ಪ್ರಥಮ ಪಿಯು ಪ್ರವೇಶಕ್ಕೆ ಪರದಾಟ
ಖಾಸಗಿ ಅನುದಾನಿತ ಕಾಲೇಜುಗಳಿಗೆ 80 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅನುಮತಿ
Team Udayavani, May 29, 2022, 4:22 PM IST
ಬಾದಾಮಿ: ಸರಕಾರ ಪ್ರಥಮ ಪಿಯುಸಿ ಪ್ರವೇಶಕ್ಕೆ ಖಾಸಗಿ ಅನುದಾನಿತ ಕಾಲೇಜುಗಳಿಗೆ 80 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಿದೆ. ಇದರಿಂದ ಬಹುತೇಕ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪ್ರವೇಶಕ್ಕೆ ಪರದಾಡುವಂತಾಗಿದೆ.
ಸರಕಾರ 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 10 ಗ್ರೇಸ್ ಅಂಕ ನೀಡಿದ್ದರಿಂದ ಶೇ. 85 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದರೆ, ಇವರೆಲ್ಲರೂ ಕಲಾ ವಿಭಾಗದ ಪ್ರಥಮ ಪಿಯುಸಿಗೆ ಪ್ರವೇಶ ಸಿಗದಂತಾಗಿದೆ.
ಪ್ರವೇಶ ಸಿಗದ ವಿದ್ಯಾರ್ಥಿಗಳು ಭವಿಷ್ಯದ ಚಿಂತೆ ಎದುರಾಗಿದೆ. ಖಾಸಗಿ ಕಾಲೇಜುಗಳು 80ಕ್ಕಿಂತ ಹೆಚ್ಚುವರಿಯಾಗಿ 20ವಿದ್ಯಾರ್ಥಿಗಳ ಪ್ರವೇಶಕ್ಕೆ ಸರಕಾರದಿಂದ ಅನುಮತಿ ಪಡೆಯಲು ಸಮಯಾವಕಾಶವಿತ್ತು. ಆದರೆ, ಅದರ ದಿನಾಂಕವೂ ಸಹಿತ ಮುಗಿದಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಲ್ಲದೇ ಪ್ರತಿ ವರ್ಷ ಒಂದು ವರ್ಗಕ್ಕೆ 20 ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶ ಪಡೆಯುವ ನಿಯಮವನ್ನು ಇಲಾಖೆ ಮೊಟಕುಗೊಳಿಸಿದೆ. ಸರಕಾರ ಈ ಸಮಸ್ಯೆಯನ್ನು ಗಂಭಿರವಾಗಿ ಪರಿಗಣಿಸಿ ಹೆಚ್ಚುವರಿ ವರ್ಗಕ್ಕೆ ಸಲ್ಲಿಸುವ ಪ್ರಸ್ತಾವನೆಯ ದಿನಾಂಕ ವಿಸ್ತರಿಸಿ ವರ್ಗಕ್ಕೆ 20 ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳಾದ ಶಂಕ್ರಮ್ಮ ತಳವಾರ, ರಾಘು ಮೇಲಿನಮನಿ, ರವಿ, ಸಂತೋಷ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಸರಕಾರವನ್ನು ಆಗ್ರಹಿಸಿದ್ದಾರೆ.
ಒಂದು ವಿಭಾಗಕ್ಕೆ 80 ವಿದ್ಯಾರ್ಥಿಗಳು ಮಾತ್ರ ಪ್ರವೇಶ ನೀಡಬೇಕು ಎಂಬ ನಿಯಮವಿದೆ. ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳು ಪ್ರವೇಶ ಮಾಡಿಕೊಳ್ಳಬೇಕು ಎಂಬ ಆದೇಶ ಸರಕಾರದಿಂದ ಆಗುವ ನಿರೀಕ್ಷೆ ಇದೆ. ಅನುಮತಿ ನೀಡಿದರೆ ಮಾತ್ರ ಪ್ರವೇಶ ನೀಡಬೇಕು. –ರಾಮಕೃಷ್ಣ, ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ಬಾಗಲಕೋಟೆ
ಸರಕಾರದ ಆದೇಶದಂತೆ ಈಗ 80 ವಿದ್ಯಾರ್ಥಿಗಳು ಮಾತ್ರ ಪ್ರವೇಶ ನೀಡಬೇಕಿದೆ. ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಬಂ ಧಿಸಿದಂತೆ ಸರಕಾರದ ಆದೇಶದ ನಿರೀಕ್ಷೆಯಲ್ಲಿದ್ದೇವೆ. ಅನುಮತಿ ನೀಡಿದರೆ ಪ್ರವೇಶ ನೀಡುತ್ತೇವೆ. ಎ.ಆರ್. ನಾಯಕ, ಪ್ರಾಚಾರ್ಯ ಜಿ.ಎಂ. ಕೆ.ಪದವಿ ಪೂರ್ವ ಕಾಲೇಜು ಬಾದಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.