ಗಮನ ಸೆಳೆದ ಮಾವು ಪ್ರದರ್ಶನ-ಮಾರಾಟ ಮೇಳ
Team Udayavani, May 27, 2022, 12:10 PM IST
ಬೆಳಗಾವಿ: ವೈಜ್ಞಾನಿಕ ರೀತಿಯಲ್ಲಿ ಕಾಯಿಗಳನ್ನು ಕಟಾವು ಮಾಡಿ ನೈಸರ್ಗಿಕವಾಗಿ ಮಾಗಿಸಿದ ಹಾಗೂ ಕ್ಯಾಲ್ಸಿಯಂ, ಕಾರ್ಬೈಡ್ ಮುಕ್ತ ಹಣ್ಣುಗಳನ್ನು ಯೋಗ್ಯ ದರದಲ್ಲಿ ನೆರವಾಗಿ ರೈತರಿಂದಲೇ ಗ್ರಾಹಕರಿಗೆ ದೊರಕಿಸಲು ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್‌ನಲ್ಲಿ ಗುರುವಾರದಿಂದ ಮೇ 29ರವರೆಗೆ ನಡೆಯುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಮೇಳದಲ್ಲಿ ಹಲವು ಬಗೆಯ ಮಾವಿನ ಹಣ್ಣುಗಳು ಮಾರಾಟಕ್ಕಿವೆ. ಜಿಲ್ಲೆಯ ಎಲ್ಲ ಗ್ರಾಹಕರು ಯೋಗ್ಯ ದರದಲ್ಲಿ ಮಾವು ಖರೀದಿಸಿ ರುಚಿಕರ ಮಾವು ಸವಿಯಬಹುದು ಎಂದರು.
ಮಾವು ಪ್ರದರ್ಶನ ಕೋಣೆ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಇಂತಹ ಮೇಳಗಳು ರೈತರಲ್ಲಿ ಆತ್ಮ ವಿಶ್ವಾಸ ತುಂಬುತ್ತವೆ. ಬರೀ ಮಾವು ಪ್ರದರ್ಶನ ಅಷ್ಟೇ ಅಲ್ಲದೇ ಪ್ರತಿ ಎರಡು ತಿಂಗಳಿಗೊಮ್ಮೆ ರೈತರು ಬೆಳೆದ ವಿವಿಧ ತೋಟಗಾರಿಕಾ ಬೆಳೆಗಳ ಮೇಳವನ್ನೂ ಆಯೋಜಿಸಿ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ. ಬೆಳಗಾವಿ, ಖಾನಾಪುರ, ಧಾರವಾಡ, ಕಿತ್ತೂರ ಸೇರಿದಂತೆ ವಿವಿಧ ತಾಲೂಕುಗಳಿಂದ ಮಾವು ಮಾರಾಟಕ್ಕೆ ಬಂದಿದ್ದ ರೈತರು ತಾವು ಬೆಳೆದ ಮಾವಿನ ಬಗ್ಗೆ ವಿವರಿಸಿದರು.
ತೋತಾಪುರಿ, ಕೇಸರ, ಮಲಗೋವಾ, ದೂಧಪೇಡಾ, ಕೊಂಕಣ ರುಚಿ, ಆಪೂಸ್, ರಸಪೂರಿ, ದಸೇರಿ, ಬೆನೆಶಾನ, ಸಿಂಧುರಿ, ಮಲ್ಲಿಕಾ, ಕೊಬ್ರಿಕಾಯಿ, ಕರಿ ಇಶಾಡಿ, ಯಾಕೃತಿ ಸೇರಿದಂತೆ ನೂರಕ್ಕೂ ಹೆಚ್ಚು ವಿವಿಧ ತಳಿಯ ರುಚಿಕರ ಮಾವಿನ ಹಣ್ಣುಗಳು ಮತ್ತು ಹಲವು ಬಗೆಯ ಉಪ್ಪಿನಕಾಯಿ ಮಾವಿನಕಾಯಿಗಳೂ ಪ್ರದರ್ಶನದಲ್ಲಿ ಗ್ರಾಹಕರ ಗಮನ ಸೆಳೆದವು.
ಈ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕರಾದ ಮಹಾಂತೇಶ ಮುರಗೋಡ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾದ ಸೋಮಶೇಖರ ಹುಳ್ಳೊಳ್ಳಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.