ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ
Team Udayavani, May 28, 2022, 9:32 AM IST
ಬೆಂಗಳೂರು: ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳಿಗೆ ದಾಳಿಯ ಬೆದರಿಕೆಯೊಡ್ಡಿ ಹಣ ಸುಲಿಗೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ ಚಿಕ್ಕೋಡಿ ತಾಲೂಕಿನ ಮುರಿಗೆಪ್ಪಾ ನಿಂಗಪ್ಪ ಕುಂಬಾರ (56) ಮತ್ತು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಜನಿಕಾಂತ್ (46) ಬಂಧಿತರು. ಆರೋಪಿ ಗಳಿಂದ ಹತ್ತಾರು ಸಿಮ್‌ಕಾರ್ಡ್‌ಗಳು ಮತ್ತು ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿಗಳು ಇತ್ತೀಚೆಗೆ ಡಿವೈಎಸ್ಪಿ ಹೆಸರಿನಲ್ಲಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಂ.ಧನಂಜಯ್ ಹಾಗೂ ಇಬ್ಬರು ಸಹೋದ್ಯೋಗಿಗಳಿಗೆ ಕರೆ ಮಾಡಿ, ರಾಜ್ಯದ ಕೆಲ ಜಿಲ್ಲೆಗಳ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಮ್ಮ ಮೇಲೆ ದೂರು ನೀಡಿದ್ದಾರೆ. ಈಗಾಗಲೇ ಪ್ರಕರಣ ದಾಖಲಿಸಿಕೊಂಡು, ಸಮೀಕ್ಷೆ ಮಾಡುತ್ತಿದ್ದೇವೆ. ಸದ್ಯದಲ್ಲೇ ನಿಮ್ಮ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಿದ್ದೇವೆ’ ಎಂದು ಬೆದರಿಸಿದ್ದರು.
ಅಲ್ಲದೆ, “ನಿಮ್ಮ ಮೇಲೆ ದಾಳಿ ನಡೆಯದಂತೆ ನೋಡಿಕೊಳ್ಳುತ್ತೇನೆ. ಸದ್ಯ ನಮ್ಮ ತನಿಖಾಧಿಕಾರಿ ಹಾಗೂ ಇತರರು, ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಅದಕ್ಕೆ ಹಣದ ವ್ಯವಸ್ಥೆ ಮಾಡಿಸಿ’ ಎಂದು ಬೇಡಿಕೆ ಇಟ್ಟಿದ್ದರು. ನಂತರ ಶಿಕ್ಷಣ ಸಚಿವರ ಆಪ್ತ ಸಹಾಯಕರು ತಮ್ಮ ಎಡಿಜಿಪಿ ಜತೆ ಮಾತನಾಡುತ್ತಿದ್ದಾರೆ. ಸದ್ಯಕ್ಕೆ ಕಚೇರಿಗೆ ಬರ ಬೇಡಿ ಎಂದೆಲ್ಲ ಹೆದರಿಸಿದ್ದರು. ಈ ಸಂಬಂಧ ಧನಂಜಯ್ ವಿಧಾನಸೌಧ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಎಸಿಬಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಇದನ್ನೂ ಓದಿ:ರಾಜ್ಯದ 8 ರಾಜಕೀಯ ಪಕ್ಷಗಳಿಗೆ ಗೇಟ್‌ಪಾಸ್: ಚುನಾವಣ ಆಯೋಗ
ಮಾಜಿ ಪೊಲೀಸ್ ಸಿಬ್ಬಂದಿ
ಆರೋಪಿಗಳ ಪೈಕಿ ರಂಜನಿಕಾಂತ್ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಕರ್ತವ್ಯಲೋಪದ ಆರೋಪದ ಮೇಲೆ ವಜಾಗೊಂಡಿದ್ದಾನೆ. ನಂತರ ಹಣದ ಆಗತ್ಯತೆಗಾಗಿ ಮುರಿಗೆಪ್ಪಾ ಜತೆ ಸೇರಿಕೊಂಡು ಈ ರೀತಿಯ ಕೃತ್ಯ ನಡೆಸುತ್ತಿದ್ದಾನೆ. ಮುರೆಗೆಪ್ಪಾನ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ಇದೇ ರೀತಿಯ 40 ಪ್ರಕರಣಗಳು ದಾಖಲಾಗಿವೆ. ರಜನಿಕಾಂತ್ ವಿರುದ್ಧ 6 ಪ್ರಕರಣಗಳು ದಾಖಲಾಗಿವೆ. ಕೆಲ ಪ್ರಕರಣಗಳು ತನಿಖೆಯಲ್ಲಿದ್ದು, ಕೆಲ ಪ್ರಕರಣಗಳಲ್ಲಿ ಕೋರ್ಟ್ ವಾರೆಂಟ್ ಹೊರಡಿಸಿದೆ. ಇನ್ನು ಕೆಲ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿ ಬಂದಿದ್ದಾರೆ.
ವಿವಿಧ ಖಾತೆಗೆ ಹಣ ಜಮೆ
ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಫೋನ್ ಕರೆ ಮಾಡುವ ಆರೋ ಪಿಗಳು, ಹೆದರಿದ ಸರ್ಕಾರಿ ಅಧಿಕಾರಿಗಳಿಂದ ತಮಗೆ ಪರಿಚಯವಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಬ್ಯಾಂಕ್ ಖಾತೆ ಮಾಡಿ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದರು ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.