ಎಪಿಎಂಸಿ ವಿಲೀನದ ವಿರುದ್ಧ ಕಾಂಗ್ರೆಸ್‌ ಕಿಡಿ

ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ‘ಕೈ' ಕಾರ್ಯಕರ್ತರು

Team Udayavani, May 25, 2022, 5:10 PM IST

congress

ಹೊಸನಗರ: ತಾಲೂಕಿನ ಎಪಿಎಂಸಿಯನ್ನು ಸಾಗರ ಮಾರುಕಟ್ಟೆ ಜೊತೆ ವಿಲೀನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಬೃಹತ್‌ ಪತಿಭಟನೆ ಮತ್ತು ಹೆದ್ದಾರಿ ತಡೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಹೊಸನಗರ ತಾಲೂಕು ನಿರೀಕ್ಷಿತ ಅಭಿವೃದ್ಧಿಯಾಗದೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತ ಬಂದಿದೆ. ಈ ನಡುವೆ ತಾಲೂಕಿನ ರೈತರ ಜೀವನಾಡಿಯಾಗಿರುವ ಎಪಿಎಂಸಿಯನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ ಎಂದರು. ಈಗಾಗಲೇ ವಿಲೀನ ಪ್ರಕ್ರಿಯೆಗೆ ನೋಟಿಫಿಕೇಶನ್‌ ಜಾರಿ ಮಾಡಿ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸುವ ಜೊತೆಗೆ ನ್ಯಾಯಾಲಯದ ಮೆಟ್ಟಲೇರುವ ಕೆಲಸ ಮಾಡಬೇಕಿದೆ. 3 ಕೋಟಿಯಷ್ಟು ಆದಾಯವಿರುವ ಮತ್ತು ಉತ್ತಮ ಪ್ರಗತಿಯಲ್ಲಿರುವ ಎಪಿಎಂಸಿಯನ್ನು ವಿಲೀನಗೊಳಿಸುವ ಸರ್ಕಾರದ ಔಚಿತ್ಯವೇನು ಎಂದು ಪ್ರಶ್ನಿಸಿದರು.

ನೋಟಿಫಿಕೇಶನ್‌ ವಾಪಸ್‌ ಪಡೆಯಲಿ

ಯಾವುದೇ ಸರ್ಕಾರ ಬಂದರೂ ಇರುವ ಅಭಿವೃದ್ಧಿಗೆ ಇನ್ನಷ್ಟು ಒತ್ತು ನೀಡಬೇಕೇ ಹೊರತು ಹೊಸಕಿ ಹಾಕುವುದಲ್ಲ. ಇಂತಹ ವಿಚಾರಗಳು ಬಂದಾಗ ಶಾಸಕರು ಜನರ ಹಿತರಕ್ಷಣೆ ಮಾಡುವ ಕೆಲಸ ಮಾಡಬೇಕು. ಆದರೆ ಸಾಗರ ಶಾಸಕರು ಏನು ಮಾಡುತ್ತಿದ್ದಾರೆ ಗೊತ್ತಿಲ್ಲ ಎಂದರು.

ಸರ್ಕಾರ ಹೊಸನಗರ ತಾಲೂಕಿನ ಹಿತರಕ್ಷಣೆ ಗಮನದಲ್ಲಿಟ್ಟು ಎಪಿಎಂಸಿ ವಿಲೀನಕ್ಕೆ ಮಾಡಿರುವ ನೋಟಿಫಿಕೇಶನ್‌ ಕೂಡಲೇ ವಾಪಸ್‌ ಪಡೆಯಬೇಕು. ಅಲ್ಲಿಯವರೆಗೂ ಪಕ್ಷದ ಹೋರಾಟ ನಿರಂತರವಾಗಿರುತ್ತದೆ ಎಂದರು.

ಬೇಳೂರು ವಾಗ್ಧಾಳಿ

ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶಾಸಕರಿಗೆ ಕಾಳಜಿ ಇಲ್ಲ. ಹಿಂದೆ ಸಾಗರದ ಎಪಿಎಂಸಿಯನ್ನು ರೈತರ ಹಿತಕ್ಕೋಸ್ಕರ ವಿಭಜಿಸಿ ಹೊಸನಗರ ಮತ್ತು ಸೊರಬಕ್ಕೆ ಪ್ರತ್ಯೇಕವಾಗಿ ನೀಡಲಾಗಿತ್ತು. ಅದಕ್ಕೆ ಪೂರಕವಾಗಿ ಸಾಕಷ್ಟು ಅಭಿವೃದ್ಧಿ ಕೂಡ ಕಂಡಿದೆ. ಆದರೆ ಏಕಾಏಕಿ ಎಪಿಎಂಸಿಯನ್ನು ಸಾಗರಕ್ಕೆ ತೆಗೆದುಕೊಂಡು ಹೋಗುವ ಹಿಂದೆ ಯಾವ ಹುನ್ನಾರ ಇದೆ ಎಂದು ಪ್ರಶ್ನಿಸಿದರು.

ಎಪಿಎಂಸಿಗೆ ಚುನಾವಣೆ ನಡೆಸಬೇಕು. ಚುನಾವಣೆ ನಡೆಸಲು ಧೈರ್ಯವಿಲ್ಲ. ನಾಮಿನೇಟ್‌ ಸದಸ್ಯರನ್ನು ನೇಮಿಸಿ, ಬೇಕಾದವರನ್ನು ಅಧ್ಯಕ್ಷರಾಗಿ ಮಾಡುವುದು. ಅಧ್ಯಕ್ಷ ಸ್ಥಾನ ನೀಡುವ ಭರವಸೆಯನ್ನು ವ್ಯಕ್ತಿಯೊಬ್ಬರಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಲೀನಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಸೊರಬ ಎಪಿಎಂಸಿಯನ್ನು ಕುಮಾರ್‌ ಬಂಗಾರಪ್ಪ ಗುಟುರು ಹಾಕಿದ ನಂತರ ಮುಟ್ಟಲಿಲ್ಲ. ಸಂಸದರಿಗೆ ತಾಕತ್ತು ಇದ್ದರೆ ಶಿಕಾರಿಪುರ ಎಪಿಎಂಸಿಯನ್ನು ಶಿವಮೊಗ್ಗಕ್ಕೆ ಸೇರಿಸಲಿ ಎಂದು ಸವಾಲು ಹಾಕಿದರು.

ಎಪಿಎಂಸಿಯಿಂದ ಮೆರವಣಿಗೆ

ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಎಪಿಎಂಸಿಯಿಂದ ಮಾವಿಕೊಪ್ಪ ಸರ್ಕಲ್‌ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಮತ್ತು ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಹೆದ್ದಾರಿ ಮೇಲೆ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಅಲ್ಲೇ ಸಭೆ ನಡೆಸಲಾಯಿತು. ರಸ್ತೆಯನ್ನು ಪೂರ್ತಿಯಾಗಿ ಆಕ್ರಮಿಸಿಕೊಂಡ ಕಾರಣ ವಾಹನಗಳನ್ನು ಕಳುಹಿಸಲು ಪೊಲೀಸರು ಹರಸಾಹಸಪಡುವಂತಾಯಿತು.

ಬೈಪಾಸ್‌ಗೂ ವಿರೋಧ

ಹೊಸನಗರ ಪಟ್ಟಣ ಚಿಕ್ಕದಾಗಿದ್ದು ಬೈಪಾಸ್‌ ನಿರ್ಮಾಣವಾದರೆ ಹೊಸನಗರ ಅಭಿವೃದ್ಧಿ ಶೂನ್ಯವಾಗುತ್ತದೆ ಮತ್ತು ಸಣ್ಣಪುಟ್ಟ ವ್ಯಾಪಾರಸ್ಥರು ಬೀದಿಗೆ ಬರಬೇಕಾಗುತ್ತದೆ. ಯಾವುದೇ ಬೈಪಾಸ್‌ ನಿರ್ಮಿಸದೇ ಹಾಲಿ ಇರುವ ಪ್ರಮುಖ ರಸ್ತೆ ಮೇಲೆ ಹೆದ್ದಾರಿ ನಿರ್ಮಾಣಕ್ಕೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಸ್ಥಳಕ್ಕೆ ಬಂದು ಮನವಿ ಸ್ವೀಕಾರ

ಪ್ರತಿಭಟನೆಯಲ್ಲಿ ಕಾಗೋಡು ತಿಮ್ಮಪ್ಪ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ವಿ.ಎಸ್. ರಾಜೀವ್‌ ಪ್ರತಿಭಟನೆ ನಡೆಯುತ್ತಿದ್ದ ಮಾವಿನಕೊಪ್ಪ ಸರ್ಕಲ್‌ಗೆ ಆಗಮಿಸಿ ಮನವಿ ಸ್ವೀಕರಿಸಿ, ಸರ್ಕಾರಕ್ಕೆ ತಲುಪಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಡಾ| ರಾಜನಂದಿನಿ, ಕಲಗೋಡು ರತ್ನಾಕರ್‌, ಎಪಿಎಂಸಿ ಅಧ್ಯಕ್ಷ ದುಮ್ಮ ಅಶೋಕಗೌಡ, ಮಾಜಿ ಅಧ್ಯಕ್ಷರಾದ ಬಂಡಿ ರಾಮಚಂದ್ರ, ಈಶ್ವರಪ್ಪ ಗೌಡ, ಈಶ್ವರಪ್ಪ, ಬ್ಲಾಕ್‌ ಅಧ್ಯಕ್ಷ ಬಿ.ಜಿ. ನಾಗರಾಜ್‌, ಪ್ರಮುಖರಾದ ಬಿ.ಜಿ. ಚಂದ್ರಮೌಳಿ ಕೋಡೂರು, ಏರಗಿ ಉಮೇಶ್‌, ಕರುಣಾಕರ ಶೆಟ್ಟಿ, ಅಶ್ವಿ‌ನಕುಮಾರ್‌, ಚಿದಂಬರ್‌ ಮಾರುತಿಪುರ, ಸದಾಶಿವ ಶ್ರೇಷ್ಠಿ, ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು, ರೈತ ಪ್ರಮುಖರು ಇದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.