ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಏನಿದೆ?

Team Udayavani, May 27, 2022, 7:15 AM IST

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಏನಿದೆ?

ಕುಂದಾಪುರ: ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಕಟ್ಟೆ ಗೋಪಾಲಕೃಷ್ಣ ರಾವ್‌ (ಕಟ್ಟೆ ಭೋಜಣ್ಣ) (79) ಅವರು ಹಂಗಳೂರು ಗ್ರಾಮದ ಅಂಕದಕಟ್ಟೆಯಲ್ಲಿರುವ ಉದ್ಯಮಿ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರ ಮನೆಯ ಸಿಟೌಟ್‌ನಲ್ಲಿ ಪಿಸ್ತೂಲಿನಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗ್ಗೆ 6.20ರ ಸುಮಾರಿಗೆ ಸಂಭವಿಸಿದೆ.

ಗೋಲ್ಡ್‌ ಸ್ಕೀಂ ಮುಳುವಾಯಿತೇ?:

ಕುಂದಾಪುರದಲ್ಲಿ ಆರಂಭವಾದ ಗೋಲ್ಡ್‌ ಜುವೆಲ್ಲರಿಯಲ್ಲಿ ಗಣೇಶ್‌ ಶೆಟ್ಟಿ ತಟಸ್ಥ ಪಾಲುದಾರ (ಸ್ಲಿàಪಿಂಗ್‌ ಪಾರ್ಟನರ್‌) ರಾಗಿದ್ದು, ಈ ಗೋಲ್ಡ್‌ ಜುವೆಲ್ಲರಿಯ ಪಾಲುದಾರರು ಆಫ್ರಿಕಾದ ಚಿನ್ನದ ಗಣಿಯಲ್ಲಿ ಹಣ ವಿನಿಯೋಗಿಸಿದ್ದರು. ಆರಂಭದಲ್ಲಿ ಇದು ಉತ್ತಮ ಲಾಭ ತಂದಿದ್ದು, ಚಿನ್ನದ ಆಸೆಗೆ ಬಿದ್ದ ಇದರ ಪಾಲುದಾರರು ಇಲ್ಲಿನ ಅಷ್ಟು ಹಣವನ್ನು ಅಲ್ಲಿಗೆ ಸುರಿದಿದ್ದರು. ಆದರೆ ಬರು-ಬರುತ್ತಾ ಆ ಬಳಿಕ ನಷ್ಟದ ಹಾದಿಯಲ್ಲಿ ಸಾಗಿದೆ. ಅದರ ನಷ್ಟವನ್ನು ಭರಿಸುವ ಉದ್ದೇಶದಿಂದ ಗೋಲ್ಡ್‌ ಸ್ಕಿಂ ಹೆಸರಲ್ಲಿ ಗ್ರಾಹಕರಿಂದ, ಸಾರ್ವಜನಿಕರಿಂದ ನಗದು, ಒಡವೆಗಳನ್ನು ಆಕರ್ಷಕ ಸ್ಕೀಂ ಹೆಸರಲ್ಲಿ ಸಂಗ್ರಹಿಸಿ, ಆ ಮೂಲಕ ಕೋಟ್ಯಾಂತರ ರೂ. ವಂಚಿಸಿದ್ದರು. ಇದರಲ್ಲಿ ಗೋಪಾಲಕೃಷ್ಣ ಶೆಟ್ಟಿ ಅವರು ಸಹ ಕೋಟ್ಯಾಂತರ ರೂ. ಹಣ ಹಾಗೂ ಚಿನ್ನವನ್ನು ವಿನಿಯೋಗಿಸಿದ್ದರು. ಕಳೆದ ವರ್ಷದ ಮಾರ್ಚ್‌ನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಈ ನಡುವೆ ಗಣೇಶ್‌ ಶೆಟ್ಟಿ ಅವರಿಗೆ ಸೇರಿದ ಬೆಲೆಬಾಳುವ ಸ್ಥಿರಾಸ್ತಿಯಿದ್ದು, ಕೆಲವರ ಮಧ್ಯಸ್ಥಿಕೆಯಿಂದ ಗೋಪಾಲಕೃಷ್ಣ ಅವರಿಗೆ ಪರಭಾರೆ ಮಾಡಿಕೊಳ್ಳುವ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಇದರಿಂದ ಕೊಂಚ ನೆಮ್ಮದಿಯಿಂದ ಇದ್ದು, ಈ ನಡುವೆ  ಸ್ತಿರಾಸ್ತಿ ಏಲಂ ಆಗುವುದೆಂಬ ಮಾಹಿತಿ ಸಿಕ್ಕಿದ ಕ್ಷಣದಿಂದ ಗೋಪಾಲಕೃಷ್ಣ ಅವರು ನೆಮ್ಮದಿ ಕೆಡಿಸಿಕೊಂಡಿದ್ದರು ಎನ್ನಲಾಗಿದೆ. ಈ ನಡುವೆ ಅನೇಕ ಬಾರಿ ಗಣೇಶ್‌ ಶೆಟ್ಟರನ್ನು ಸಂಪರ್ಕಿಸಲು ಯತ್ನಿಸಿದ್ದರೂ, ನಿರ್ಲಕ್ಷé ಮಾಡಿದ್ದು ಇವರನ್ನು ಮತ್ತಷ್ಟು ಚಿಂತೆಗೀಡು ಮಾಡುವಂತೆ ಮಾಡಿತು ಎನ್ನಲಾಗಿದ್ದು, ಈ ಬಗ್ಗೆ ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಡೆತ್‌ನೋಟ್‌ನಲ್ಲಿ ಏನಿದೆ? :

ಗೋಪಾಲಕೃಷ್ಣ ಅವರು ತನ್ನ ಕಚೇರಿಗೆ ಸಂಬಂಧಿಸಿದ ಲೆಟರ್‌ ಹೆಡ್‌ನ‌ಲ್ಲಿ ಡೆತ್‌ ನೋಟ್‌ ಬರೆದಿಟ್ಟಿದ್ದು, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಅದರಲ್ಲಿ ಉಲ್ಲೇಖೀಸಿದ್ದಾರೆ. ಡೆತ್‌ನೋಟ್‌ನಲ್ಲಿ ಮೊಳಹಳ್ಳಿ ಗಣೇಶ್‌ ಶೆಟ್ಟಿ, ಇಸ್ಮಾಯಿಲ್‌ ಹಂಗಳೂರು ಹೆಸರು ಪ್ರಸ್ತಾವ ಮಾಡಿದ್ದು, ಇವರಿಬ್ಬರು ಗೋಲ್ಡ್‌ ಜುವೆಲ್ಲರಿ ಹೆಸರಿನಲ್ಲಿ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ 2012 ಮಾ. 31ರಂದು 3.34 ಕೋ.ರೂ., 5 ಕೆ.ಜಿ ಚಿನ್ನ ಪಡೆದುಕೊಂಡಿದ್ದರು. ಆ ಬಳಿಕ ನಗ-ನಗದು, ಅದಕ್ಕೆ ಸಲ್ಲಬೇಕಾದ ಬಡ್ಡಿಯನ್ನೂ ವಾಪಸು ಮರಳಿಸಿರಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಜನಪ್ರತಿನಿಧಿಗಳ ನೇತೃತ್ವದಲ್ಲಿ ಮಧ್ಯಸ್ಥಿಕೆ ನಡೆದು, ವಾಯಿದೆ ಪಡೆದಿದ್ದರು. ಈವರೆಗೆ 9 ಕೋ.ರೂ. ಹಣ, ಚಿನ್ನ ವಾಪಸ್‌ ನೀಡದೆ ಮೋಸ ಮಾಡಿದ್ದು, ಗಣೇಶ್‌ ಶೆಟ್ಟಿ ಮೊಳಹಳ್ಳಿ ಮನೆಗೆ ತಿರುಗಿ- ತಿರುಗಿ ಸಾಕಾಯ್ತು. ಅವರ ಮನೆಯಲ್ಲಿಯೇ ನನ್ನ ಪಿಸ್ತೂಲ್‌ನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಗಣೇಶ್‌ ಶೆಟ್ಟಿ ಮೊಳಹಳ್ಳಿ, ಇಸ್ಮಾಯಿಲ್‌ ಅವರಿಂದ ಹಣ ವಸೂಲಿ ಮಾಡಿ, ಮನೆಯವರಿಗೆ ಕೊಡಿಸಿ ಎನ್ನುವುದಾಗಿ ಕಟ್ಟೆ ಗೋಪಾಲಕೃಷ್ಣ ಅವರು ಡೆತ್‌ ನೋಟ್‌ ಬರೆದಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Thief

Kundapura: ಸರಕಾರಿ ಕಾಲೇಜಿನ ಎನ್‌ವಿಆರ್‌ ಕೆಮರಾ ಕಳವು

Koteshwara: ಸಂಭ್ರಮದ ಕೊಡಿಹಬ್ಬ…

Koteshwara: ಸಂಭ್ರಮದ ಕೊಡಿಹಬ್ಬ…

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.