ಭ್ರಷ್ಟಾಚಾರ ಸುಳಿಯಲ್ಲಿ ಸಿಲುಕಿದ ಬಿಜೆಪಿ: ಡಿಕೆಶಿ
ಅಭ್ಯರ್ಥಿ ಸಿಗದಿದ್ದಕ್ಕೆ ಹೊರಟ್ಟಿ ಸೇರಿಸಿಕೊಂಡ ಬಿಜೆಪಿ
Team Udayavani, May 26, 2022, 12:51 PM IST
ಬೆಳಗಾವಿ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಸರ್ಕಾರಿ ಹುದ್ದೆ ಪಡೆಯಲು, ಅಭಿವೃದ್ಧಿ ಕೆಲಸಕ್ಕಾಗಿ ಸರ್ಕಾರಕ್ಕೆ ಕಮಿಷನ್ ನೀಡಬೇಕಾಗಿದೆ. ಹಣ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ. ಪಿಎಸ್‌ಐ-ಉಪನ್ಯಾಸಕರ ನೇಮಕಾತಿ ಹಗರಣ, 40 ಪರ್ಸೆಂಟ್ ಕಮಿಷನ್ ಸರ್ಕಾರದ ಅಭ್ಯರ್ಥಿಗಳಿಗೆ ವೋಟ್ ಕೊಡಬೇಕಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಪ್ರಶ್ನಿಸಿದರು.
ನಗರದ ಮರಾಠಾ ಮಂದಿರ ಸಭಾಭವನದಲ್ಲಿ ಬುಧವಾರ ವಾಯವ್ಯ ಶಿಕ್ಷಕರ ಕ್ಷೇತ್ರದ ಪ್ರಕಾಶ ಹುಕ್ಕೇರಿ, ವಾಯವ್ಯ ಪದವೀಧರ ಕ್ಷೇತ್ರದ ಸುನೀಲ ಸಂಕ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರ ಹಗರಣಗಳಲ್ಲಿ ಮುಳುಗಿದೆ ಎಂದು ವಾಗ್ಧಾಳಿ ನಡೆಸಿದರು.
ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ ದೇಶದ ನಾಲ್ಕು ಆಧಾರ ಸ್ತಂಭಗಳು. ಶಿಕ್ಷಣ ವ್ಯವಸ್ಥೆಯಲ್ಲಿಯೂ ಬಿಜೆಪಿ ಭ್ರಷ್ಟಾಚಾರ ನಡೆಸಿದೆ. ಶಿಕ್ಷಣ ಕ್ಷೇತ್ರ ಸದೃಢಗೊಳಿಸಲು ಸಜ್ಜನತೆ, ಪ್ರಾಮಾಣಿಕತೆಗೆ ಹೆಸರಾದ ಅಭ್ಯರ್ಥಿಗಳನ್ನು ನಿಮಗೆ ಕೊಟ್ಟಿದ್ದೇವೆ. ಅವರನ್ನು ಬಹುಮತದಿಂದ ಗೆಲ್ಲಿಸಿ, ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಧಾರವಾಡ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಇಲ್ಲದ್ದಕ್ಕೆ ಬಸವರಾಜ ಹೊಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ಕೊಟ್ಟಿದ್ದಾರೆ. ಹಾಸನ, ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಅವರ ಪಕ್ಷದ ನಾಯಕರು ಆಯ್ಕೆಯಾಗುವುದಿಲ್ಲ ಎಂಬ ಆತಂಕದಿಂದಲೇ ಹಾಲಿ ವಿಧಾನ ಪರಿಷತ್ ಸದಸ್ಯನಿಗೆ ಟಿಕೆಟ್ ನೀಡದೇ ಬೇರೆಯವರಿಗೆ ಕೊಡಲಾಗಿದೆ ಎಂದು ವ್ಯಂಗ್ಯವಾಡಿದರು.
ಶಿಕ್ಷಕರ ಕ್ಷೇತ್ರದಲ್ಲಿ ತಮ್ಮ ಸೇವೆ ಮಾಡಲು ಹುಕ್ಕೇರಿ ಕಣಕ್ಕಿಳಿದಿದ್ದಾರೆ. ಜತೆಗೆ ಯುವ ಉತ್ಸಾಹಿ ಸಂಕ ಅವರು ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದ ಅವರು, ರಾಜಕಾರಣದಲ್ಲಿ ಯಾವುದೂ ಅಸಾಧ್ಯವಲ್ಲ. ರಾಜಕಾರಣದಲ್ಲಿ ಎಲ್ಲವನ್ನೂ ಸಾ ಧಿಸುವ ಕಲೆ ಇರುತ್ತದೆ. ಸರ್ಕಾರ ಎಷ್ಟೇ ಪ್ರಬಲವಾಗಿದ್ದರೂ ಜನಾಭಿಪ್ರಾಯವೇ ಅಂತಿಮ. ಯಾರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕ ಮಾಡಲಾಗುವುದು ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಕೇವಲ ಅಭ್ಯರ್ಥಿಗಳು ಮಾತ್ರ ಚುನಾವಣೆಯಲ್ಲಿದ್ದಾರೆ ಎಂದು ಭಾವಿಸದೇ ಎಲ್ಲರೂ ಸಕ್ರಿಯರಾಗಿ ಕೆಲಸ ಮಾಡಬೇಕು. ಇನ್ನೂ ಕಾಲಾವಕಾಶವಿದೆ. ಶಿಕ್ಷಣ ಕ್ಷೇತ್ರ ಬದಲಾವಣೆ ಹಂತ ನಮ್ಮಿಂದಲೇ ಆರಂಭವಾಗಲಿ ಎಂದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಮಾತನಾಡಿ, ಎರಡು ಮತಕ್ಷೇತ್ರಗಳಲ್ಲಿ ಮೂರು ಜಿಲ್ಲೆಗಳಿವೆ. ಹಿರಿಯರು ಮತ್ತು ಯುವಕರಿಗೆ ತಲಾ ಒಂದು ಟಿಕೆಟ್ ನೀಡಲಾಗಿದೆ. ಇಬ್ಬರನ್ನೂ ಗೆಲ್ಲಿಸಿ ಕೊಡುವ ಹೊಣೆ ಕಾಂಗ್ರೆಸ್ ಕಾರ್ಯಕರ್ತರದ್ದಾಗಿದೆ. ಭ್ರಷ್ಟಾಚಾರ ಬಗ್ಗೆ ಟೀಕಿಸಲು ಈಗ ಸಮಯವಿಲ್ಲ. ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆ ಮತದಾರರಿಗೆ ತಲುಪಿಸಿದರೆ ಗೆಲುವು ನಮ್ಮದೇ ಎಂದರು.
ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾತನಾಡಿ, ಶಿಕ್ಷಕರ ಕ್ಷೇತ್ರ ಅತ್ಯಂತ ಸೂಕ್ಷ್ಮವಾದ, ಬುದ್ಧಿವಂತಿಕೆಯ ಚುನಾವಣೆ. ಬುದ್ಧಿವಂತರಿಗೆ ಬುದ್ಧಿ ಕಲಿಸಿ ಕೊಡುವಷ್ಟು ದೊಡ್ಡವರು ನಾವಲ್ಲ. ಕಾಂಗ್ರೆಸ್ 70 ವರ್ಷದ ಇತಿಹಾಸದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ದೇಶದಲ್ಲಿ ಶಿಕ್ಷಣ ಕ್ರಾಂತಿ ಮಾಡಿದೆ. ದೇಶದ ಈ ಹಿಂದಿನ ಶಿಕ್ಷಣ ನೀತಿ ಹಾಗೂ ಶಿಕ್ಷಣ ಕ್ಷೇತ್ರದಿಂದ ಭಾರತ ಇಷ್ಟೊಂದು ಸಾಧನೆ ಮಾಡಿದೆ ಎಂದರು.
ವಾಯವ್ಯ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮಾತನಾಡಿ, ಕೆಪಿಸಿಸಿ ಹಾಗೂ ಮೂರು ಜಿಲ್ಲೆಯ ಎಲ್ಲ ಮುಖಂಡರು ಸೇರಿ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ನೀವೆಲ್ಲ ಗೆಲ್ಲಿಸಿ, ತಮ್ಮ ಸೇವೆಗೆ ಅವಕಾಶ ನೀಡಬೇಕು. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನೀಲ ಸಂಕ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಸಚಿವ ವಿನಯ ಕುಲಕರ್ಣಿ, ಮಾಜಿ ಸಚಿವರಾದ ಎ.ಬಿ. ಪಾಟೀಲ, ಡಿ.ಬಿ. ಇನಾಮದಾರ, ಎಚ್.ವೈ. ಮೇಟಿ, ಜೆ.ಟಿ. ಪಾಟೀಲ, ಉಮಾಶ್ರೀ, ಮಾಜಿ ಶಾಸಕರಾದ ರಮೇಶ ಕುಡಚಿ, ಕಾಕಾಸಾಹೇಬ ಪಾಟೀಲ, ಫಿರೋಜ ಸೇಠ, ಮುಖಂಡರಾದ ರಾಜು ಸೇಠ, ಲಕ್ಷ್ಮಣರಾವ ಚಿಂಗಳೆ, ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಉಮೇಶ ಬಾಳಿ ಸೇರಿದಂತೆ ಇತರರು ಇದ್ದರು.
ಪ್ರಕಾಶ ಹುಕ್ಕೇರಿ ಹಿರಿಯ ನಾಯಕರು. ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಜಿಲ್ಲಾ ಪಂಚಾಯಿತಿಯಿಂದ ಹಿಡಿದು ಸಂಸತ್‌ವರೆಗಿನ ಎಲ್ಲ ಹಂತಗಳಲ್ಲೂ ಕ್ರಿಯಾಶೀಲವಾಗಿ ಪಾಲ್ಗೊಂಡು ಅಭಿವೃದ್ಧಿ ಸಾಧಿಸಿದ ಅನುಭವ ಇದೆ. ಚಿಕ್ಕೋಡಿ ಕ್ಷೇತ್ರವನ್ನು ಮಾದರಿ ಮಾಡಿರುವ ಹೆಗ್ಗಳಿಕೆ ಹುಕ್ಕೇರಿಯವರದ್ದು. -ಡಿ.ಕೆ. ಶಿವಕುಮಾರ, ಅಧ್ಯಕ್ಷರು, ಕೆಪಿಸಿಸಿ
ಪ್ರಕಾಶ ಹುಕ್ಕೇರಿ ಮುತ್ಸದ್ಧಿ, ಅನುಭವಿ ರಾಜಕಾರಣಿ. ಬೆಳಗಾವಿಯಲ್ಲಿ ಬಿಮ್ಸ್ ಆಗಲು ಹುಕ್ಕೇರಿ ಕಾರಣ. ಇಳಿ ವಯಸ್ಸಿನಲ್ಲೂ ಬತ್ತದ ಉತ್ಸಾಹ ಇದೆ. 25 ವರ್ಷದ ಯುವಕನ ತರಹ ಆಸಕ್ತಿ, ಉತ್ಸಾಹ ಇದೆ. ಶಿಕ್ಷಕರ ಕಲ್ಯಾಣ ಹಾಗೂ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶ್ರಮಿಸಲಿದ್ದಾರೆ. -ಲಕ್ಷ್ಮೀ ಹೆಬ್ಟಾಳಕರ, ಶಾಸಕಿ, ಬೆಳಗಾವಿ ಗ್ರಾಮೀಣ
ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು. ಎರಡೂ ಕ್ಷೇತ್ರ ಗೆಲ್ಲಲು ಸಕ್ರಿಯರಾಗಿ ದುಡಿಯಬೇಕು. –ಸತೀಶ ಜಾರಕಿಹೊಳಿ, ಕಾರ್ಯಾಧ್ಯಕ್ಷರು, ಕೆಪಿಸಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.