ಜನರ ಆಸಕ್ತಿ ಅನುಸಾರ ತರಬೇತಿ ನೀಡಿ

ಬಂಡವಾಳ ಸಮಸ್ಯೆ ಎದುರಾದರೆ ಸಾಲ ಸೌಲಭ್ಯ ಕಲ್ಪಿಸಿ

Team Udayavani, May 27, 2022, 4:44 PM IST

23

ಕೊಪ್ಪಳ: ಜಿಲ್ಲೆ ಅವಶ್ಯಕತೆ ಹಾಗೂ ಸಾರ್ವಜನಿಕರ ಆಸಕ್ತಿಗೆ ಅನುಗುಣವಾಗಿ ತರಬೇತಿ ವಿಷಯಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಿ ಎಂದು ಜಿಪಂ ಸಿಇಒ ಬಿ ಫೌಜಿಯಾ ತರನ್ನುಮ್‌ ಆರ್‌ಸೆಟಿ ನಿರ್ದೇಶಕರಿಗೆ ಸೂಚಿಸಿದರು.

ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ಕೊಪ್ಪಳ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವರ್ಷದ 365 ದಿನವೂ ಸಾರ್ವಜನಿಕರಿಗೆ ತರಬೇತಿ ನೀಡಬೇಕು ಎಂಬ ನಿಯಮವಿದೆ. ಅದರಂತೆ ಹೈನುಗಾರಿಕೆ, ಕುರಿ ಸಾಗಾಣಿಕೆ, ಜೇನು ಕೃಷಿ, ಅಣಬೆ ಕೃಷಿ, ಟೈಲರಿಂಗ್‌, ಉಪ್ಪಿನಕಾಯಿ ತಯಾರಿಕೆ, ಮೊಬೈಲ್‌ ರಿಪೇರಿ ಸೇರಿದಂತೆ ಒಟ್ಟು 65 ವಿಷಯಗಳಲ್ಲಿ ಈಗಾಗಲೇ ತರಬೇತಿ ನೀಡಲಾಗುತ್ತಿದೆ. ಇದರ ಹೊರತಾಗಿ ಜಿಲ್ಲೆಯ ಜನರ ಬೇಡಿಕೆ, ಆಸಕ್ತಿ ಏನು ಎಂಬುದನ್ನು ಅರಿತು ಅದಕ್ಕೆ ಅನುಗುಣವಾಗಿ ತರಬೇತಿ ವಿಷಯ ಆಯ್ಕೆ ಮಾಡಿಕೊಳ್ಳಿ ಎಂದರು.

ಕೌಶಲ್ಯಾಭಿವೃದ್ಧಿ ಇಲಾಖೆಗೆ ಅನೇಕ ಅಭ್ಯರ್ಥಿಗಳು ತರಬೇತಿ ಮಾಹಿತಿಗೆ ಸಂಪರ್ಕಿಸುತ್ತಾರೆ. ಆರ್‌ಸೆಟಿ ನೀಡುವ ಉಚಿತ ತರಬೇತಿ ನೀಡಿ ಹಾಗೂ ನಿಮ್ಮನ್ನು ಸಂಪರ್ಕಿಸುವ ಅಭ್ಯರ್ಥಿಗಳ ಆಸಕ್ತಿ ಅರಿತು ಅದರ ಅನುಸಾರ ಆರ್‌ಸೆಟಿ ಸಂಸ್ಥೆಯಲ್ಲಿ ತರಬೇತಿ ನೀಡಲು ವ್ಯವಸ್ಥೆ ಕಲ್ಪಿಸಿ. ಅದರಂತೆ ಸಂಸ್ಥೆಯಲ್ಲಿ ತರಬೇತಿ ಪಡೆದ ಬಹಳಷ್ಟು ಅಭ್ಯರ್ಥಿಗಳು ಸ್ವಯಂ ಉದ್ಯೋಗ ಮಾಡುತ್ತಿರುವ ಕುರಿತು ಸಂಸ್ಥೆಗೆ ಮಾಹಿತಿ ನೀಡುತ್ತಾರೆ. ಅಂತಹವರನ್ನು ಸಂಪರ್ಕಿಸಿ ಸಂಸ್ಥೆಯಿಂದ ಇನ್ನೂ ಹೆಚ್ಚಿನ ಸಹಕಾರದ ಅಗತ್ಯವಿದ್ದರೆ ಮಾಡಿಕೊಡಿ. ಮತ್ತು ತರಬೇತಿಯನ್ನು ಎಷ್ಟು ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಂಡಿದ್ದಾರೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಿ ಎಂದರು.

ಸ್ವಯಂ ಉದ್ಯೋಗ ಕೈಗೊಳ್ಳಲು ಅಭ್ಯರ್ಥಿಗಳಿಗೆ ಬಂಡವಾಳದ ಸಮಸ್ಯೆ ಎದುರಾಗಬಹುದು. ಅಂತಹವರಿಗೆ ಬ್ಯಾಂಕಿನಿಂದ ಸುಲಭ ಸಾಲ ಸೌಲಭ್ಯ ದೊರೆಯಬೇಕು. ಈ ಬಗ್ಗೆ ಲೀಡ್‌ ಬ್ಯಾಂಕ್‌ ಅಧಿಕಾರಿಗಳು ಎಲ್ಲ ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಆರ್‌ಸೆಟಿ ಸಂಸ್ಥೆಯಿಂದ ಕಳೆದ ಮೂರು ವರ್ಷಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿಯೇ ಒಂದು ದಿನದ ಬ್ಯಾಂಕ್‌ ಸಾಲ ಮೇಳ ಆಯೋಜಿಸಿ. ಈ ಮೇಳದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕ್ರಮವಹಿಸಿ. ಇದರಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದವರ ಮಾಹಿತಿ ಆಧರಿಸಿ, ಅಗತ್ಯವಿದ್ದರೆ ಬ್ಯಾಂಕ್‌ಗಳಿಗೆ ಸಾಲ ಸೌಲಭ್ಯ ಒದಗಿಸಲು ಜಿಲ್ಲಾಡಳಿತದಿಂದ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು.

ಆರ್‌ಸೆಟಿ ಸಂಸ್ಥೆಗೆ ವ್ಯವಸ್ಥಿತ ಕಟ್ಟಡದ ಅಗತ್ಯವಿದೆ. ಆದ್ದರಿಂದ ತರಬೇತಿ ಸಂಸ್ಥೆಯ ಕಟ್ಟಡವನ್ನು ನಿರ್ಮಿಸಲು ಕಂದಾಯ ಇಲಾಖೆ ಸಂಪರ್ಕಿಸಿ ಒಂದು ವಾರದೊಳಗೆ ಕನಿಷ್ಟ ಒಂದು ಎಕರೆ ಪ್ರದೇಶ ಗುರುತಿಸಿ. ಈ ಜಾಗದಲ್ಲಿ ತರಬೇತಿಗೆ ಪೂರಕವಾಗುವ ಎಲ್ಲ ಸೌಲಭ್ಯಗಳಿರುವಂತೆ ವ್ಯವಸ್ಥಿತ ನಕ್ಷೆ ತಯಾರಿಸಿ, ಗುಣಮಟ್ಟದ ಕಟ್ಟಡ ನಿರ್ಮಿಸಲು ಕ್ರಮಕೈಗೊಳ್ಳಿ. ಸಂಸ್ಥೆಯಿಂದ ತರಬೇತಿ ಪಡೆದು ಜೀವನದಲ್ಲಿ ಯಶಸ್ವಿಯಾದ ಸಾಧಕರನ್ನು ಗುರುತಿಸಿ ಅವರ ಸಾಧನೆಯ ಬಗ್ಗೆ ಎನ್‌ಐಸಿ ಅವರ ಸಹಕಾರದೊಂದಿಗೆ ಜಿಲ್ಲಾಡಳಿತದ ವೆಬ್‌ಸೈಟ್‌ ನಲ್ಲಿ ಪ್ರಕಟಿಸಿ. ಇದರಿಂದ ಬೇರೆಯವರಿಗೆ ಸ್ಫೂರ್ತಿ ದೊರಕುತ್ತದೆ ಹಾಗೂ ತರಬೇತಿ ಸಂಸ್ಥೆಯ ಬಗ್ಗೆ ವಿಶ್ವಾಸವೂ ಹೆಚ್ಚಾಗುತ್ತದೆ ಎಂದರು.

ಆರ್‌ಸೆಟಿ ನಿರ್ದೇಶಕ ಅಯ್ಯಪ್ಪ ಮಾಲಗತ್ತಿ, ಜಂಟಿ ಕೈಗಾರಿಕಾ ನಿರ್ದೇಶಕ ಪ್ರಶಾಂತ ಬಾರಿಗಿಡದ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ, ಲೀಡ್‌ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಸಿ.ಟಿ. ಹಂಸನಂದ, ಕೈಮಗ್ಗ ಮತ್ತು ಜವಳಿ ಇಲಾಖೆಯ ಭಾರತಿ ಬಿದ್ರಿಮಠ, ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಚಾರ್ಯ ಜಿ.ಕೆ. ವಿಶ್ವನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.