267 ಸದಸ್ಯರು ಈ ಸೌಲಭ್ಯ ಪಡೆಯಲಿದ್ದಾರೆ ಎಂದರು.

ಶಾಸಕರಾದ ಕೆ.ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಜಿ.ಪಂ. ಸಿಇಒ ಎಚ್.ಪ್ರಸನ್ನ, ಜಿ.ಪಂ. ಯೋಜನ ನಿರ್ದೇಶಕ ಬಾಬು ಎಂ., ಅಪರ ಜಿಲ್ಲಾಧಿಕಾರಿ ವೀಣಾ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಭಾಗದ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ (ಪ್ರಭಾರ) ವೀಣಾ ವಿವೇಕಾನಂದ ಸ್ವಾಗತಿಸಿದರು. ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಿಕಾ ನಿರೂಪಿಸಿದರು.

ಟಾಪ್ ನ್ಯೂಸ್

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.