ಪೂರ್ಣ ಕಾಮಗಾರಿಗಳ ದೃಢೀಕರಣ ಪತ್ರ ಸಲ್ಲಿಸಿ
ಕಾಮಗಾರಿ ಕ್ರಿಯಾ ಯೋಜನೆ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಪಂ ಸಿಇಒ ಜಿ. ಪ್ರಭು ಸೂಚನೆ
Team Udayavani, May 24, 2022, 4:51 PM IST
ಚಿಕ್ಕಮಗಳೂರು: ಪೂರ್ಣಗೊಂಡ ಕಾಮಗಾರಿಗಳ ದೃಢೀಕರಣ ಪತ್ರ ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ಜಿ.ಪ್ರಭು ಸೂಚಿಸಿದರು.
ಇತ್ತೀಚೆಗೆ ನಗರದ ಜಿಪಂ ಸಭಾಂಗಣದಲ್ಲಿ 2022-23ನೇ ಸಾಲಿನ ವಿವಿಧ ಇಲಾಖೆಗಳ ಕಾಮಗಾರಿ ಕ್ರಿಯಾ ಯೋಜನೆ ಸಿದ್ಧತೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವ ಹಿಸಿ ಅವರು ಮಾತನಾಡಿದರು. ಕಾಮಗಾರಿಗಳ ವೆಚ್ಚದ ಸುಳ್ಳು ಲೆಕ್ಕ ತೋರಿಸಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ.
ಕಳೆದ ವರ್ಷ ಪೂರ್ಣಗೊಂಡ ಕಾಮಗಾರಿಗಳ ದೃಢೀಕರಣ ಪತ್ರ ಸಲ್ಲಿಸುವಂತೆ ತಿಳಿಸಿದರು. 2022-23ನೇ ಸಾಲಿನಲ್ಲಿ ಜಿಪಂಗೆ 5.41ಕೋಟಿ ರೂ. ಹಾಗೂ ಪ್ರತೀ ತಾಪಂಗೆ 2.21 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಮೇ 28ರೊಳಗೆ ಸರ್ಕಾರಕ್ಕೆ ಕ್ರಿಯಾ ಯೋಜನೆ ವರದಿ ಸಲ್ಲಿಸಬೇಕಿದೆ. ಪ್ರತೀ ಇಲಾಖೆ ಕೈಗೊಳ್ಳುತ್ತಿರುವ ಕಾಮಗಾರಿಗಳ ಸಮಗ್ರ ವರದಿಯನ್ನು ಸಲ್ಲಿಸುವಂತೆ ಹೇಳಿದರು. ಶೇ.25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ. ಪ್ರತೀ ಗ್ರಾಪಂ ಮಾದರಿ ಶಾಲೆ ನಿರ್ಮಿಸಲು ನರೇಗಾ ಯೋಜನೆಯಡಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ ಮತ್ತು ಮೇಜು ಹಾಗೂ ಪರಿಕರಗಳನ್ನು ಒದಗಿಸುವಂತೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಜಿಪಂ ಮತ್ತು ತಾಪಂ 350ಲಕ್ಷ ರೂ.ಮೀಸಲಿಡಲಾಗುವುದು ಎಂದ ಅವರು, ಜಿಲ್ಲೆಯಲ್ಲಿ ಬಾಕಿ ಇರುವ 62 ಅಂಗನವಾಡಿಗಳ ದುರಸ್ತಿ ಪೂರ್ಣಗೊಂಡಲ್ಲಿ 1825 ಸುಸಜ್ಜಿತ ಅಂಗನವಾಡಿಗಳನ್ನು ಹೊಂದಿರುವ ಪ್ರಥಮ ಜಿಲ್ಲೆಯಾಗಲಿದೆ ಎಂದು ತಿಳಿಸಿದರು.
ಆರೋಗ್ಯ ಕ್ಷೇತ್ರಕ್ಕೆ ಜಿಪಂನಿಂದ 54ಲಕ್ಷ ರೂ., ಪ್ರತಿ ತಾಪಂಗೆ 22ಲಕ್ಷ ರೂ. ಮೀಸಲಿಡಲಾಗುತ್ತಿದೆ. ಸಮುದಾಯ ಆರೋಗ್ಯ ಕೇಂದ್ರಗಳ ದುರಸ್ತಿ, ಕಾಂಪೌಂಡ್ ನಿರ್ಮಾಣ, ಪೀಠೊಪಕರಣಗಳ ಖರೀದಿಸಲು ವರದಿ ನೀಡಬೇಕು ಎಂದರು.
ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಶೇ.10 ರಷ್ಟು ಮೀರದಂತೆ ಬಳಕೆ ಮಾಡಬೇಕು. ಅಂಗವಿಕಲರ ಕಲ್ಯಾಣಕ್ಕಾಗಿ 120ಲಕ್ಷ ರೂ. ಅನುದಾನ ನೀಡಲಾಗುತ್ತಿದ್ದು, ಅಂಗವಿಕಲ ಸಮುದಾಯದ ಪೂರಕವಾಗಿ ಶಾಶ್ವತ ಸಹಾಯಕ್ಕಾಗಿ ಸಮಗ್ರ ವರದಿ ನೀಡಲು ಅವರು ತಿಳಿಸಿದರು.
ಆಶಾಕಿರಣ ಅಂಧ ಮಕ್ಕಳ ಶಾಲೆಯು ಮಾದರಿಯಾಗಿದ್ದು, ಇಲ್ಲಿನ ವಿದ್ಯಾರ್ಥಿಗಳು ಪ್ಯಾರಾ ಒಲಂಪಿಕ್ಸ್‌ನ ಕ್ರೀಡೆಗಳಲ್ಲಿ ಭಾರತವನ್ನು ಪ್ರತಿನಿಧಿಸಿ 4ಕ್ಕೂ ಹೆಚ್ಚು ಪದಕಗಳನ್ನು ಪಡೆದಿದ್ದಾರೆ. ಪ್ರತಿವರ್ಷ ಹೆಚ್ಚಾಗಿ ವಿದ್ಯಾರ್ಥಿಗಳು ದಾಖಲಾತಿ ಹೊಂದದೇ ಇರುವುದರಿಂದ ಪ್ರತಿ ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು ತಮ್ಮ ತಾಲೂಕಿನಲ್ಲಿ ತಲಾ 20 ಅಂಧ ಮಕ್ಕಳನ್ನು ಶಾಲೆಗೆ ದಾಖಲಿಸಲು ಪೋಷಕರಿಗೆ ಪ್ರೇರೇಪಿಸಬೇಕು ಎಂದರು.
ವೃಕ್ಷಾಭಿಯಾನ ಮಹತ್ವದ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ 2.5ಲಕ್ಷ ಗಿಡಗಳನ್ನು ನೆಡಬೇಕಾಗಿದೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ 1000 ಗಿಡಗಳನ್ನು ನೆಡುವ ಜೊತೆಗೆ ಅವುಗಳ ಪಾಲನೆಯನ್ನು ಮಾಡಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ರಮೇಶ್ ಕರಿಗೌಡ, ಜಿಪಂ ಉಪಕಾರ್ಯದರ್ಶಿ ಎಂ. ಕಿಶೋರ್, ಜಿಲ್ಲೆಯ ಎಲ್ಲಾ ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.