ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಸ್ಮರಣೆ ಅಗತ್ಯ : ನಳಿನ್ ಕುಮಾರ್
Team Udayavani, May 29, 2022, 12:52 AM IST
ಮಂಗಳೂರು : ಮಹಾತ್ಮಾ ಗಾಂಧೀಜಿ ಅವರ ಅಹಿಂಸೆ ಹಾಗೂ ಕ್ರಾಂತಿಕಾರಿಗಳು ನಡೆಸಿದ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಈ ಹೋರಾಟಗಳಲ್ಲಿ ಬಲಿದಾನಗೈದ ಸಹಸ್ರಾರು ಮಂದಿಯನ್ನು ಸ್ಮರಿಸಿಕೊಳ್ಳುವ ಅಗತ್ಯವಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಪುರಭವನದಲ್ಲಿ ಶನಿವಾರ ಆಯೋಜಿಸಿದ “ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮೊಘಲರು, ಬ್ರಿಟಿಷರು ಆಳಿದ ಈ ನೆಲದ ಸ್ವಾತಂತ್ರ್ಯಕ್ಕಾಗಿ ಸುಮಾರು ಅನೇಕ ವರ್ಷಗಳ ಹೋರಾಟ ನಡೆದಿದೆ. ಅದು ಕತ್ತಲ ಯುಗವಲ್ಲ, ಹೋರಾಟದ ಯುಗವಾಗಿತ್ತು. ಸ್ವಾತಂತ್ರÂಕ್ಕಾಗಿ ಇಲ್ಲಿನ ರಾಷ್ಟ್ರಭಕ್ತರು ನಿರಂತರವಾಗಿ ಹೋರಾಡಿದ್ದಾರೆ. ಇಂದಿನ ನಮ್ಮ ಸ್ವಾಭಿಮಾನದ ಬದುಕಿಗೆ ಅವರ ಹೋರಾಟ ಹಾಗೂ ಬಲಿದಾನವೇ ಕಾರಣ ಎಂದರು.
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ದೇಶದ ಸ್ವಾತಂತ್ರÂಕ್ಕಾಗಿ ಹೋರಾಟ ಮಾಡಿದವರು, ಬಲಿದಾನ ಮಾಡಿದವರನ್ನು ಸ್ಮರಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇತಿಹಾಸವನ್ನು ಮರೆತರೆ ನಮ್ಮನ್ನು ಇತಿಹಾಸ ಮರೆಯುತ್ತದೆ ಎಂಬುದನ್ನು ಯುವಜನತೆಗೆ ತಿಳಿಯಬೇಕು. ಸ್ವಾತಂತ್ರÂದ ಹೋರಾಟಗಾರರ ಬಗ್ಗೆ ಯುವ ಜನತೆ ಹೆಚ್ಚು ತಿಳಿದುಕೊಳ್ಳಬೇಕು. ಸುತ್ತಮುತ್ತಲಿನ ಐತಿಹಾಸಿಕ ಸ್ಥಳಗಳನ್ನು ನೋಡಬೇಕು. ನಮ್ಮ ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಸಮಾಜದಲ್ಲಿ ಸಾಮರಸ್ಯ ಕೆದಡದಂತೆ ಜೀವನ ನಡೆಸಬೇಕು ಎಂದು ತಿಳಿಸಿದರು.
ಯುವ ಪೀಳಿಗೆ ಅರಿಯಲಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ರಾಜ್ಯದ 75 ಸ್ಥಳಗಳಲ್ಲಿ ತಾಯಿ ಭಾರತಿಗೆ ಕನ್ನಡದ ಬಂಧುಗಳಿಂದ ವಿಶೇಷ ಆರತಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪೂರ್ವಜರು ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟ, ತ್ಯಾಗವನ್ನು ಯುವ ಪೀಳಿಗೆ ಅರಿಯಬೇಕು ಎಂದರು. ಮೇಯರ್ ಪ್ರೇಮಾನಂದ ಶೆಟ್ಟಿ, ಇದೊಂದು ಅರ್ಥಗರ್ಭಿತ ಕಾರ್ಯಕ್ರಮ ಎಂದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಜಗದೀಶ್ ಪೈ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರಾಧ್ಯಾಪಕ ಕೇಶವ ಬಂಗೇರ ವೇದಿಕೆಯಲ್ಲಿದ್ದರು.
ವರ್ಣರಂಜಿತ ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ವರ್ಣರಂಜಿತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಜನಪ್ರತಿನಿಧಿಗಳು, ಅಧಿಕಾರಿಗಳು, ಸ್ತ್ರೀಶಕ್ತಿ ಸಂಘಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು – ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಚೆಂಡೆ, ಕಲ್ಲಡ್ಕ ಗೊಂಬೆ, ಸ್ಯಾಕೊÕàಫೋನ್, ಡೊಳ್ಳು ಕುಣಿತ, ಕೊರಗರ ಡೊಳ್ಳು, ಕೊಂಕಣಿ ನೃತ್ಯ ಸೇರಿದಂತೆ ಹಲವು ಸಾಂಸ್ಕೃತಿಕ ಕಲಾ ಪ್ರಕಾರಗಳಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.