ತಿಂಗಳಲ್ಲಿ ನಾಲ್ಕು ದಿನ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ: ಸಚಿವ ಅಶೋಕ
Team Udayavani, May 28, 2022, 2:22 PM IST
ಬೀದರ್: ಕಂದಾಯ ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ತರುವ ಪ್ರಯತ್ನ ಮಾಡಲಾಗುತ್ತಿದ್ದು, ಇನ್ಮುಂದೆ ಜಿಲ್ಲಾಧಿಕಾರಿಗಳು ತಿಂಗಳಲ್ಲಿ ನಾಲ್ಕು ಬಾರಿ ತಮ್ಮ ಜಿಲ್ಲೆಯ ತಾಲೂಕು ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ ಜನರ ಅಹವಾಲು ಅಲಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಜಿಲ್ಲೆಯ ವಡಗಾಂವ್ ಗ್ರಾಮದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿ ನಡೆ – ಹಳಿ ಕಡೆ ಕಾರ್ಯಕ್ರಮದ ಮೂಲಕ, ಮನೆ ಬಾಗಿಲಿಗೆ ಆಡಳಿತ ಯಂತ್ರ ವ್ಯವಸ್ಥೆಯಿಂದ ಜನರ ಅಲೆದಾಟ ಮತ್ತು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬಿದ್ದಿದೆ. ಅಧಿಕಾರಿ ವರ್ಗ ಜನ ಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾಗುವ ನಿಟ್ಟಿನಲ್ಲಿ ಪ್ರತಿ ವಾರ ಒಂದು ತಹಶೀಲ್ದಾರ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ಕೊಟ್ಟು, ಜನರ ಸಮಸ್ಯೆಗಳನ್ನು ಆಲಿಸುವರು ಮತ್ತು ಕುಂದು ಕೊರತೆಗಳಿಗೆ ಸ್ಪಂದಿಸುವರು. ಈ ಸಂಬಂಧ ಮೂರು ದಿನಗಳಲ್ಲಿ ಅದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ವಡಗಾಂವ್ ದಲ್ಲಿ ಏಳನೇ ಗ್ರಾಮ ವಾಸ್ತವ್ಯ ಮಾಡಿದ್ದು, ಜನರ ಕಷ್ಟಗಳು ಅರಿತುಕೊಳ್ಳಲು ಮತ್ತು ಅವುಗಳ ಪರಿಹಾರಕ್ಕಾಗಿ ರಾಜ್ಯದಲ್ಲಿ ಹೊಸಯೋಜನೆ ಜಾರಿಗೆ ತರಲು ಸಾಧ್ಯವಾಗುತ್ತಿದೆ. ಹಾಗಾಗಿ ಗ್ರಾಮ ವಾಸ್ತವ್ಯ ನನಗೆ ಪಾಠ ಶಾಲೆ ಆಗಿದ್ದು, ಮುಂದಿನ ವಾಸ್ತವ್ಯದಲ್ಲಿ ಮತ್ತಷ್ಟು ಸುಧಾರಣೆಗೆ ಯೋಜಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ: ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ
ರಾಜ್ಯದಲ್ಲಿ 18 ಸಾವಿರಕ್ಕೂ ಹೆಚ್ಚು ಬಂಜಾರಾ ತಾಂಡಾ ಮತ್ತು ಕುರುಬರಹಟ್ಟಿಗಳನ್ನು ಗುರುತಿಸಲಾಗಿದ್ದು, ಬೀದರ ಜಿಲ್ಲೆಯ 98 ಸೇರಿ ಈಗಾಗಲೇ 800 ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದೆ. ಇನ್ನುಳಿದ ಪ್ರದೇಶಗಳನ್ನು ಸಹ ಕಂದಾಯ ವ್ಯಾಪ್ತಿಗೆ ಸೇರಿಸಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.
ನಾನು ಈಗಾಗಲೇ ವಾಸ್ತವ್ಯಮಾಡಿದ 7 ಗ್ರಾಮಗಳಿಗೆ ಅಭಿವೃದ್ಧಿ ಕಾಮಗಾರಿಗಳ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರೂ. ಘೋಷಣೆ ಮಾಡಿದ್ದು, ಅನುದಾನದ ಸದ್ಬಳಕೆ ಸಂಬಂಧಿಸಿದಂತೆ ನಾನೇ ಖುದ್ದಾಗಿ ಸೂಪರವೈಸ್ ಮಾಡುತ್ತೇನೆ ಎಂದು ಹೇಳಿದ ಸಚಿವ ಅಶೋಕ, ಜಿಲ್ಲೆಯ ವಡಗಾಂವ್ ನಲ್ಲಿ ಜರುಗಿದ ಗ್ರಾಮ ವಾಸ್ತವ್ಯದಲ್ಲಿ 2400ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸ್ಥಳದಲ್ಲೆ ಸೌಲತ್ತು ವಿತರಣೆ ಮಾಡಲಾಗಿದೆ. ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಅಧಿಕಾರಿಗಳಿಗೆ ಚುರುಕು ಮೂಡಿಸಿದ್ದೇನೆ. ನಿರ್ಲಕ್ಷ ಮತ್ತು ವಿಳಂಬ ಮಾಡುವವರಿಗೆ ಬೇರೆಡೆ ಎತ್ತಂಗಡಿ ಮಾಡುವ ಎಚ್ಚರಿಕೆ ನೀಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.