ಪ.ಬಂಗಾಲದ ವಿವಿಗಳಿಗಿನ್ನು ಸಿಎಂ ಕುಲಪತಿ
Team Udayavani, May 27, 2022, 6:45 AM IST
ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರನ್ನು ಕುಲಪತಿಯಾಗಿಸುವ ಬದಲು ಮುಖ್ಯಮಂತ್ರಿಯನ್ನೇ ಕುಲಪತಿಯಾಗಿ ನೇಮಿಸುವ ಪ್ರಸ್ತಾವನೆಯನ್ನು ಮಮತಾ ಬ್ಯಾನರ್ಜಿ ಅವರ ಸಂಪುಟ ಮಾಡಿದೆ.
ಗುರುವಾರ ಕೋಲ್ಕತದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಅದರಲ್ಲಿ ಈ ಪ್ರಸ್ತಾವನೆ ಮಾಡಲಾಗಿದೆ. “ಮುಖ್ಯಮಂತ್ರಿಯನ್ನೇ ವಿಶ್ವವಿದ್ಯಾಲಯಗಳ ಕುಲಪತಿಗಳಾಗಿಸುವ ಪ್ರಸ್ತಾವನೆಯನ್ನು ಶೀಘ್ರವೇ ವಿಧಾನಸಭೆಯಲ್ಲಿ ಮಸೂದೆ ರೂಪದಲ್ಲಿ ಮಂಡಿಸಲಾಗುವುದು’ ಎಂದು ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ತಿಳಿಸಿದ್ದಾರೆ. ಈ ಬಗ್ಗೆ ರಾಜ್ಯಪಾಲರಾಗಿರುವ ಜಗದೀಪ್ ಧಂಖರ್ ಅವರು ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಪಶ್ಚಿಮ ಬಂಗಾಳದಲ್ಲಿ ಒಟ್ಟು 17 ವಿಶ್ವವಿದ್ಯಾಲಯಗಳು ರಾಜ್ಯ ಸರ್ಕಾರದ ಅಧೀನದಲ್ಲಿವೆ.
ಈ ಹಿಂದೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರಾಗಿರುವ ಕೆ.ಪೊನ್ಮುಡಿ ಅವರು ಇಂಥದ್ದೇ ಪ್ರಸ್ತಾಪ ಮಾಡಿದ್ದರು. “ರಾಜ್ಯಪಾಲರು ನೇಮಕವಾದವರು. ಆದರೆ ಸಿಎಂ ಆಯ್ಕೆಯಾದವರು. ಹಾಗಾಗಿ ಕುಲಪತಿ ಸ್ಥಾನ ಮುಖ್ಯಮಂತ್ರಿಗೇ ಸೇರಬೇಕು’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.