ಮದುವೆಗೆ ಅಡ್ಡಿಯಾದ ಪ್ರಿಯತಮೆಯ ಮಗುವನ್ನೇ ಅನಾಥವೆಂದು ಬಿಂಬಿಸಿ ಪೊಲೀಸರಿಗೊಪ್ಪಿಸಿದ ಪ್ರಿಯಕರ!
ಯುವಕನ ಕೈಗೆ ಮಗು ಕೊಟ್ಟು ಪರಾರಿಯಾದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು
Team Udayavani, May 24, 2022, 5:38 PM IST
ಮೈಸೂರು: ಮಹಿಳೆಯೊಬ್ಬಳು ಯುವಕನ ಕೈಗೆ ಮಗು ಕೊಟ್ಟು ನಾಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪ್ರೀತಿಗೆ ಮಗು ಅಡ್ಡಿಯಾಗಿದ್ದಕ್ಕೆ ಅನಾಥ ಮಗು ಎಂದು ಬಿಂಬಿಸಿರುವುದು ಬೆಳಕಿಗೆ ಬಂದಿದೆ.
ಕಳೆದ 15 ದಿನಗಳ ಹಿಂದೆ ರಾಯಚೂರು ಬಸ್ ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯೊಬ್ಬರು ತನ್ನ ಕೈಗೆ ಗಂಡು ಮಗು ಕೊಟ್ಟು ಪರಾರಿ ಆಗಿದ್ದಾರೆ ಎಂದು ಎಚ್. ಕೋಟೆಯ ಯುವಕ ರಘು ಕಥೆಕಟ್ಟಿ, ಆ ಮಗುವನ್ನು ಮೈಸೂರಿನ ಲಷ್ಕರ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದ.
ತನಿಖೆ ಕೈಗೊಂಡಾಗ ಪೊಲೀಸರಿಗೆ ಆ ಮಗು ತಂದುಕೊಟ್ಟಿದ್ದ ರಘು ಹಾಗೂ ಆ ಮಗುವಿನ ತಾಯಿಯ ನಿಜವಾದ ಸಂಬಂಧ ಗೊತ್ತಾಗಿದೆ.
ಮಗುವಿನ ತಾಯಿಗೆ ರಘು ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಆತನಿಗೆ ರಾಯಚೂರಿನ ಮಹಿಳೆಯೊಂದಿಗೆ ಒಡನಾಟ ಇತ್ತು. ಇದು ಮಹಿಳೆಯ ಗಂಡನಿಗೂ ಕೂಡ ಗೊತ್ತಾಗಿತ್ತು. ಅವರ ಪ್ರೀತಿಗೆ ಅಡ್ಡಿಯಾಗುವ ಈ ಮಗುವನ್ನು ದೂರ ಮಾಡುವ ಯೋಜನೆ ಮಾಡಿದ ರಘು, ಈ ಕಥೆಯನ್ನು ಸೃಷ್ಟಿಸಿದ್ದ. ಈತನ ನಡೆಯಿಂದ ಅನುಮಾನಗೊಂಡ ಪೊಲೀಸರು, ಮಗುವಿನ ತಂದೆಯನ್ನು ಪತ್ತೆ ಮಾಡಿ ವಿಚಾರಿಸಿದಾಗ ಇವರಿಬ್ಬರ ಸಂಬಂಧ, ನಾಟಕ ಬಯಲಾಗಿದೆ. ಬಳಿಕ ಇಬ್ಬರನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದು, ಮಗುವನ್ನು ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.